ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ ಚುನಾವಣೆ: ಶೇ.91ರಷ್ಟು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಠೇವಣಿ

|
Google Oneindia Kannada News

ಚಂಡೀಗಢ, ಜನವರಿ 20: ಮುಂಬರುವ ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೆ ನೀತಿ ಸಂಹಿತೆ ಹೇರಿಕೆ ಮಾಡಿದ ಬಳಿಕ ರಾಜ್ಯದಲ್ಲಿ ಒಟ್ಟು 3,54,075 ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಠೇವಣಿ ಮಾಡಲಾಗಿದೆ ಎಂದು ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಕರುಣಾ ರಾಜು ಬುಧವಾರ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 3,90,275 ಪರವಾನಗಿ ಪಡೆದ ಶಸ್ತ್ರಾಸ್ತ್ರಗಳ ಪೈಕಿ ಶೇ.91ರಷ್ಟು ಆಯುಧಗಳು ಪೊಲೀಸ್ ಠಾಣೆಗಳಲ್ಲಿ ಠೇವಣಿಯಾಗಿವೆ ಎಂದು ಎಸ್ ಕರುಣಾ ರಾಜು ಮಾಹಿತಿ ನೀಡಿದರು. ಈ ನಡುವೆ ಚುನಾವಣಾ ಆಯೋಗ (ಇಸಿ) ತಂಡಗಳು ಪರವಾನಗಿ ಇಲ್ಲದ 27 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ.

ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಿಸದ ಕಾಂಗ್ರೆಸ್‌: ಸುಳಿಯಲ್ಲಿ ಸಿಧು-ಚನ್ನಿಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಿಸದ ಕಾಂಗ್ರೆಸ್‌: ಸುಳಿಯಲ್ಲಿ ಸಿಧು-ಚನ್ನಿ

ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳ ಭದ್ರತಾ ಸಿಬ್ಬಂದಿ ಸೇರಿದಂತೆ ಕೆಲವು ಪರವಾನಗಿ ಪಡೆದ ಶಸ್ತ್ರಾಸ್ತ್ರಗಳನ್ನು ಹೊಂದಿರುವ ವ್ಯಕ್ತಿಗಳು ಮತ್ತು ಭದ್ರತಾ ಸಮಸ್ಯೆಗಳನ್ನು ಎದುರಿಸುತ್ತಿರುವ ಇತರ ವ್ಯಕ್ತಿಗಳು ನಿಜವಾದ ವಿನಾಯಿತಿ ಮತ್ತು ದೂರು ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಬೇಕಾಗುತ್ತದೆ ಎಂದು ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಕರುಣಾ ರಾಜು ತಿಳಿಸಿದ್ದಾರೆ.

91% licensed arms deposited in Punjab ahead of elections says Elections commission

ಎಷ್ಟು ಸೊತ್ತು ವಶಕ್ಕೆ?

ರಾಜು, ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ 46.66 ಕೋಟಿ ರೂಪಾಯಿ ಮೌಲ್ಯದ ಸೊತ್ತುಗಳನ್ನು ಜಾರಿ ನಿರ್ದೇಶಾನಲಯ ತಂಡವು ವಶಕ್ಕೆ ಪಡೆದುಕೊಂಡಿದೆ. ಈ ಬಗ್ಗೆ ಅಧಿಕ ಮಾಹಿತಿ ನೀಡಿದ ಪಂಜಾಬ್ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಎಸ್ ಕರುಣಾ ರಾಜು, "ಕಣ್ಗಾವಲು ತಂಡಗಳು 2 ಕೋಟಿ ರೂಪಾಯಿ ಮೌಲ್ಯದ 6.6 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿವೆ. ಜಾರಿ ನಿರ್ದೇಶಾನಲಯ ವಿಭಾಗವು 44.49 ಕೋಟಿ ರೂಪಾಯಿ ಮೊತ್ತದ ಸೈಕೋಟ್ರೋಪಿಕ್ ಡ್ರಗ್‌ಗಳನ್ನು ವಶಪಡಿಸಿಕೊಂಡಿದೆ. 1.74 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದೆ," ಎಂದು ತಿಳಿಸಿದರು.

ಪಂಜಾಬ್‌ ಚುನಾವಣೆ: ರೈತರ ಪಕ್ಷದಿಂದ ಮತ್ತೆ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಪಂಜಾಬ್‌ ಚುನಾವಣೆ: ರೈತರ ಪಕ್ಷದಿಂದ ಮತ್ತೆ 17 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

1,088 ದುರ್ಬಲ ಕುಗ್ರಾಮಗಳನ್ನು ಗುರುತಿಸಲಾಗಿದೆ ಎಂದು ಸಿಇಒ ಹೇಳಿದರು. ಅಲ್ಲದೆ, 2,376 ವ್ಯಕ್ತಿಗಳು ಚುನಾವಣಾ ಸಂದರ್ಭದಲ್ಲಿ ಯಾವುದಾದರೂ ದುಷ್ಕೃತ್ಯ ಮಾಡುವ ಸಾಧ್ಯತೆ ಹಿನ್ನೆಲೆ ಅವರನ್ನು ಗುರುತಿಸಲಾಗಿದೆ. ಈ ವ್ಯಕ್ತಿಗಳಲ್ಲಿ ಈಗಾಗಲೇ 1,129 ಜನರ ವಿರುದ್ಧ ಈಗಾಗಲೇ ಕ್ರಮವನ್ನು ಪ್ರಾರಂಭ ಮಾಡಲಾಗಿದೆ. ಉಳಿದವರನ್ನು ಸಹ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 1,088 ದುರ್ಬಲ ಕುಗ್ರಾಮಗಳಿವೆ ಎಂದು ಸಿಇಒ ಹೇಳಿದರು. 2,221 ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಲಾಗಿದ್ದು, 191 ಪ್ರಕರಣಗಳಲ್ಲಿ ಮರಣದಂಡನೆ ಪ್ರಕ್ರಿಯೆಯಲ್ಲಿದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)

English summary
91% licensed arms deposited in Punjab ahead of elections says Elections commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X