ಹತ್ರಾಸ್ ಬೆನ್ನಲ್ಲೇ ಹರಿಯಾಣದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

ಚಂಡೀಘರ್, ಅಕ್ಟೋಬರ್.01: ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ದಲಿತ ಯುವತಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಘಟನೆ ಬೆನ್ನಲ್ಲೇ ಹರಿಯಾಣದಲ್ಲೂ ಅಂಥದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

ಹರಿಯಾಣದ ಫರಿದಾಬಾದ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ 25 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರ ನಡೆಸಿದ್ದಾನೆ. ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಫರಿದಾಬಾದ್ ಎಸಿಪಿ ಧರ್ಣಾ ಯಾದವ್ ಮಾಹಿತಿ ನೀಡಿದ್ದಾರೆ.

ಅತ್ಯಾಚಾರಕ್ಕೆ ಒಳಗಾದ ಅಪ್ರಾಪ್ತ ಬಾಲಕಿಯು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಕಳೆದ ರಾತ್ರಿ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಆರೋಗ್ಯಸ್ಥಿತಿಯು ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

A 25-Year-Old Man Raped On A Minor Girl In Faridabad

ಉತ್ತರ ಪ್ರದೇಶದ ಹತ್ರಾಸ್ ಅತ್ಯಾಚಾರ ಪ್ರಕರಣ:

ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ 19 ವರ್ಷದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ. 'ನಿರ್ದಯಿ ಸರ್ಕಾರದಿಂದ ಅಮಾಯಕ ಹೆಣ್ಣು ಮಗಳ ಹತ್ಯೆ'ಯಾಗಿದೆ ಎಂದು ಟೀಕಿಸಿದ್ದಾರೆ. ಸಪ್ಟೆಂಬರ್.19ರಂದು ಹುಲ್ಲು ಕತ್ತರಿಸುತ್ತಿದ್ದ ಯುವತಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ನಡೆಸಿದ್ದರು. ಇಷ್ಟಕ್ಕೆ ಸುಮ್ಮನಾಗದೇ ಯುವತಿಯ ಕತ್ತು ಹಿಸುಕಿ, ನಾಲಗೆಯನ್ನು ಕತ್ತರಿಸುವ ಮೂಲಕ ಕ್ರೌರ್ಯ ಮೆರೆದಿದ್ದರು. ಎರಡು ವಾರ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ದಲಿತ ಯುವತಿ ಮಂಗಳವಾರ ನವದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆದಲ್ಲಿ ಕೊನೆಯುಸಿರೆಳೆದಿದ್ದಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+