ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್‌ನದ್ದು ಯೂಸ್ ಆ್ಯಂಡ್ ಥ್ರೋ ಪಾಲಿಸಿ: ರಾಘವ್ ಚಡ್ಡಾ

|
Google Oneindia Kannada News

ಚಂಡೀಗಢ, ಜನವರಿ 27: ಕಾಂಗ್ರೆಸ್ ಪಕ್ಷವು ಹೇಗೆ ಯೂಸ್ ಆ್ಯಂಡ್ ಥ್ರೋ ಪಾಲಿಸಿಯನ್ನು ಅನುಸರಿಸುತ್ತಿದೆ ಎಂದು ಹೇಳುವ ಮೂಲಕ ಆಮ್ ಆದ್ಮಿ ಪಕ್ಷವು ಕಾಂಗ್ರೆಸ್‌ ಅನ್ನು ತರಾಟೆಗೆ ತೆಗೆದುಕೊಂಡಿದೆ.

ಎಎಪಿ ಮುಖಂಡ ರಾಘವ್ ಚಡ್ಡಾ ಮಾತನಾಡಿ, ಮುಂಬರುವ ಪಂಜಾಬ್ ಚುನಾವಣೆಗೆ ಪಕ್ಷವು ಹತ್ತು ನಾಯಕರ ಸಂಬಂಧಿಕರಿಗೆ ಟಿಕೆಟ್ ನೀಡಿದೆ ಆದರೆ ಸಿಎಂ ಚನ್ನಿ ಅವರ ಸ್ವಂತ ಸಹೋದರನಿಗೆ ಟಿಕೆಟ್ ನಿರಾಕರಿಸಿದೆ ಎಂದು ಹೇಳಿದರು.

ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಬಗ್ಗೆ ಚನ್ನಿ ಹೀಗೆ ಹೇಳೋದಾ!ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಬಗ್ಗೆ ಚನ್ನಿ ಹೀಗೆ ಹೇಳೋದಾ!

ಇದಕ್ಕೂ ಮುನ್ನ ಅಕ್ರಮ ಮರಳುದಂಧೆಗೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು.

AAPs Raghav Chadha Takes Jibe At Punjab CM; Congress Has Use & Throw Policy For Channi

ಈ ಕುರಿತು ಸೋಮವಾರ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರಿಗೆ ಪತ್ರವನ್ನು ಸಲ್ಲಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ವಿಷಯದಲ್ಲಿ ತಕ್ಷಣವೇ ಮಧ್ಯ ಪ್ರವೇಶಿಸುವಂತೆ ಕೋರಿ ಪತ್ರ ಬರೆದಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 20ರಂದು ನಡೆಯಲಿದೆ. ಜನವರಿ 25ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿರುತ್ತದೆ.

ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.

ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು.

English summary
The Aam Aadmi Party (AAP) on Wednesday took a fresh dig at Punjab Chief Minister Charanjit Singh Channi talking about how the Congress party had a 'use and throw policy' for him.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X