ಪಂಜಾಬ್‌ ಚುನಾವಣೆಗೂ ಮುನ್ನ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ

ನವದೆಹಲಿ, ಜನವರಿ 10: ನಟ ಸೋನು ಸೂದ್‌ರ ಸಹೋದರಿ ಮಾಳವಿಕಾ ಸೂದ್‌ ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದು ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಕೊರೊನಾ ವೈರಸ್‌ ಸಂದರ್ಭದಲ್ಲಿ ತಾನು ಮಾಡಿದ ಸಮಾಜ ಸೇವೆ ಮೂಲಕವೇ ಹೆಸರುವಾಸಿಯಾದ ನಟ ಸೋನು ಸೂದ್‌, ತಮ್ಮ ಸಹೋದರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಇನ್ನು ಕಾಂಗ್ರೆಸ್‌ನ ಪಂಜಾಬ್ ಘಟಕದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ಚುನಾವಣೆಗೆ ಮುಂಚಿತವಾಗಿ ನಡೆದ ಈ ಬೆಳವಣಿಗೆಯನ್ನು "ಗೇಮ್ ಚೇಂಜರ್" ಎಂದು ಬಣ್ಣಿಸಿದ್ದಾರೆ. ಇನ್ನು ತಾನು ಕಾಂಗ್ರೆಸ್‌ ಸೇರ್ಪಡೆ ಆಗಿರುವ ಬಗ್ಗೆ ಮಾತನಾಡಿದ ಮಾಳವಿಕಾ ಸೂದ್, "ಜನಸೇವೆಗಾಗಿ ತನ್ನನ್ನು ತಾನು ಅರ್ಪಿಸಿಕೊಳ್ಳಲು ರಾಜಕೀಯ ಧುಮುಕಿದ್ದೇನೆ," ಎಂದು ತಿಳಿಸಿದ್ದಾರೆ.

ಮಾಳವಿಕಾ ಸೂದ್ ರಾಜ್ಯದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮತ್ತು ಕಾಂಗ್ರೆಸ್‌ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. "ಸೋನು ಸೂದ್ ಮಾನವೀಯತೆ ಮತ್ತು ದಯೆಯಿಂದ ಪ್ರಪಂಚದಾದ್ಯಂತ ಹೆಸರುವಾಸಿಯಾಗಿದ್ದಾರೆ. ಇಂದು ಆ ಕುಟುಂಬದ ಸದಸ್ಯರೊಬ್ಬರು ನಮ್ಮೊಂದಿಗೆ ಸೇರುತ್ತಿದ್ದಾರೆ. ಆಕೆ ವಿದ್ಯಾವಂತ ಮಹಿಳೆ," ಎಂದು ನವಜೋತ್ ಸಿಂಗ್ ಸಿಧು ಹೇಳಿದ್ದಾರೆ. ಇನ್ನು "ಪಕ್ಷದ ಮುಖ್ಯಸ್ಥರು ಮತ್ತು ಮುಖ್ಯಮಂತ್ರಿ ಇಬ್ಬರೂ ಯಾರೊಬ್ಬರ ಮನೆಗೆ ಗೌರವವನ್ನು ನೀಡಲು ಹೋಗಿದ್ದು ಬಹಳ ಅಪರೂಪ. ಅದಕ್ಕೆ ಇವರು ಅರ್ಹರಾಗಿದ್ದಾರೆ," ಎಂದು ಕೂಡಾ ಸಿದ್ಧು ಹೇಳಿದ್ದಾರೆ.

Actor Sonu Soods Sister Joins Congress Ahead of Punjab poll

ಇನ್ನು ಮಾಳವಿಕಾ ಸೂದ್ ಕಾಂಗ್ರೆಸ್ ಸೇರುತ್ತಿರುವುದನ್ನು ಉಲ್ಲೇಖಿಸಿದ ಸಿಧು, "ಕ್ರಿಕೆಟ್ ಜಗತ್ತಿನಲ್ಲಿ ಇದನ್ನು ಗೇಮ್ ಚೇಂಜರ್ ಎಂದು ಕರೆಯಲಾಗುತ್ತದೆ," ಎಂದು ಬಣ್ಣಿಸಿದ್ದಾರೆ. "ಆಕೆ ಯುವತಿ ಹಾಗೂ ವಿದ್ಯಾವಂತ ಮಹಿಳೆಯಾಗಿದ್ದು, ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಶಿಕ್ಷಣ ಆಕೆಯ ಮುಂದಿನ ಜೀವನಕ್ಕೆ ಸಹಕಾರಿಯಾಗಲಿದೆ," ಎಂದಿದ್ದಾರೆ.

ಪಂಜಾಬ್‌ನ ಮೋಗಾ ಜಿಲ್ಲೆಯ ಸೂದ್ ನಿವಾಸದಲ್ಲಿ ಕಾಂಗ್ರೆಸ್‌ಗೆ ಮಾಳವಿಕಾ ಸೂದ್‌ ಸೇರ್ಪಡೆ ಆಗಿದ್ದಾರೆ. ಕಳೆದ ವರ್ಷ ನವೆಂಬರ್‌ನಲ್ಲಿ ನಟ ತನ್ನ ಸಹೋದರಿ ರಾಜಕೀಯಕ್ಕೆ ಸೇರುವುದಾಗಿ ಹೇಳಿದ್ದರು. ಜನರ ಸಂಕಷ್ಟದಲ್ಲಿ ಕೈಹಿಡಿದ ಸೋನು ಸೂದ್ ಮುಂಬರುವ ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆನ್ನುವ ಹೇಳಿಕೆಗಳು ದಟ್ಟವಾಗಿದ್ದವು. ಇದರ ಬೆನ್ನಲ್ಲೇ ಸದ್ಯ ಸೋನು ಸೂದ್ ತಮ್ಮ ಸಹೋದರಿ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಂದು ಘೋಷಿಸಿದ್ದರು.

ಪಂಜಾಬ್‌ ಚುನಾವಣೆ

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. 2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, ಕಾಂಗ್ರೆಸ್ 77 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಸಂಪೂರ್ಣ ಬಹುಮತವನ್ನು ಗಳಿಸಿದ್ದು ಈ ಮೂಲಕ 10 ವರ್ಷಗಳ ನಂತರ ಎಸ್‌ಎಡಿ-ಬಿಜೆಪಿ ಸರ್ಕಾರವನ್ನು ಕೆಡವಿತು. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷ 20 ಸ್ಥಾನಗಳನ್ನು ಗೆದ್ದು ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಕೇವಲ 15 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಬಿಜೆಪಿ 3 ಸ್ಥಾನಗಳನ್ನು ಪಡೆದುಕೊಂಡಿತ್ತು. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+