• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಫ್ಘಾನ್ ಬಿಕ್ಕಟ್ಟು ಭದ್ರತೆಯ ಪ್ರಶ್ನೆ ಹುಟ್ಟುಹಾಕಿದೆ; ರಾಜನಾಥ್ ಸಿಂಗ್

By ಒನ್‌ಇಂಡಿಯಾ ಡೆಸ್ಕ್‌
|
Google Oneindia Kannada News

ಚಂಡೀಗಢ, ಆಗಸ್ಟ್‌ 30: ಅಫ್ಘಾನಿಸ್ತಾನದಲ್ಲಿನ ಪ್ರಸ್ತುತ ಪರಿಸ್ಥಿತಿ ಭ್ರದತೆ ಕುರಿತು ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಆದರೆ ಕೇಂದ್ರ ಸರ್ಕಾರ ಯಾವುದೇ ಪರಿಸ್ಥಿತಿಯನ್ನೂ ಸಮರ್ಥವಾಗಿ ನಿಭಾಯಿಸಬಲ್ಲದ್ದಾಗಿದೆ ಹಾಗೂ ಕೇಂದ್ರ ಎಚ್ಚರಿಕೆಯಿಂದಿದೆ ಎಂದು ಹೇಳಿದ್ದಾರೆ.

ಯಾವುದೇ ದೇಶವಿರೋಧಿ ಪಡೆಗಳು ಭಾರತದಲ್ಲಿ ಭಯೋತ್ಪಾದನೆಗೆ ಪ್ರಚೋದನೆ ನೀಡಲು ಸಾಧ್ಯವಿಲ್ಲ. ಅಫ್ಘಾನಿಸ್ತಾನದಲ್ಲಿನ ಬೆಳವಣಿಗೆಗಳನ್ನೇ ಅವಕಾಶವಾಗಿ ತೆಗೆದುಕೊಂಡು ಭಾರತದಲ್ಲಿ ಅಹಿತಕರ ಘಟನೆಗಳು ಸೃಷ್ಟಿಯಾಗಲು ಸರ್ಕಾರ ಬಿಡುವುದಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಭದ್ರತೆ ಸಂಬಂಧ ಪಂಜಾಬ್ ಯೂನಿವರ್ಸಿಟಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಅವರು ಮಾತನಾಡಿದರು.

ನಮ್ಮ ನೆರೆಯ ಅಫ್ಘಾನಿಸ್ತಾನದಲ್ಲಿ ಏನು ನಡೆಯುತ್ತಿದೆಯೋ ಆ ಬೆಳವಣಿಗೆ ರಾಷ್ಟ್ರದ ಭದ್ರತೆ ಸಂಬಂಧ ಹೊಸ ಪ್ರಶ್ನೆ ಹುಟ್ಟುಹಾಕಿದೆ. ಅಲ್ಲಿನ ಬೆಳವಣಿಗೆಗಳ ಕುರಿತು ನಮ್ಮ ಸರ್ಕಾರ ಕಣ್ಣಿಟ್ಟಿದೆ.

ಭಾರತೀಯರ ರಕ್ಷಣೆ ಜೊತೆಗೆ, ನಮ್ಮ ಸರ್ಕಾರ ಗಡಿಗಳಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಿದೆ. ಇದೇ ಪರಿಸ್ಥಿತಿಯ ಪ್ರಯೋಜನ ಪಡೆದುಕೊಂಡು ಗಡಿಗಳಲ್ಲಿ ಭಯೋತ್ಪಾದನೆಗೆ ಕೆಲವರು ಪ್ರಯತ್ನಿಸುವ ಸಾಧ್ಯತೆಯಿದ್ದು, ಸರ್ಕಾರ ಕಟ್ಟೆಚ್ಚರ ವಹಿಸಿದೆ ಎಂದು ತಿಳಿಸಿದೆ.

'ಸ್ಥಳಾಂತರ ಕಾರ್ಯ ಮುಂದುವರಿಕೆಗೆ ಅವಕಾಶ ನೀಡಲು ತಾಲಿಬಾನ್‌ ಸಮ್ಮತಿ': 100 ರಾಷ್ಟ್ರಗಳ ಗುಂಪು'ಸ್ಥಳಾಂತರ ಕಾರ್ಯ ಮುಂದುವರಿಕೆಗೆ ಅವಕಾಶ ನೀಡಲು ತಾಲಿಬಾನ್‌ ಸಮ್ಮತಿ': 100 ರಾಷ್ಟ್ರಗಳ ಗುಂಪು

ರಾಷ್ಟ್ರೀಯ ಭದ್ರತೆ ಸಂಬಂಧ ನಾವು ಅತಿ ಹೆಚ್ಚು ಕಾಳಜಿ ಹಾಗೂ ಸವಾಲನ್ನು ಹೊಂದಿದ್ದೇವೆ. ಮೋದಿ ಬೆಂಬಲಿತ ಸರ್ಕಾರ ಈ ಸವಾಲುಗಳನ್ನು ಮೆಟ್ಟಿ ನಿಲ್ಲಲು ಸಜ್ಜಾಗಿದೆ ಎಂದು ಹೇಳಿದರು.

ತಾಲಿಬಾನ್‌ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದುಕೊಂಡ ಬಳಿಕ ಭಾರತದ ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಗಳಿಗೆ ಎದುರಾಗಿರುವ ಸಮಸ್ಯೆಯ ಬಗ್ಗೆಯೂ ಪ್ರಶ್ನೆ ಆರಂಭವಾಗಿದೆ. 'ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯು ನಮ್ಮ ಹಿಡಿತದಲ್ಲಿದೆ ಹಾಗೂ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದುಕೊಂಡ ತಾಲಿಬಾನ್‌ ನೆರವಿನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ದಾಳಿ ನಡೆಯಲಿದೆ ಎಂಬ ಬಗ್ಗೆ ಯಾವುದೇ ಆತಂಕ ಬೇಡ,' ಎಂದು ಸೇನೆ ಸ್ಪಷ್ಟನೆ ನೀಡಿದೆ.

Afghan Crisis Raises Security Questions Says Rajnath Singh

ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್‌, "ಕಾಶ್ಮೀರ ವಿಚಾರ ಎರಡು ದೇಶಗಳಿಗೆ ಬಿಟ್ಟ ವಿಚಾರ. ಈ ವಿಚಾರದಲ್ಲಿ ಭಾರತ ಹಾಗೂ ಪಾಕಿಸ್ತಾನ ಕುಳಿತು ಮಾತನಾಡಿಕೊಂಡು ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿ," ಎಂದು ಹೇಳಿದ್ದಾರೆ. ಹಾಗೆಯೇ "ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ. ಆದರೆ ಎರಡು ರಾಷ್ಟ್ರಗಳ ವಿಚಾರದಲ್ಲಿ ನಾವು ತಲೆ ಹಾಕುವುದಿಲ್ಲ," ಎಂದು ಸ್ಪಷ್ಟನೆ ನೀಡಿದ್ದಾರೆ.

ಶನಿವಾರ ಭಾರತ-ಅಫ್ಘಾನ್ ನಡುವಿನ ಕುರಿತು ಮಾತನಾಡಿದ್ದ ವಕ್ತಾರ, ಭಾರತ ಸೇರಿದಂತೆ ಎಲ್ಲಾ ದೇಶಗಳೊಂದಿಗೂ ನಾವು ಉತ್ತಮ ಬಾಂಧವ್ಯದಲ್ಲಿರುವುದನ್ನು ಬಯಸುತ್ತೇವೆ. ಆದ್ದರಿಂದ ಭಾರತ ಅಫ್ಘಾನ್ ಜನರ ಹಿತಾಸಕ್ತಿಯ ದೃಷ್ಟಿಯಿಂದ ತನ್ನ ನೀತಿಯನ್ನು ರೂಪಿಸಲಿ ಎಂಬುದು ನಮ್ಮ ಆಶಯವಾಗಿದೆ ಎಂದಿದ್ದರು.

'ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ನಮ್ಮ ಹಿಡಿತದಲ್ಲಿದೆ, ತಾಲಿಬಾನ್‌ ಭಯ ಬೇಡ': ಸೇನೆ'ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಭದ್ರತೆ ನಮ್ಮ ಹಿಡಿತದಲ್ಲಿದೆ, ತಾಲಿಬಾನ್‌ ಭಯ ಬೇಡ': ಸೇನೆ

ಆಗಸ್ಟ್‌ 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆಯಿತು. ಎರಡು ದಶಕಗಳ ನಂತರ ಅಫ್ಘಾನ್‌ನಿಂದ ಅಮೆರಿಕ ತನ್ನ ಸೇನಾ ಪಡೆಯನ್ನು ಹಿಂದಕ್ಕೆ ಕರೆಸಿಕೊಳ್ಳುತ್ತಿದ್ದಂತೆ ತಾಲಿಬಾನಿಗಳು ಆಕ್ರಮಣ ಮಾಡಿ ಅಫ್ಘಾನಿಸ್ತಾನನ್ನು ವಶಪಡಿಸಿಕೊಂಡಿದ್ದಾರೆ. ತಾಲಿಬಾನಿಗಳ ಆಕ್ರಮಣ ಆರಂಭವಾಗುತ್ತಿದ್ದಂತೆ ಎಲ್ಲೆಲ್ಲೂ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಹಲವು ದೇಶಗಳು ಅಫ್ಘಾನಿಸ್ತಾನದಲ್ಲಿರುವ ತಮ್ಮ ಜನರು ಹಾಗೂ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುತ್ತಿವೆ. ತಾಲಿಬಾನ್ ಕ್ರೌರ್ಯಕ್ಕೆ ನಲುಗಿದ ಸಾವಿರಾರು ಪ್ರಜೆಗಳು ದೇಶ ತೊರೆದು ಹೋಗುವುದಕ್ಕಾಗಿ ಹಾತೊರೆಯುತ್ತಿದ್ದಾರೆ. ಸಾವಿರಾರು ಮಂದಿ ವಿಮಾನ ನಿಲ್ದಾಣದಲ್ಲಿ ನೆರೆದಿರುವುದನ್ನು ಗುರಿಯಾಗಿಸಿಕೊಂಡ ಉಗ್ರರು ಈ ಬಾಂಬ್ ಸ್ಫೋಟ ನಡೆಸಿದ್ದಾರೆ. ಅಮಾಯಕ ಜನರು ಪ್ರಾಣ ಕಳೆದುಕೊಂಡಿದ್ದಾರೆ.

English summary
The current happenings in Afghanistan have raised new security questions says Defence minister Rajnath Singh
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X