ಅರವಿಂದ್ ಕೇಜ್ರಿವಾಲ್‌ರನ್ನು ಸುಳ್ಳುಗಾರ ಎಂದು ಕರೆದ ಚನ್ನಿ
ಚಂಡೀಗಢ, ಫೆಬ್ರವರಿ 21: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್‌ರನ್ನು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಸುಳ್ಳುಗಾರ ಎಂದು ಕರೆದಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ, ದೊಡ್ಡ ದೊಡ್ಡ ಸುಳ್ಳುಗಳನ್ನೇ ಹೇಳುತ್ತಾರೆ. ಕೆಲವೊಮ್ಮೆ ಅವರು ನೀಡಿದ ಹೇಳಿಕೆಗಳನ್ನೇ ತಿರುಗಿಸುತ್ತಾರೆ. ಮತ್ತೆ ಕೆಲವೊಮ್ಮೆ ಕ್ಷಮೆಯಾಚಿಸುತ್ತಾರೆ ಎಂದಿದ್ದಾರೆ.
ಇದೇ ವೇಳೆ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಅವರು ಸ್ಪರ್ಧಿಸುತ್ತಿರುವ ಎರಡೂ ಸ್ಥಾನಗಳಲ್ಲಿ ಉತ್ತಮ ಅಂತರದಿಂದ ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ ಮತ್ತು ಅವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯಾವುದೇ ಬದಲಾವಣೆಯನ್ನು ತರುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬದಲಿಗೆ ಪಂಜಾಬ್‍ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಯಾವುದೇ ಬದಲಾವಣೆಯಾಗುವುದಿಲ್ಲ, ಏಕೆಂದರೆ ಅವರು ಎಲ್ಲಾ ಕಡೆಯಿಂದ ತಿರಸ್ಕರಿಸಲ್ಪಟ್ಟ ರಾಜಕೀಯ ನಾಯಕರನ್ನು ಹೊಂದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಕ್ರಾಂತಿಕಾರಿಯೂ ಅಲ್ಲ ಅಥವಾ ಭಗತ್ ಸಿಂಗ್ ಶಿಷ್ಯರೂ ಅಲ್ಲ ಎಂದು ಕಿಡಿಕಾರಿದ್ದಾರೆ. ಖಲಿಸ್ತಾನ್ ಮತ್ತು ಖಲಿಸ್ತಾನಿಗಳೊಂದಿಗಿನ ಅರವಿಂದ್ ಕೇಜ್ರಿವಾಲ್ ಸಂಪರ್ಕ ಹೊಂದಿರುವುದರಿಂದ ಪಂಜಾಬ್‍ಗೆ ಮಾರಕವಾಗಿದೆ ಎಂದು ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಟಾಂಗ್ ನೀಡಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಅವರು, ಕೇಜ್ರಿವಾಲ್ ತಮ್ಮ ಮೇಲಿನ ಆರೋಪಗಳನ್ನು ಸಹ ನಿರಾಕರಿಸಿಲ್ಲ. ಅವರೇ 'ನಾನು ಭಯೋತ್ಪಾದಕ' ಎಂದು ಹೇಳಿಕೊಳ್ಳುತ್ತಿದ್ದಾರೆ ಮತ್ತು ಖಲಿಸ್ತಾನ್ ಬಗ್ಗೆ ಮಾತನಾಡುತ್ತಾರೆ, ಖಲಿಸ್ತಾನಿಗಳನ್ನು ಬೆಂಬಲಿಸುತ್ತಾರೆ. ಎಲ್ಲೋ ಕೇಜ್ರಿವಾಲ್ ಅವರು ಹೊಂದಿರುವ ಈ ಲಿಂಕ್ ಪಂಜಾಬ್‍ಗೆ ಮಾರಕವಾಗಿದೆ ಎಂದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಅಥವಾ ಖಲಿಸ್ತಾನ್ ಪ್ರಧಾನಿಯಾಗಲು ಬಯಸಿದ್ದಾರೆ ಎಂಬ ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಆರೋಪದ ಬಳಿಕ ಈ ವಿಚಾರದ ಬಗ್ಗೆ ಭಾರೀ ಚರ್ಚೆ ಆರಂಭವಾಯಿತು.
ಅರವಿಂದ್ ಕೇಜ್ರಿವಾಲ್ ಒಬ್ಬ ಭಯೋತ್ಪಾದಕ ಎಂದು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಟೀಕಿಸಿದ್ದರು. ಅದಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳ ನಾಯಕರಿಗೆ ಈ ಭ್ರಷ್ಟರೆಲ್ಲ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವ, ವಿದ್ಯುತ್ ಸಮಸ್ಯೆಗಳನ್ನು ಸರಿಪಡಿಸುವ ವಿಶ್ವದ ಮೊದಲ ಭಯೋತ್ಪಾದಕ ನಾನು. ನಾನು ವಿಶ್ವದ ಮೊದಲ ಸಿಹಿಯಾದ ಭಯೋತ್ಪಾದಕ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಒಂದು ವೇಳೆ ನಾನು ಪ್ರತ್ಯೇಕತಾವಾದಿಗಳ ಪರ ಎಂದಿದ್ದರೆ ಪ್ರಧಾನಿ ಮೋದಿ ಅವರು ಈ ಆರೋಪಗಳನ್ನು ಏಕೆ ಸಾಬೀತುಪಡಿಸಲಿಲ್ಲ ಅಥವಾ ತನಿಖೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ.












Click it and Unblock the Notifications