Navjot Singh Sidhu: ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಧು ರಾಜೀನಾಮೆ
ಎರಡು ತಿಂಗಳಲ್ಲಿ ಒಟ್ಟು 690 ವಿಧಾನಸಭಾ ಕ್ಷೇತ್ರಗಳು ಮತದಾನವಾಗಿದ್ದು, ಯುಪಿಯಲ್ಲಿ ಗರಿಷ್ಠ (403 ಸ್ಥಾನಗಳು) ನಂತರ ಪಂಜಾಬ್ (117), ಉತ್ತರಾಖಂಡ್ (70), ಮಣಿಪುರ (60), ಮತ್ತು ಗೋವಾ (40)ದ ಮುಂದಿನ ಸರ್ಕಾರ ಯಾವುದು ಎಂದು ಮಾರ್ಚ್ 10 ರಂದು ನಿರ್ಧಾರವಾಗಲಿದೆ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ತೀವ್ರ ಮುಖಭಂಗ ಅನುಭವಿಸಿದ್ದು, ನೈತಿಕ ಹೊಣೆಹೊತ್ತು ಪಕ್ಷದ ರಾಜ್ಯಾಧ್ಯಕ್ಷ, ಮಾಜಿ ಕ್ರಿಕೆಟರ್ ನವಜ್ಯೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಗ್ಗೆ ಇನ್ನೂ ಪ್ರತಿಕ್ರಿಯಿಸಿಲ್ಲ.
ಇದಕ್ಕೂ ಇಂದು ಆರಂಭಿಕ ಟ್ರೆಂಡ್ ನಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸುತ್ತಿದ್ದಂತೆ ಚಂಡೀಗಢದ ತಮ್ಮ ನಿವಾಸದಲ್ಲಿ ಸಿಎಂ ಚರಣಜೀತ್ ಸಿಂಗ್ ಚನ್ನಿ ಅವರು ರಾಜೀನಾಮೆ ನೀಡುವ ಬಗ್ಗೆ ತಮ್ಮ ಆಪ್ತರಲ್ಲಿ ಸಮಾಲೋಚನೆ ನಡೆಸಿದ್ದರು. ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.
ಚರಣ್ ಜೀತ್ ಸಿಂಗ್ ಅಲ್ಲದೆ, ಮಾಜಿ ಸಿ ಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್, ನವಜ್ಯೋತ್ ಸಿಂಗ್ ಸೇರಿದಂತೆ ಘಟಾನುಘಟಿಗಳು ಈ ಬಾರಿ ಚುನಾವಣೆಯಲ್ಲಿ ಭಾರಿ ಮುಖಭಂಗ ಆನುಭವಿಸಿದ್ದಾರೆ.

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59.
ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?
ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.












Click it and Unblock the Notifications