ಪಂಜಾಬ್ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ ಎಂದ ಬಿಎಲ್ ಸಂತೋಷ್

ಚಂಡೀಗಢ, ಜುಲೈ 10: ಮುಂಬರಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 117 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಚಂಡೀಗಢದಲ್ಲಿ ಈ ಕುರಿತು ಮಾತನಾಡಿರುವ ಅವರು, "ಪ್ರಧಾನಿ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ತೆಗೆದುಹಾಕಲು ಎಲ್ಲಾ ಪ್ರತಿಪಕ್ಷಗಳು ತಂತ್ರಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಇನ್ನು ಬಿಜೆಪಿ ವಿಶ್ವದ ಅತಿದೊಡ್ಡ ಪಕ್ಷವಾಗಿದೆ'' ಎಂದರು.

2022ರ ಆರಂಭದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿಯ ಪಂಜಾಬ್ ಘಟಕದ ಸಭೆಯಲ್ಲಿ ಭಾಗವಹಿಸಿದ ಸಂತೋಷ್ ಪಕ್ಷದ ರಾಜ್ಯ ನಾಯಕರು ಮತ್ತು ಇತರರೊಂದಿಗೆ ಪಂಜಾಬ್ ರಾಜಕೀಯದ ಬಗ್ಗೆ ವಿವರವಾದ ಚರ್ಚೆ ನಡೆಸಿದರು.

BL Santosh

ಕೃಷಿ ಕಾನೂನುಗಳು ಸಮೃದ್ಧಿಯನ್ನು ತರುತ್ತವೆ ಎಂದು ರೈತರು ಅರಿತುಕೊಂಡಿದ್ದರಿಂದ ಇದರ ವಿರುದ್ಧದ ವಿರೋಧದ ಸುಳ್ಳು ಪ್ರಚಾರ ಶೀಘ್ರದಲ್ಲೇ ಕುಸಿಯುತ್ತದೆ ಎಂದು ಹೇಳಿದರು.

ಮೋದಿ ಯಾವಾಗಲೂ ರೈತರ ಪರವಾಗಿದ್ದಾರೆ. ಕೃಷಿ ಕ್ಷೇತ್ರದ ಹಿತಾಸಕ್ತಿಗಳು ಅವರಿಗೆ ಮತ್ತು ಅವರ ಸರ್ಕಾರಕ್ಕೆ ಪ್ರಮುಖವಾಗಿವೆ ಎಂದು ಸಂತೋಷ್ ಹೇಳಿದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಜಾರಿಗೆ ಬಂದ ಮೂರು ಕೇಂದ್ರ ಕಾನೂನುಗಳ ವಿರುದ್ಧ ಮುಖ್ಯವಾಗಿ ಪಂಜಾಬ್, ಹರ್ಯಾಣ ಮತ್ತು ಉತ್ತರ ಪ್ರದೇಶದ ರೈತರು ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಮತ್ತು ಅವುಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸುತ್ತಿದ್ದಾರೆ.

Recommended Video

      ಟೀಂ ಇಂಡಿಯಾದ 3 ಆಟಗಾರರಿಗೆ ಇದೆ ಕೊನೆ ಅವಕಾಶ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+