ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

BSF ವ್ಯಾಪ್ತಿ ವಿಸ್ತರಣೆ ಖಂಡಿಸಿ ಸುಪ್ರೀಂಕೋರ್ಟ್‌ನಲ್ಲಿ ಪಂಜಾಬ್ ಸರ್ಕಾರ ಮನವಿ

|
Google Oneindia Kannada News

ಚಂಡೀಗಢ, ಅಕ್ಟೋಬರ್ 26: ಪಂಜಾಬ್‌ನಲ್ಲಿ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಪ್ರಶ್ನಿಸಿ ಪಂಜಾಬ್ ಸರ್ಕಾರ ಸುಪ್ರೀಂಕೋರ್ಟ್‌ ಮನವಿ ಸಲ್ಲಿಸಿದೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ನಾವು ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಲಿದ್ದೇವೆ, ಪಂಜಾಬ್‌ನಲ್ಲಿ ಬಿಎಸ್‌ಎಫ್ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ನಿರ್ಧಾರದ ವಿರುದ್ಧ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಲಿದ್ದೇವೆ. ಕೇಂದ್ರದ ಈ ನಿರ್ಧಾರ ಒಕ್ಕೂಟ ವ್ಯವಸ್ಥೆ ಮೇಲಿನ ಹೊಡೆತ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ಹೇಳಿದ್ದಾರೆ.

ಬಿಎಸ್​ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಳಿಕ ಪಂಜಾಬ್ ಗಡಿಯಲ್ಲಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಬಿಎಸ್​ಎಫ್ ಅಧಿಕಾರ ವ್ಯಾಪ್ತಿ ವಿಸ್ತರಣೆ ಬಳಿಕ ಪಂಜಾಬ್ ಗಡಿಯಲ್ಲಿ 7 ಕೋಟಿ ರೂ. ಮೌಲ್ಯದ ಹೆರಾಯಿನ್ ವಶ

ಪಂಜಾಬ್ ಪಾಕಿಸ್ತಾನದೊಂದಿಗೆ 545 ಕಿ.ಮೀ ಗಡಿ ಹೊಂದಿದ್ದು, ಬಿಎಸ್‌ಎಫ್ ರಕ್ಷಣೆ ನೀಡುತ್ತಿದೆ. ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂನ ಅಂತಾರಾಷ್ಟ್ರೀಯ ಗಡಿ ಪ್ರದೇಶಗಳಲ್ಲಿ 15 ಕಿ.ಮೀ ಬದಲಿಗೆ 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ ಹಾಗೂ ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿದೆ.

BSF Jurisdiction Extension: Punjab CM Charanjit Singh Channi Says Will Move Supreme Court

ಈ ಕುರಿತು ಚರ್ಚಿಸಲು ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದಿರುವ ಚನ್ನಿ, ಬಿಜೆಪಿ ಸಭೆಯನ್ನು ಬಹಿಷ್ಕರಿಸುವುದಾಗಿ ಹೇಳಿದೆ. ಪಂಜಾಬ್ ಗಡಿ ಪ್ರದೇಶದಲ್ಲಿ ಮಾದಕವಸ್ತು ಕಳ್ಳಸಾಗಣೆ ನಡೆಯುತ್ತಿದೆ ಎಂಬ ಆರೋಪವಿದೆ, ಪಾಕಿಸ್ತಾನವು ಡ್ರೋನ್‌ಗಳನ್ನು ಬಳಸಿಕೊಂಡು ಭಾರತದ ಗಡಿ ಪ್ರದೇಶಗಳಿಗೆ ಶಸ್ತ್ರಾಸ್ತ್ರಗಳನ್ನು ಹಾಗೂ ಮಾದಕವಸ್ತುಗಳನ್ನು ಕಳುಹಿಸುತ್ತಿರುವ ಪ್ರಕರಣಗಳೂ ಬೆಳಕಿಗೆ ಬಂದಿವೆ.

ಬಿಎಸ್‌ಎಫ್‌ನ ಕಾರ್ಯಾಚರಣೆ ವ್ಯಾಪ್ತಿ ವಿಸ್ತರಣೆ ನಿರ್ಧಾರವು ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ ಎಂದು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್‌ಸಿಂಗ್ ಸಿಧು ಹೇಳಿದ್ದಾರೆ.

ಪಾಕಿಸ್ತಾನದೊಂದಿಗೆ ಗಡಿ ಹಂಚಿಕೊಂಡಿರುವ ಗುಜರಾತ್‌ನಲ್ಲಿ ಈ ಮಿತಿಯನ್ನು 80 ಕಿಮೀಯಿಂದ 50 ಕಿ.ಮೀಗೆ ಇಳಿಕೆ ಮಾಡಲಾಗಿದೆ. ರಾಜಸ್ಥಾನದಲ್ಲಿ ಈಗಿರುವ 50 ಕಿ.ಮೀ ಮಿತಿಯನ್ನೇ ಮುಂದುವರೆಸಲಾಗಿದೆ.

ರಾಜಸ್ಥಾನ ಹಾಗೂ ಪಂಜಾಬ್ ರಾಜ್ಯಗಳು ಸಹ ಪಾಕಿಸ್ತಾನದ ಜತೆ ಗಡಿ ಹಂಚಿಕೊಂಡಿದ್ದರೆ, ಅಸ್ಸಾಂ, ಬಾಂಗ್ಲಾದೇಶದೊಂದಿಗೆ ಅಂತಾರಾಷ್ಟ್ರೀಯ ಗಡಿಯನ್ನು ಹೊಂದಿದೆ.

ಗಡಿ ಭದ್ರತಾ ಪಡೆಗೆ ಪಂಜಾಬ್, ಪಶ್ಚಿಮ ಬಂಗಾಳ, ಅಸ್ಸಾಂನ ಅಂತಾರಾಷ್ಟ್ರೀಯ ಗಡಿ ಪ್ರದೇಶದಲ್ಲಿ 15 ಕಿ.ಮೀ ಬದಲಿಗೆ 50 ಕಿ.ಮೀ ಪ್ರದೇಶದ ವ್ಯಾಪ್ತಿಯಲ್ಲಿ ಶೋಧ ಕಾರ್ಯಾಚರಣೆ, ಜಪ್ತಿ, ಬಂಧನಕ್ಕೆ ಅವಕಾಶ ಕಲ್ಪಿಸಿ ಕೇಂದ್ರ ಸರ್ಕಾರ ಬಿಎಸ್‌ಎಫ್ ಕಾಯ್ದೆಗೆ ತಿದ್ದುಪಡಿ ತಂದಿದೆ.

ಪಾಕಿಸ್ತಾನದ ಜತೆ ಗಡಿ ಹಂಚಿಕೊಂಡಿರುವ ಪಂಜಾಬ್‌), ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿರುವ ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿಕಾರ್ಯನಿರ್ವಹಿಸುತ್ತಿರುವ ಭಾರತೀಯ ಗಡಿ ಭದ್ರತಾ ಪಡೆನ ಅಧಿಕಾರ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿದೆ. ಅಂದರೆ ಇದುವರೆಗೆ ಗಡಿಯಿಂದ 15 ಕಿ.ಮೀ ಒಳಗಿನ ಪ್ರದೇಶದಲ್ಲಿ ಬಿಎಸ್‌ಎಫ್‌ಯಾವುದೇ ವ್ಯಕ್ತಿಗಳನ್ನು ವಿಚಾರಣೆ ನಡೆಸುವ, ಬಂಧಿಸುವ ಅಧಿಕಾರ ಹೊಂದಿತ್ತು. ಅದನ್ನೀಗ 50 ಕಿ.ಮೀ ವಿಸ್ತರಿಸಲಾಗಿದೆ. ಜೊತೆಗೆ ಗುಜರಾತ್‌ನಲ್ಲಿ ಈ ಮಿತಿಯನ್ನು 50ರಿಂದ 80 ಕಿ.ಮೀ ಹೆಚ್ಚಿಸಲಾಗಿದೆ.

ಅಧಿಕಾರ ವ್ಯಾಪ್ತಿ ವಿಸ್ತರಣೆಯಿಂದ ದೇಶದ ಭದ್ರತೆ ಸಹಕಾರಿಯಾಗಲಿದೆ. ಗಡಿಯಲ್ಲಿ ನಡೆಯುವ ಮಾದಕ ವಸ್ತು ಕಳ್ಳಸಾಗಣೆ, ಶಸ್ತ್ರಾಸ್ತ ಕಳ್ಳಸಾಗಣೆ, ಗೋ ಕಳ್ಳಸಾಗಣೆಯಂತಹ ಪ್ರಕರಣಗಳಿಗೆ ಕಡಿವಾಣ ಹಾಕಬಹುದು ಎಂದು ಬಿಎಸ್‌ಎಫ್‌ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಸರ್ಕಾರದ ಕ್ರಮವನ್ನು ಕಾಂಗ್ರೆಸ್‌, ಟಿಎಂಸಿ ಸೇರಿದಂತೆ ಹಲವು ವಿಪಕ್ಷಗಳು ಇದು ಒಕ್ಕೂಟ ವ್ಯವಸ್ಥೆಗ್ನೆ ಧಕ್ಕೆ ತರುವ ನಿರ್ಧಾರ ಎಂದು ಟೀಕಿಸಿವೆ. ಆದರೆ ಬಿಜೆಪಿ ಮಾತ್ರ ಇದು ದೇಶದ ಭದ್ರತೆಯ ಹಿತಾಸಕ್ತಿಯಿಂದ ಕೈಗೊಂಡ ನಿರ್ಧಾರ ಎಂದು ಸ್ವಾಗತಿಸಿದೆ.

ಪಂಜಾಬ್ ಗಡಿಯಲ್ಲಿ ಬಿಎಸ್ಎಫ್ ಮತ್ತು ಪಂಜಾಬ್ ಪೊಲೀಸರ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ್ದು, 7 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡಿದೆ.

ಪಂಜಾಬ್‌ನಲ್ಲಿ ಗಡಿ ಭದ್ರತಾ ಪಡೆಯ ಅಧಿಕಾರ ವ್ಯಾಪ್ತಿ ವಿಸ್ತರಣೆಗೆ ಸಂಬಂಧಿಸಿದಂತೆ ರಾಜಕೀಯ ಬಿಕ್ಕಟ್ಟು ಎದುರಾಗಿರುವುದರ ಮಧ್ಯೆಯೇ ಬಿಎಸ್‌ಎಫ್ ಮತ್ತು ಪಂಜಾಬ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಕೋಟ್ಯಂತರ ಮೌಲ್ಯದ ಹೆರಾಯಿನ್ ವಶಕ್ಕೆ ಪಡೆದಿದ್ದಾರೆ. ಅಂತಾರಾಷ್ಟ್ರೀಯ ಗಡಿಯಿಂದ ಕೆಲವು ಕಿ.ಮೀ ದೂರದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.

Recommended Video

Meme ಆಗಿದ್ದ ಪಾಕಿಸ್ತಾನ ಅಭಿಮಾನಿ ಈಗ ಹೇಗಿದ್ದಾರೆ | Oneindia Kannada

English summary
Punjab chief minister Charanjit Singh Channi said on Monday that the state government will approach the Supreme Court against the Centre's recent move to enhance jurisdiction of the Border Security Force (BSF). Channi was speaking after an all-party meeting on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X