ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನಲ್ಲಿ 3 ಪಾಕಿಸ್ತಾನಿ ನುಸುಳುಕೋರರ ಯತ್ನ ವಿಫಲ

|
Google Oneindia Kannada News

ಚಂಡೀಗಢ, ಏಪ್ರಿಲ್ 12: ಪಂಜಾಬ್‌ನ ಪಠಾಣಕೋಟ್‌ನಲ್ಲಿ ಮೂವರು ಪಾಕಿಸ್ತಾನಿ ನುಸುಳುಕೋರರು ಭಾರತಕ್ಕೆ ಬರಲು ನಡೆಸುತ್ತಿದ್ದ ಪ್ರಯತ್ನವನ್ನು ಗಡಿ ಭದ್ರತಾ ಪಡೆ ವಿಫಲಗೊಳಿಸಿದೆ.

ಈ ಮೂವರ ಅನುಮಾನಾಸ್ಪದ ನಡೆ ಗಮನಿಸಿದ ಗಡಿ ಭದ್ರತಾ ಪಡೆಗಳು ಗುಂಡು ಹಾರಿಸಿದ್ದಾರೆ. ಏ.21 ರಂದು ರಾತ್ರಿ 10:15 ಕ್ಕೆ ಈ ಘಟನೆ ನಡೆದಿದೆ ಎಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್‌ಐಆರ್ ದಾಖಲು ಪಾಕಿಸ್ತಾನದಿಂದ ಹಾರಿಬಂದ ಪಾರಿವಾಳದ ವಿರುದ್ಧ ಎಫ್‌ಐಆರ್ ದಾಖಲು

ಪಾಕಿಸ್ತಾನ-ಭಾರತದ ನಡುವೆ ಇರುವ ಅಂತಾರಾಷ್ಟ್ರೀಯ ಗಡಿಯಿಂದ ಪ್ರವೇಶಿಸಲು ಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

BSF Thwarts Infiltration Bid Of 3 Pakistan Intruders Along IB In Punjabs Pathankot

ಪಾಕಿಸ್ತಾನದಿಂದ ಹಾರಿಬಂದಿದ್ದ ಪಾರಿವಾಳದ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪಾರಿವಾಳದ ಬಾಯಲ್ಲಿ ಬಿಳಿಯ ಕಾಗದವಿದ್ದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಪಾಕಿಸ್ತಾನದಿಂದ ಭಾರತದ ಗಡಿಯೊಳಗೆ ಒಳನುಸುಳವವರನ್ನು ಹಿಡಿದು ಪ್ರಕರಣ ದಾಖಲಿಸುವುದು ಬಿಎಸ್ ಎಫ್ ಕೆಲಸ,ಆದರೆ ಈ ಬಾರಿ ಗಡಿ ಭದ್ರತಾ ಪಡೆ ವಿಚಿತ್ರ ಆಗಂತುಕನನ್ನು ಬಂಧಿಸಿದ್ದು, ಆ ಆಗಂತುಕ ಬೇರಾರು ಅಲ್ಲ ಪಾರಿವಾಳ.

ಪಾಕಿಸ್ತಾನದಿಂದ ಭಾರತದೊಳಗೆ ಹಾರಿ ಬಂದಿರುವ ಪಾರಿವಾಳದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದ ಮೇರೆಗೆ ಎಫ್ ಐಆರ್ ದಾಖಲಿಸುವಂತೆ ಬಿಎಸ್ ಎಫ್ ಅಧಿಕಾರಿಗಳು ಒತ್ತಾಯಿಸಿದ್ದರು.

ಇದೀಗ ಪಾರಿವಾಳದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಧ್ರುವ್ ದಹಿಯಾ ಅವರು ಮಾತನಾಡಿ, ಬಿಎಸ್ಎಫ್ ಪಾರಿವಾಳದ ವಿರುದ್ಧ ಎಫ್ಐಆರ್ ನೋಂದಾಯಿಸಲು ಒತ್ತಾಯಿಸಲಾಗಿದೆ. ಪಾರಿವಾಳವು ಪಕ್ಷಿಯಾಗಿರುವುದರಿಂದ, ಅದರ ವಿರುದ್ಧ ಎಫ್‌ಐಆರ್ ದಾಖಲಿಸಬಹುದು ಎಂದು ನಾನು ಭಾವಿಸುವುದಿಲ್ಲ.

ಆದರೆ ಅವರ ಅಭಿಪ್ರಾಯಕ್ಕಾಗಿ ನಾವು ಈ ವಿಷಯವನ್ನು ನಮ್ಮ ಕಾನೂನು ತಜ್ಞರಿಗೆ ಹಸ್ತಾಂತರಿಸಿದ್ದೇವೆ ಎಂದು ಅವರು ಬುಧವಾರ ಹೇಳಿದ್ದರು. ಪಾರಿವಾಳದ ಕಾಲಿಗೆ ಟ್ಯಾಗ್ ಮಾಡಲಾದ ಸಂಖ್ಯೆಯನ್ನು ವಿಶ್ಲೇಷಿಸಲಾಗುತ್ತಿದ್ದು, ಗೂಢಚರ್ಯೆ ಯತ್ನಗಳನ್ನು ಶಂಕಿಸಲಾಗುತ್ತಿದೆ. ಗಡಿ ಪ್ರದೇಶಗಳಲ್ಲಿ ಪಾರಿವಾಳಗಳನ್ನು ಸೆರೆಹಿಡಿಯಲಾಗಿದೆ ಎಂದು ಹೇಳಿದ್ದಾರೆ.

English summary
The BSF thwarted an infiltration attempt by three Pakistani intruders along the India-Pakistan international border in Punjab's Pathankot district, officials said on Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X