Breaking News: ಪಂಜಾಬ್‌ನಲ್ಲಿ ಬಿಜೆಪಿ ಜೊತೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಮೈತ್ರಿ
ಚಂಡೀಘರ್, ಡಿಸೆಂಬರ್ 17: ಪಂಜಾಬ್ ವಿಧಾನಸಭೆ ಚುನಾವಣೆ ಘೋಷಣೆಗೂ ಪೂರ್ವದಲ್ಲೇ ಭಾರತೀಯ ಜನತಾ ಪಕ್ಷದ ಜೊತೆಗೆ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡಿದೆ.
ಶುಕ್ರವಾರದಂದು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಕೇಂದ್ರ ಸಚಿವ ಮತ್ತು ಪಂಜಾಬ್ ಉಸ್ತುವಾರಿ ಗಜೇಂದ್ರ ಸಿಂಗ್ ಭೇಟಿ ಮಾಡಿ ಮೈತ್ರಿ ಮಾತುಕತೆ ನಡೆಸಿದರು.
"ಬಿಜೆಪಿ ಜೊತೆಗಿನ ಮೈತ್ರಿ ಕುರಿತು ಅಮರೀಂದರ್ ಸಿಂಗ್ ಮಾತನಾಡಿದ್ದಾರೆ. ಈ ವಿಧಾನಸಭೆ ಚುನಾವಣೆಗೆ ನಾವು ಸಿದ್ಧರಾಗಿದ್ದು, ಗೆಲುವು ಸಾಧಿಸುವುದಕ್ಕೆ ರೆಡಿಯಾಗಿದ್ದೇವೆ. ಗೆಲುವಿನ ರಣತಂತ್ರದ ಆಧಾರದಲ್ಲಿ ಆದ್ಯತೆ ಮೇರೆಗೆ ಸೀಟು ಹಂಚಿಕೆಯನ್ನು ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಮುಂಬರುವ ಚುನಾವಣೆಯನ್ನು ನಾವು ಗೆಲ್ಲುವುದು 101ರಷ್ಟು ನಿಶ್ಚಿತ ಎಂದು," ಅಮರೀಂದರ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಏಳು ಸುತ್ತಿನ ಮಾತುಕತೆ ನಂತರ ನಿರ್ಧಾರ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯನ್ನು ಬಿಜೆಪಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಒಟ್ಟಾಗಿ ಎದುರಿಸಲಿದೆ ಎಂಬುದನ್ನು ಖಚಿತಪಡಿಸುತ್ತೇನೆ. ಈ ಮೈತ್ರಿ ಮಾತುಕತೆಗೂ ಪೂರ್ವದಲ್ಲಿ ಏಳು ಸುತ್ತಿನ ಚರ್ಚೆ ನಡೆಸಲಾಗುತ್ತೆ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮುಂದೆ ಹಲವು ವಿಷಯಗಳ ಬಗ್ಗೆ ಮತ್ತಷ್ಟು ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್ ಹೇಳಿದ್ದಾರೆ.












Click it and Unblock the Notifications