ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ಆಯ್ಕೆ

|
Google Oneindia Kannada News

ಅಮೃತಸರ್, ಸೆಪ್ಟೆಂಬರ್ 19: ಪಂಜಾಬ್ ನೂತನ ಮುಖ್ಯಮಂತ್ರಿಯಾಗಿ ಚರಂಜಿತ್ ಸಿಂಗ್ ಚನ್ನಿರನ್ನು ಆಯ್ಕೆ ಮಾಡಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆಗೆ ಭಾನುವಾರ ನಡೆಸಿದ ಚರ್ಚೆಯಲ್ಲಿ ಬಹುಪಾಲು ಕಾಂಗ್ರೆಸ್ ಶಾಸಕರು ಸುಖ್ ಜಿಂದರ್ ರಾಂಧವ ಹೆಸರನ್ನು ಸೂಚಿಸಿದ್ದರು. ಇದರ ಮಧ್ಯೆಯೂ ನಡೆದ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಚರಂಜಿತ್ ಸಿಂಗ್ ಚನ್ನಿ ಹೆಸರನ್ನು ಅಂತಿಮಗೊಳಿಸಲಾಗಿದೆ.

ನವದೆಹಲಿಯಲ್ಲಿ ಎಐಸಿಸಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ನಾಯಕಿ ಅಂಬಿಕಾ ಸೋನಿ ನೇತೃತ್ವದಲ್ಲಿ ಮಹತ್ವದ ಚರ್ಚೆ ನಡೆಸಲಾಯಿತು. ಈ ವೇಳೆ ಪಂಜಾಬ್ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿತ್ತು. ಕಾಂಗ್ರೆಸ್ ಶಾಸಕರು ಒಮ್ಮತದಿಂದ ಒಂದು ಹೆಸರನ್ನು ಸೂಚಿಸಿದ ಹಿನ್ನೆಲೆಯಲ್ಲಿ ಸುಖ್ ಜಿಂದರ್ ರಾಂಧವ ಆಯ್ಕೆ ಮಾಡಿರುವುದಾಗಿ ತಿಳಿದ್ದರು.

ಪಂಜಾಬ್ ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿ ಯಾರಿದ್ದಾರೆ ಮುಂದೆ?ಪಂಜಾಬ್ ಮುಖ್ಯಮಂತ್ರಿ ಸ್ಥಾನದ ರೇಸಿನಲ್ಲಿ ಯಾರಿದ್ದಾರೆ ಮುಂದೆ?

ರಾಜ್ಯದ ಬಹುಪಾಲು ಕಾಂಗ್ರೆಸ್ ಶಾಸಕರು ಮುಂದಿನ ಸಿಎಂ ಸ್ಥಾನಕ್ಕೆ ಸುಖ್ ಜಿಂದರ್ ರಾಂಧವ ಹೆಸರನ್ನೇ ಘೋಷಿಸಲಿದ್ದಾರೆ ಎಂದು ಎದುರು ನೋಡುತ್ತಿದ್ದರು. ಆದರೆ ಹೈಕಮಾಂಡ್ ನಾಯಕರು ತೆಗೆದುಕೊಂಡ ಅಚ್ಚರಿಯ ತೀರ್ಮಾನದ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ ಹರೀಶ್ ರಾವತ್ ಟ್ವೀಟ್ ಮಾಡಿದ್ದಾರೆ. ಚರಂಜಿತ್ ಸಿಂಗ್ ಚನ್ನಿ ಪಂಜಾಬಿನ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

Charanjit Singh Channi Elected for the post of Punjab CM

ಸಿಎಂ ಗದ್ದುಗೆ ತಿರಸ್ಕರಿಸಿದ್ದ ಅಂಬಿಕಾ ಸೋನಿ:

ಪಂಜಾಬ್ ರಾಜಕೀಯ ಬೆಳವಣಿಗೆಗಳ ಮಧ್ಯೆ ಮುಖ್ಯಮಂತ್ರಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ನೀಡಿದ ಆಫರ್ ಅನ್ನು ಹಿರಿಯ ನಾಯಕಿ ಅಂಬಿಕಾ ಸೋನಿ ನಿರಾಕರಿಸಿದ್ದಾರೆ ಎಂದು ತಿಳಿದು ಬಂದಿದೆ. ಮುಂದಿನ ಮುಖ್ಯಮಂತ್ರಿ ಸಿಖ್ ಸಮುದಾಯದ ನಾಯಕರೇ ಆಗಬೇಕು ಎನ್ನುವ ಬಗ್ಗೆ ಚರ್ಚೆ ಹೆಚ್ಚಾಗಿದೆ. ಪಂಜಾಬ್ ವಿಧಾನಸಭೆ ಚುನಾವಣೆಗೆ ಇನ್ನೇನು ಐದು ತಿಂಗಳು ಬಾಕಿ ಇರುವಂತೆ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ ನೀಡಿರುವುದು ಪಕ್ಷದ ಮಟ್ಟಿಗೆ ಹೊಸ ಸವಾಲಾಗಿದೆ. ಸುದೀರ್ಘ ಅವಧಿವರೆಗೂ ಪಕ್ಷದಲ್ಲಿ ನಡೆಯುತ್ತಿದ್ದ ಆಂತರಿಕ ವೈಮನಸ್ಸು ಈ ರೀತಿಯಾಗಿ ಅಂತ್ಯವಾಗಿದೆ.

ಪಂಜಾಬ್ ಮುಖ್ಯಮಂತ್ರಿ ಆಯ್ಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಘೋಷಣೆ ಹೊರಡಿಸುತ್ತಿದ್ದಂತೆ ಚಂಡೀಗಢದ ರಾಜಭವನದತ್ತ ಕಾಂಗ್ರೆಸ್ ನಾಯಕರು ತೆರಳಿದರು. ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ರಾಜಭವನಕ್ಕೆ ತೆರಳಿದ್ದರೆ, ಇತ್ತ ಚಂಡೀಗಢದ ಜೆಡೆಬ್ಲ್ಯು ಮ್ಯಾರಿಯಟ್ ಹೋಟೆಲ್ ನಿಂದ ರಾಜಭವನಕ್ಕೆ ಚರಂಜಿತ್ ಸಿಂಗ್ ಚನ್ನಿ ತೆರಳಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವುದಾಗಿ ಅವರು ಹೇಳಿದ್ದಾರೆ.

ಸಿಖ್ ನಾಯಕರಿಗೆ ಸಿಎಂ ಪಟ್ಟ:

ಶನಿವಾರ ನಡೆದ ರಾಜಕೀಯ ಬೆಳವಣಿಗೆಯೊಂದರಲ್ಲಿ ಪಂಜಾಬ್ ಮುಂದಿನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುವಂತೆ ಅಂಬಿಕಾ ಸೋನಿಯವರಿಗೆ ಆಫರ್ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಹೈಕಮಾಂಡ್ ನಾಯಕರು ನೀಡಿದ ಆಫರ್ ಅನ್ನು ನಿರಾಕರಿಸಿದ್ದಾರೆ. ಸಿಖ್ ಸಮುದಾಯದ ನಾಯಕನಿಗೆ ಸಿಎಂ ಪಟ್ಟವನ್ನು ಕಟ್ಟದಿದ್ದರೆ ಅದು ಮುಂದಿನ ಚುನಾವಣೆಯಲ್ಲಿ ಅಡ್ಡಪರಿಣಾಮ ಬೀರುವ ಅಪಾಯವಿದೆ ಎಂದು ಅಂಬಿಕಾ ಸೋನಿ ಕೇಂದ್ರ ನಾಯಕರಿಗೆ ತಿಳಿಸಿದ್ದಾರೆ ಎಂದು ಗೊತ್ತಾಗಿದೆ.

ಪಂಜಾಬಿನ ಕಾಂಗ್ರೆಸ್ಸಿನಲ್ಲಿ ರಾಜಕೀಯ ಬಿಕ್ಕಟ್ಟು:

ಪಂಜಾಬ್ ವಿಧಾನಸಭೆ ಚುನಾವಣೆಗೆ ಐದು ತಿಂಗಳಿಗಿಂತ ಕಡಿಮೆ ಅವಧಿ ಇರುವಾಗ ಮುಖ್ಯಮಂತ್ರಿ ಸ್ಥಾನಕ್ಕೆ ಅಮರೀಂದರ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯದಲ್ಲಿ ಅಮರೀಂದರ್ ಸಿಂಗ್ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ನಡುವಿನ ದೀರ್ಘಕಾಲಿಕ ಬಿಕ್ಕಟ್ಟು ನಿರ್ವಹಣೆಯಲ್ಲಿ ಹೈಕಮಾಂಡ್ ವಿಫಲವಾಗಿದೆ. ಆ ಮೂಲಕ ತಮ್ಮನ್ನು ಅವಮಾನಿಸಲಾಗಿದೆ ಎಂದು ಅಮರೀಂದರ್ ಸಿಂಗ್ ದೂಷಿಸಿದ್ದಾರೆ. ನವಜೋತ್ ಸಿಂಗ್ ಸಿಧು ವಿರುದ್ಧ ನಿರಂತರ ವಾಗ್ದಾಳಿ ನಡೆಸಿದ ಅವರು, ಕ್ರಿಕೆಟಿಗರೊಬ್ಬರು ರಾಜಕಾರಣಿಯಾಗಿರುವುದು ದೊಡ್ಡ ದುರಂತ ಎಂದು ಕರೆದಿದ್ದಾರೆ.

English summary
Congress Crisis Solve: Charanjit Singh Channi Elected for the post of Punjab Chief Minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X