ಪತ್ರಕರ್ತರಿಗೆ 10 ಲಕ್ಷ ರೂಪಾಯಿ ವಿಮೆ ಘೋಷಿಸಿದ ಸರ್ಕಾರ

ಚಂಡೀಘರ್, ಏಪ್ರಿಲ್.23: ಕೊರೊನಾ ವೈರಸ್ ಸೋಂಕು ಹರಡುವಿಕೆ ಮತ್ತು ಭಾರತ ಲಾಕ್ ಡೌನ್ ನಿಯಮಗಳನ್ನು ಪಾಲಿಸುವಂತೆ ದೇಶಾದ್ಯಂತ ಸಾರ್ವಜನಿಕವಾಗಿ ಪ್ರಜೆಗಳಲ್ಲಿ ಜಾಗೃತಿ ಮೂಡಿಸುವಂತಾ ಕಾರ್ಯವನ್ನು ಮಾಧ್ಯಮಗಳು ಮಾಡುತ್ತಿವೆ.

Recommended Video

      ಮುಂದೆ ಬರಲಿದೆ ಒಳ್ಳೆಯ ದಿನ,ಹೊರ ರಾಜ್ಯದ ಕನ್ನಡಿಗರಿಗೆ ಅಭಯ ನೀಡಿದ ಶಾಸಕ

      ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ವೈದ್ಯರು, ಪೊಲೀಸರಂತೆ ಪತ್ರಕರ್ತರು ಕೂಡಾ ಹಗಲಿರುಳು ಸಮಾಜದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಇದನ್ನು ಮನಗಂಡ ಹರಿಯಾಣ ಸರ್ಕಾರವು ಪ್ರತಿಯೊಬ್ಬ ಪತ್ರಕರ್ತರಿಗೆ 10 ಲಕ್ಷ ರೂಪಾಯಿ ವಿಮೆಯನ್ನು ಘೋಷಿಸಿದೆ.

      ಭಾರತ ಲಾಕ್ ಡೌನ್ ಮಧ್ಯೆಯೂ ಕೊರೊನಾ ವೈರಸ್ ಕುರಿತು ಸುದ್ದಿಗಳನ್ನು ಮಾಡುವುದಕ್ಕಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸರ್ಕಾರದಿಂದ 10 ಲಕ್ಷ ರೂಪಾಯಿ ವಿಮೆ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ.

      CM Manohar Lal Khatter Government Announce 10 Lakh Insurance Cover For Journalist

      ಮುಂಬೈ-ಚೆನ್ನೈನಲ್ಲಿ ಪತ್ರಕರ್ತರಿಗೆ ಕೊರೊನಾ ಸೋಂಕು:

      ಮಹಾರಾಷ್ಟ್ರದ ಮುಂಬೈ ಹಾಗೂ ತಮಿಳುನಾಡಿನ ಚೆನ್ನೈನಲ್ಲಿ ಕೊರೊನಾ ವೈರಸ್ ಹರಡುವಿಕೆ ಮತ್ತು ಸೋಂಕಿತರ ಬಗ್ಗೆ ವರದಿಗೆ ತೆರಳಿದ ಹಲವು ಮಂದಿ ಪತ್ರಕರ್ತರಲ್ಲಿಯೇ ಮಾರಕ ಸೋಂಕು ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಹರಿಯಾಣ ಸರ್ಕಾರವು ಪತ್ರಕರ್ತರಲ್ಲಿ ವಿಶ್ವಾಸ ತುಂಬುವುದರ ಜೊತೆಗೆ ಆತ್ಮಸ್ಥೈರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ.

      ಕೊರೊನಾ ವೈರಸ್ ಹರಡುವಿಕೆ ಭೀತಿಯ ನಡುವೆ ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡಾ ಇತ್ತೀಚಿಗಷ್ಟೇ ರಾಜ್ಯದಲ್ಲಿ ಇರುವ ಪತ್ರಕರ್ತರಿಗೆ ನೀಡಿರುವ ವಿಮಾ ಯೋಜನೆಯನ್ನು ವಿಸ್ತರಣೆ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+