ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್‌ನ ಎರಡು ಕ್ಷೇತ್ರಗಳಿಂದ ಚರಂಜಿತ್ ಸಿಂಗ್ ಚನ್ನಿ ಸ್ಪರ್ಧೆ?

|
Google Oneindia Kannada News

ಚಂಡೀಗಢ, ಜನವರಿ 14: ಪಂಜಾಬ್ ವಿಧಾನಸಭೆ ಚುನಾವಣೆ ಸಂಬಂಧಿಸಿದಂತೆ ನಡೆದ ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದ್ದು, ಶೀಘ್ರದಲ್ಲೇ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುವುದು ಎಂದು ತಿಳಿದು ಬಂದಿದೆ.

ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು. ಈ ವೇಳೆ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಈ ಬಾರಿ ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯುವ ಕುರಿತು ಚರ್ಚಿಸಲಾಗಿದೆ.

ಪಂಜಾಬ್‌ ಚುನಾವಣೆ: ನೀತಿ ಸಂಹಿತೆ ಉಲ್ಲಂಘಿಸಿದ ಎಎಪಿಗೆ ನೋಟಿಸ್‌ಪಂಜಾಬ್‌ ಚುನಾವಣೆ: ನೀತಿ ಸಂಹಿತೆ ಉಲ್ಲಂಘಿಸಿದ ಎಎಪಿಗೆ ನೋಟಿಸ್‌

ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಪ್ರಸ್ತುತ ಚಮ್ಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, 2022ರ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Congress CEC finalises candidates for Punjab polls; CM Channi may contest from 2 seats

70 ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ ಕಾಂಗ್ರೆಸ್:

ಮೂಲಗಳ ಪ್ರಕಾರ, ಪಂಜಾಬ್ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಒಟ್ಟು 70 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಈ ಪೈಕಿ ಹಾಲಿ ಶಾಸಕರಿಗೆ ಹೆಚ್ಚು ಅವಕಾಶ ನೀಡಲಾಗಿದೆ. ಶುಕ್ರವಾರ ಅಭ್ಯರ್ಥಿಗಳ ಪಟ್ಟಿ ಕುರಿತು ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದ್ದು, ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.

ಎರಡು ಕ್ಷೇತ್ರಗಳಿಂದ ಚರಂಜಿತ್ ಸಿಂಗ್ ಚನ್ನಿ ಸ್ಪರ್ಧೆ:

ಪಂಜಾಬ್ ಮಾಝಾ ಪ್ರದೇಶದ ಚಮ್ಕೌರ್ ಸಾಹಿಬ್ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುವ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಇದರ ಜೊತೆಗೆ ಮತ್ತೊಂದು ಕ್ಷೇತ್ರದಿಂದ ಕಣಕ್ಕೆ ಇಳಿಯುವ ನಿರೀಕ್ಷೆಯಿದೆ. ಅತಿಹೆಚ್ಚು ದಲಿತ ಮತದಾರರನ್ನು ಹೊಂದಿರುವ ದೋಬಾ ಪ್ರದೇಶದ ಅದಂಪುರ್ ವಿಧಾನಸಭೆ ಕ್ಷೇತ್ರದಿಂದ ಚನ್ನಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಹಾಲಿ ಸಂಸದರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಸುವುದಿಲ್ಲ:

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾಂಗ್ರೆಸ್ ಹಾಲಿ ಸಂಸದರು ಸ್ಪರ್ಧಿಸುವುದಕ್ಕೆ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ಜಸ್ಬೀರ್ ಸಿಂಗ್ ಗಿಲ್, ತಮ್ಮನ್ನು ಕಣಕ್ಕಿಳಿಸುವುದಕ್ಕೆ ಪಕ್ಷ ಬಯಸಿದರೆ ನಾನು ಅದಕ್ಕಾಗಿ ಉತ್ಸುಕರಾಗಿದ್ದಾಗಿ ಹೇಳಿದ್ದಾರೆ. ವಿಧಾನಸಭೆಗೆ ಸ್ಪರ್ಧಿಸುವಂತೆ ಪಕ್ಷವು ಸೂಚಿಸಿದರೆ, ನಾವು ಉತ್ಸುಕರಾಗಿದ್ದೇವೆ, ಆದರೆ ಅದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರ ನಿರ್ಧಾರಕ್ಕೆ ಬಿಟ್ಟಿದ್ದಾಗಿದೆ. ಒಂದು ವೇಳೆ ಅವರು ಸ್ಪರ್ಧಿಸಲು ಹೇಳಿದರೆ, ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ," ಎಂದಿದ್ದಾರೆ.

ಪಶ್ಚಿಮ ಬಂಗಾಳದ ಉದಾಹರಣೆ:

ವಿಧಾನಸಭೆ ಚುನಾವಣೆಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡದಿರುವ ನಿರ್ಧಾರದ ಬಗ್ಗೆ ಮತ್ತೊಬ್ಬ ಕಾಂಗ್ರೆಸ್ ಸಂಸದರು ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷವು ಗೆಲುವನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ ಎಂದು ಹೇಳಿರುವ ಅವರು, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಬಗ್ಗೆ ಉಲ್ಲೇಖಿಸಿದ್ದಾರೆ. ಕಳೆದ ವರ್ಷ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ 12ಕ್ಕೂ ಹೆಚ್ಚು ಹಾಲಿ ಸಂಸದರಿಗೆ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು ಎಂದು ಉಲ್ಲೇಖಿಸಿದ್ದಾರೆ.

ಪಂಜಾಬಿನಲ್ಲಿ ಬಲಿಷ್ಠವಾಗಿರುವ ಕಾಂಗ್ರೆಸ್:

ಕಳೆದ ಬಾರಿ ಸರ್ಕಾರ ರಚಿಸುವಲ್ಲಿ ಯಶಸ್ವಿ ಆಗಿರುವ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಬಲಿಷ್ಠವಾಗಿದೆ. ಬಿಜೆಪಿಯು ಈಗಾಗಲೇ ಹಲವೆಡೆಗಳಲ್ಲಿ ಅಧಿಕಾರವನ್ನು ಕಳೆದುಕೊಳ್ಳುತ್ತಾ ಬರುತ್ತಿದೆ. ಈ ಮಧ್ಯೆ ಪಂಜಾಬಿನಲ್ಲಿ ಪಾಲಿಕೆಯಿಂದ ಪಾರ್ಲಿಮೆಂಟ್ ವರೆಗೆ ಕಾಂಗ್ರೆಸ್ ಪಕ್ಷ ಉತ್ತಮ ಸ್ಥಾನವನ್ನು ಪಡೆದುಕೊಂಡಿದೆ.

ಪಂಜಾಬ್ ವಿಧಾನಸಭೆ ಚುನಾವಣೆ:

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 14ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಅಂತಿಮ ಫಲಿತಾಂಶ ಹೊರ ಬೀಳಲಿದೆ. ಕಳೆದ 2017ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಗದ್ದುಗೆ ನೀಡಿದ್ದರು. 117 ಕ್ಷೇತ್ರಗಳಲ್ಲಿ ಕಾಂಗ್ರೆಸ್ 77 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಆಮ್ ಆದ್ಮಿ ಪಕ್ಷವು 20 ಕಡೆಗಳಲ್ಲಿ ವಿಜಯ ಪತಾಕೆ ಹಾರಿಸಿತ್ತು. ಶಿರೋಮಣಿ ಅಕಾಲಿ ದಳ 18 ಹಾಗೂ ಇತರರು ಎರಡು ಕಡೆಗಳಲ್ಲಿ ಗೆಲುವು ಸಾಧಿಸಿದ್ದರು.

English summary
Congress CEC finalises candidates for Punjab polls; CM Channi may contest from 2 seats
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X