ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರ್ಯಾಣದಲ್ಲಿ ಒಂದು ವಾರಗಳ ಕಾಲ ಸಂಪೂರ್ಣ ಲಾಕ್‌ಡೌನ್

|
Google Oneindia Kannada News

ಚಂಡೀಗಢ, ಮೇ 02: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹರ್ಯಣ ಸರ್ಕಾರವು 1 ವಾರಗಳ ಕಾಲ ಲಾಕ್‌ಡೌನ್ ಮಾಡಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಶನಿವಾರ 125 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.ರಾಜ್ಯದಲ್ಲಿ ಸಾವಿನ ಸಂಖ್ಯೆ 4,341 ಕ್ಕೆ ತಲುಪಿದ್ದು, 13,588 ಹೊಸ ಪ್ರಕರಣಗಳು ವರದಿಯಾಗಿದೆ. ಇದುವರೆಗಿನ ಕೋವಿಡ್ ಸೋಂಕಿತರ ಸಂಖ್ಯೆ 5,01,566 ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 3,92,488 ಮಂದಿಗೆ ಕೊರೊನಾವೈರಸ್ಭಾರತದಲ್ಲಿ ಒಂದೇ ದಿನ 3,92,488 ಮಂದಿಗೆ ಕೊರೊನಾವೈರಸ್

ಈ ಹಿಂದೆ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಮೇ 3 ರಿಂದ ಇಡೀ ರಾಜ್ಯದಲ್ಲಿ 7 ದಿನಗಳ ಲಾಕ್ ಡೌನ್ ಇರುತ್ತದೆ ಎಂದು ಹರಿಯಾಣದ ಗೃಹ ಮತ್ತು ಆರೋಗ್ಯ ಸಚಿವ ಅನಿಲ್ ವಿಜ್ ಭಾನುವಾರ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

COVID-19: Haryana Govt Announces One-Week Lockdown In Entire State

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಲೆಯ ಹರಡುವಿಕೆ ವೇಗ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 3,92,488 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ದೇಶದಲ್ಲಿ ಒಂದೇ ದಿನ 3689 ಮಂದಿ ಕೊರೊನಾ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಇದೇ ಅವಧಿಯಲ್ಲಿ 3,07,865 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

Recommended Video

ಕೊರೊನಾದಿಂದ ಜನ ಸಾಯ್ತಿಲ್ಲ ಸರ್ಕಾರದ ವ್ಯವಸ್ಥೆಯಿಂದ ಜನ ಸಾಯ್ತಿದ್ದಾರೆ | Oneindia Kannada

ಭಾನುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 1,95,57,457 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಮಹಾಮಾರಿಗೆ ಈವರೆಗೂ 2,15,542 ಸೋಂಕಿತರು ಬಲಿಯಾಗಿದ್ದು, 1,59,92,271 ಮಂದಿ ಗುಣಮುಖರಾಗಿದ್ದಾರೆ. ಇದರ ಹೊರತಾಗಿ 33,49,644 ಸಕ್ರಿಯ ಪ್ರಕರಣಗಳಿವೆ.

English summary
Amid a sharp surge in coronavirus cases, the Haryana government on Sunday announced imposition of a week-long lockdown in the entire state beginning May 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X