ಕೋವಿಡ್ ಹೆಚ್ಚಳ: ಜ.12ರವರೆಗೆ ಹರ್ಯಾಣದಲ್ಲಿ ಕಾಲೇಜುಗಳು ಬಂದ್
ಚಂಡೀಗಢ, ಜನವರಿ 03: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜನವರಿ 12ರವರೆಗೆ ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳು ಮುಚ್ಚಿರಲಿವೆ ಎಂದು ಹರ್ಯಾಣ ಸರ್ಕಾರ ಹೇಳಿದೆ.
ಈ ಸಂಬಂಧ ಅಧಿಕೃತ ಆದೇಶ ಹೊರಡಿಸಿರುವ ಹರಿಯಾಣ ಉನ್ನತ ಶಿಕ್ಷಣ ಇಲಾಖೆ, "ಎಲ್ಲ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳು ಜನವರಿ 12 ರವರೆಗೂ ಮುಚ್ಚಿರಲಿವೆ. ಆದರೆ, ಸಿಬ್ಬಂದಿ ಎಂದಿನಂತೆ ಕಾಲೇಜುಗಳು / ವಿಶ್ವವಿದ್ಯಾಲಯಗಳಿಗೆ ಹಾಜರಾಗುತ್ತಾರೆ. ಆನ್‌ಲೈನ್ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದೆ.
ಕೋವಿಡ್ ನಿಯಮಗಳನ್ನು ಸರಿಯಾಗಿ ಅಳವಡಿಸಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಹಾಸ್ಟೆಲ್‌ಗಳಲ್ಲಿ ಉಳಿಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿದೆ.

ಆದರೆ, ಸಿಬ್ಬಂದಿ ಎಂದಿನಂತೆ ಕಾಲೇಜುಗಳು / ವಿಶ್ವವಿದ್ಯಾಲಯಗಳಿಗೆ ಹಾಜರಾಗುತ್ತಾರೆ. ಆನ್‌ಲೈನ್ ತರಗತಿಗಳು ಎಂದಿನಂತೆ ಮುಂದುವರೆಯಲಿವೆ ಎಂದು ಹರ್ಯಾಣ ಉನ್ನತ ಶಿಕ್ಷಣ ಇಲಾಖೆ ತಿಳಿಸಿದೆ.
ದೇಶದಾದ್ಯಂತ ಕೋವಿಡ್ ಪ್ರಮಾಣ ಮತ್ತೆ ಜಾಸ್ತಿ ಆಗುತ್ತಿದೆ. ಒಮಿಕ್ರಾನ್ ಹಿನ್ನೆಲೆಯಲ್ಲಿ ಏರಿಕೆ ಆಗುತ್ತಿರುವ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ಭೌತಿಕ ತರಗತಿಗಳನ್ನ ನಿರ್ಬಂಧಿಸಿದೆ.
ಹರ್ಯಾಣದಲ್ಲಿ ಕಳೆದ 24 ಗಂಟೆಗಳಲ್ಲಿ 577 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದುವರೆಗೆ 7,74,917 ಪ್ರಕರಣಗಳು ಪತ್ತೆಯಾಗಿದ್ದು, 2,400 ಸಕ್ರಿಯ ಪ್ರಕರಣಗಳಿವೆ. 84 ಮಂದಿ ಗುಣಮುಖರಾಗಿದ್ದಾರೆ, ಕಳೆದ ಒಂದು ದಿನದಲ್ಲಿ 33,841 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಜನವರಿ 12 ರವರೆಗೆ ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಹರಿಯಾಣ ಶಿಕ್ಷಣ ಇಲಾಖೆ ಘೋಷಿಸಿದೆ. ಸಿಬ್ಬಂದಿ ಎಂದಿನಂತೆ ಕಾಲೇಜು/ವಿಶ್ವವಿದ್ಯಾಲಯಗಳಿಗೆ ಹಾಜರಾಗಬೇಕು ಮತ್ತು ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ಇದೇ ವೇಳೆ ಇಲಾಖೆ ಸೂಚನೆ ನೀಡಿದೆ.
15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್-19 ಲಸಿಕಾ ಅಭಿಯಾನವು ಇಂದಿನಿಂದ ದೇಶಾದ್ಯಂತ ಪ್ರಾರಂಭವಾಗಲಿದೆ. ದೇಶದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಡಿಸೆಂಬರ್ 25, 2021 ರಂದು, ಮಕ್ಕಳಿಗೆ ಕೊರೊನಾ ಲಸಿಕೆ ಹಾಗೂ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ಮಹತ್ವದ ಘೋಷಣೆ ಮಾಡಿದ್ದರು. ಹೀಗಾಗಿ, ಜನವರಿ 3 ರಿಂದ ದೇಶಾದ್ಯಂತ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ.
ಈ ಕುರಿತು ಮಾಹಿತಿ ನಿಡಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರಸ್ತುತ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತದೆ. Co-WIN ಪೋರ್ಟಲ್‌ನಲ್ಲಿ ಶನಿವಾರದಿಂದವೇ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ಹೊರಡಿಸಿದ ಮಾರ್ಗಸೂಚಿಗಳ ಅನ್ವಯ ಲಸಿಕೆ ನೀಡಲಾಗುವುದು. ಕೋವಾಕ್ಸಿನ್ನ ಹೆಚ್ಚುವರಿ ಡೋಸ್ಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.
15-18 ವರ್ಷ ವಯಸ್ಸಿನವರು ಕೋ-ವಿನ್ ವೆಬ್ಸೈಟ್ನಲ್ಲಿ ಅಸ್ತಿತ್ವದಲ್ಲಿರುವ ಖಾತೆಯ ಮೂಲಕ ಅಥವಾ ಬೇರೆ ಮೊಬೈಲ್ ಸಂಖ್ಯೆಯ ಮೂಲಕ ಹೊಸ ಖಾತೆಯನ್ನು ರಚಿಸಿ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಗುರುತಿನ ಚೀಟಿಗಳನ್ನು ಬಳಸಿಕೊಂಡು ಪೋರ್ಟಲ್‌ನಲ್ಲಿ ಲಸಿಕೆಗಾಗಿ ಹೆಸರು ನೋಂದಾಯಿಸಿಕೊಳ್ಳಬಹುದು. 2007 ರಲ್ಲಿ ಹಾಗೂ ಅದಕ್ಕಿಂತ ಮುನ್ನ ಜನಿಸಿದ ಎಲ್ಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ.
ಜನವರಿ 1 ರಿಂದಲೇ ನೋಂದಣಿ ಪ್ರಕಿಯೆ ಪ್ರಾರಂಭವಾಗಿದ್ದು, ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ಅನ್ನು ಜನವರಿ 10 ರಿಂದ ನೀಡಲಾಗುವುದು ಎಂದು ಕೇಂದ್ರ ಆರೋಗ್ಯ ಇಲಾಖೆ ಈಗಾಗಲೇ ಘೋಷಿಸಿದೆ. ರಾಜ್ಯದಲ್ಲೂ ಇಂದಿನಿಂದ ಮಕ್ಕಳಿಗೆ ಲಸಿಕೆ ನೀಡಿಕೆ ಆರಂಭವಾಗಲಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ.












Click it and Unblock the Notifications