ಕೊವಿಡ್19 ತಡೆಗಟ್ಟಲು ಪಾನ್ ಮಸಾಲ, ಗುಟ್ಕಾ, ಚ್ಯೂಯಿಂಗ್ ಗಮ್ ನಿಷೇಧ

ಚಂಡೀಗಢ, ಏಪ್ರಿಲ್ 2: ಕೊರೊನಾವೈರಸ್ ಸೋಂಕು ಹರಡದಂತೆ ಹರ್ಯಾಣ ಸರ್ಕಾರವು ಕಟ್ಟುನಿಟ್ಟಿನ ಕ್ರಮ ಜರುಗಿಸುತ್ತಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶ ಸರ್ಕಾರದ ಹಾದಿಯಲ್ಲೇ ಸಾಗಿರುವ ಹರ್ಯಾಣ ಸರ್ಕಾರವು ಒಂದು ವರ್ಷಗಳ ಕಾಲ ಪಾನ್ ಮಸಾಲ, ಗುಟ್ಕಾ ಸೇವನೆಗೆ ನಿಷೇಧ ಹೇರಿದೆ. ಇದೇ ವೇಳೆ ಚ್ಯೂಯಿಂಗ್ ಗಮ್ ಸೇವನೆ, ಮಾರಾಟವನ್ನು ಜೂನ್ 30ರವರೆಗೂ ನಿಷೇಧಿಸಲಾಗಿದೆ

ಸರ್ಕಾರದ ಆದೇಶದಂತೆ ಉತ್ಪಾದನೆ ಹಾಗೂ ಮಾರಾಟ ಮಾತ್ರವಲ್ಲದೆ, ಶೇಖರಿಸಿಟ್ಟುಕೊಳ್ಳಲು ಕೂಡಾ ಸದ್ಯಕ್ಕೆ ಅನುಮತಿ ಇಲ್ಲ ಎಂದು ಆಹಾರ ಮತ್ತು ಔಷಧಿ ಪ್ರಾಧಿಕಾರದ ಡಿಪಿಆರ್ ಒ ಸಂಗ್ವಾನ್ ಹೇಳಿದ್ದಾರೆ.

2006ರ ಆಹಾರ ಮತ್ತು ಸುರಕ್ಷತಾ ಗುಣಮಟ್ಟ ಕಾಯ್ದೆ ಸೆಕ್ಷನ್ 30ರ ಅನ್ವಯ ಪಾನ್ ಮಸಾಲ ಬಳಕೆ ನಿಷೇಧ ಹಾಕಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಂಗ್ವಾನ್ ಹೇಳಿದ್ದಾರೆ.

COVID-19 outbreak: Haryana bans pan masala, gutkha for 1 year

ಕೊರೊನಾ ವೈರಸ್‌ಗೆ ಚಿಕಿತ್ಸೆ ಇನ್ನೂ ಕಂಡುಹಿಡಿಯಲಾಗಿಲ್ಲ. ಆದರೆ ರೋಗ ಹರಡದಂತೆ ಕೊಂಚ ಮಟ್ಟಿಗೆ ತಡೆಗಟ್ಟಬಹುದಾಗಿದೆ. ಕೈಕಾಲುಗಳನ್ನು ಸೋಪು, ನೀರಿನಿಂದ ಕೈತೊಳೆದುಕೊಳ್ಳಬೇಕು. ಕಣ್ಣು, ಮೂಗು, ಬಾಯಿಯನ್ನು ಕೈನಿಂದ ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಈಗಾಗಲೇ ಸೋಂಕಿನ ಲಕ್ಷಣಗಳು ಕಂಡು ಬಂದಿರುವವರಿಂದ ದೂರವಿರಬೇಕು. ಒಂದೊಮ್ಮೆ ಇಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+