• search
  • Live TV
ಚಂಡೀಗಢ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಕಾರ್ಯಕರ್ತರಿಂದ ಹರ್ಯಾಣ ಸಿಎಂ ಮನೆಗೆ ಮುತ್ತಿಗೆ ಯತ್ನ

|

ಚಂಡೀಗಢ, ಡಿಸೆಂಬರ್ 02: ಕಾಂಗ್ರೆಸ್ ಕಾರ್ಯಕರ್ತರು ಹರ್ಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆಯಿತು.

ಹೊಸ ಕೃಷಿ ಕಾನೂನು ವಿರೋಧಿಸಿ ಪಂಜಾಬ್ ಯುವ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಮನೆಗೆ ಮನೆಗೆ ಮೆರವಣಿಗೆ ಹೊರಟಿದ್ದರು ಆದರೆ ರಸ್ತೆಯಲ್ಲೇ ಅವರನ್ನು ತಡೆಹಿಡಿಯಲಾಗಿದೆ.

ದೆಹಲಿ ರೈತರ ಹೋರಾಟ ಬೆಂಬಲಿಸಿ ದಾವಣಗೆರೆ ರೈತರಿಂದ ಹೆದ್ದಾರಿ ತಡೆ

ಕಾಂಗ್ರೆಸ್ ಕಾರ್ಯಕರ್ತ ಮಾತನಾಡಿ, ದೆಹಲಿ ಚಲೋ ಗೆ ತೆರಳುತ್ತಿದ್ದ ಸಾವಿರಾರು ರೈತರನ್ನು ತಡೆದಿದ್ದಕ್ಕಾಗಿ ಮತ್ತು ಅವರ ಮೇಲೆ ಜಲ ಫಿರಂಗಿ , ಅಶ್ರುವಾಯು ಪ್ರಯೋಗಿಸಿದ್ದಕ್ಕಾಗಿ ಖಟ್ಟರ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಅವರು ಹೇಳಿದ್ದಾರೆ.

ಪೊಲೀಸರು ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಖಟ್ಟರ್ ನಿವಾಸದಿಂದ ಮೂರು ಕಿ.ಮೀ ದೂರದಲ್ಲಿರುವ ಬ್ಯಾರಿಕೇಡ್‌ಗಳನ್ನು ಹಾರಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚಂಡೀಗಢ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.

ಕೃಷಿ ಕಾನೂನು ವಿರೋಧಿಸಿ ದೆಹಲಿಯತ್ತ ಹೊರಟಿದ್ದ ಪಂಜಾಬ್ ರೈತರು ರಾಜ್ಯವನ್ನು ಪ್ರವೇಶಿಸುವುದನ್ನು ಹರ್ಯಾಣ ಪೊಲೀಸರು ತಡೆಯಲು ಪ್ರಯತ್ನಿಸಿದ್ದರು. ಗಡಿಯಲ್ಲಿದ್ದ ಬ್ಯಾರಿಕೇಡ್‌ಗಳನ್ನು ತೆಗೆದು ಹಾಕಿ ಮುನ್ನುಗ್ಗಿದ್ದರು. ಈ ಹಿನ್ನೆಲೆಯಲ್ಲಿ ಖಟ್ಟರ್ ನಿವಾಸದ ಎದುರು ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.

English summary
Police used water cannons Wednesday as Punjab Youth Congress workers jumped barricades trying to march to Haryana Chief Minister Manohar Lal Khattar''s home here, protesting over the new farm laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X