ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣ: ಕಾಂಗ್ರೆಸ್ ಶಾಸಕ ರಮಿಂದರ್ ವಿರುದ್ಧ ಎಫ್‌ಐಆರ್ ದಾಖಲು

|
Google Oneindia Kannada News

ಚಂಡೀಗಢ,ಫೆಬ್ರವರಿ 02: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಆವ್ಲಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ರಮಿಂದರ್ ಸಿಂಗ್ ಅವರ ಪುತ್ರ ಮತ್ತು ಘಟನೆಗೆ ಸಂಬಂಧಿಸಿದ 60 ಮಂದಿ ವಿರುದ್ಧವೂ ಪ್ರಕರಣ ದಾಖಲಾಗಿದೆ.

ವೈರಲ್ ವಿಡಿಯೋ: ಶಿರೋಮಣಿ ಅಕಾಲಿದಳ ಅಧ್ಯಕ್ಷ ಸುಖ್ಬೀರ್‌ ಕಾರಿನ ಮೇಲೆ ಗುಂಡಿನ ದಾಳಿವೈರಲ್ ವಿಡಿಯೋ: ಶಿರೋಮಣಿ ಅಕಾಲಿದಳ ಅಧ್ಯಕ್ಷ ಸುಖ್ಬೀರ್‌ ಕಾರಿನ ಮೇಲೆ ಗುಂಡಿನ ದಾಳಿ

ಪಂಜಾಬ್ ನ ಜಲಾಲಾಬಾದ್ ನಲ್ಲಿ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್ಎಡಿ)ದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಕಲ್ಲು ಹಾಗೂ ಗುಂಡಿನ ದಾಳಿ ನಡೆಸಿದ್ದರು.

FIR Registered Against Congress MLA Raminder Singh Awla

ಈ ವೇಳೆ ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು ನಾಲ್ವರು ಗಾಯಗೊಂಡಿದ್ದಾರೆ ಎಂದು ಶಿರೋಮಣಿ ಅಕಾಲಿದಳ ಆರೋಪಿಸಿತ್ತು.

ದಾಳಿಯ ಹಿಂದೆ ಪೊಲೀಸ್ ಬೆಂಬಲಿತ ಕಾಂಗ್ರೆಸ್ ಗೂಂಡಾಗಳ ಕೈವಾಡವಿದ್ದು ಬಾದಲ್ ಹತ್ಯೆಗೆ ಸಂಚು ಹೂಡಿದ್ದಾರೆ ಎಂದು ಎಸ್ಎಡಿ ಆರೋಪಿಸಿದೆ. ಸದ್ಯ ದಾಳಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಫೆಬ್ರವರಿ 14ರಂದು ನಡೆಯಲಿರುವ ಸ್ಥಳೀಯ ಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಬಾದಲ್ ಅಕಾಲಿ ಅಭ್ಯರ್ಥಿಗಳ ಜೊತೆ ಹೋಗಿದ್ದ ಸಂದರ್ಭದಲ್ಲಿ ದಾಳಿ ನಡೆದಿದೆ.

English summary
FIR registered against Congress MLA Raminder Singh Awla, his son and 60 other unnamed accused in connection with Jalalabad incident wherein SAD president Sukhbir Singh Badal's vehicle was attacked earlier today.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X