• search
  • Live TV
ಚಂಡೀಗಢ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದೆಹಲಿ ಅಗ್ನಿ ಆರುವ ಮುನ್ನ ಅಮೃತಸರದ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ

|
Google Oneindia Kannada News

ಅಮೃತಸರ ಮೇ 14: ದೆಹಲಿ ಅಗ್ನಿ ಅವಘಡ ಮಾಸುವ ಮುನ್ನ ಅಮೃತಸರದ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ಕ್ಷ-ಕಿರಣ ವಿಭಾಗದ ಸಮೀಪವಿರುವ ಆಸ್ಪತ್ರೆ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದೆ.

Breaking: ದೆಹಲಿ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಆರ್ಥಿಕ ನೆರವುBreaking: ದೆಹಲಿ ಅಗ್ನಿ ಅವಘಡದಲ್ಲಿ ಮೃತರ ಕುಟುಂಬಕ್ಕೆ 10 ಲಕ್ಷ ಆರ್ಥಿಕ ನೆರವು

ಕಟ್ಟಡದ ಹಿಂಭಾಗದ ಪಾರ್ಕಿಂಗ್ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಆಸ್ಪತ್ರೆಯ ನೌಕರರು ಹೇಳಿದ್ದಾರೆ. ಕಟ್ಟಡದ ವಿವಿಧ ವಾರ್ಡ್‌ಗಳಲ್ಲಿ ದಾಖಲಾಗಿದ್ದ ರೋಗಿಗಳನ್ನು ಆಸ್ಪತ್ರೆಯ ನೌಕರರು ಮತ್ತು ಅವರ ಪರಿಚಾರಕರು ಸಕಾಲಿಕವಾಗಿ ಸ್ಥಳಾಂತರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ 40 ನಿಮಿಷಗಳ ನಂತರ ಬೆಂಕಿಯನ್ನು ನಿಯಂತ್ರಿಸಲು ಸಾಧ್ಯವಾಗಿದೆ. ಅಗ್ನಿ ಅವಘಡದಿಮದ ಕಟ್ಟಡದ ಮೂರು ಮಹಡಿಗಳಿಗೆ ಹಾನಿಯಾಗಿದೆ. ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ವೈದ್ಯಕೀಯ ಉಪಕರಣಗಳು ಮತ್ತು ಕಟ್ಟಡದ ನಷ್ಟವನ್ನು ಇನ್ನೂ ನಿರ್ಣಯಿಸಬೇಕಾಗಿದೆ.

English summary
A major mishap was averted at Government Medical College, Amritsar, after fire engulfed a hospital building near the X-Ray department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X