ಪಂಜಾಬ್ ಸಿಎಂ ಚನ್ನಿ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್
ಚಂಡೀಗಢ, ಫೆಬ್ರವರಿ 19: ಪಂಜಾಬ್ ವಿಧಾನಸಭೆ ಚುನಾವಣೆ ನಡುವೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ರಾಜ್ಯದ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಜೊತೆಗೆ ಸಿಧು ಮೂಸೆವಾಲಾ ಎಂದು ಜನಪ್ರಿಯವಾಗಿರುವ ಕಾಂಗ್ರೆಸ್ ಅಭ್ಯರ್ಥಿ ಶುಭದೀಪ್ ಸಿಂಗ್ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಪ್ರಚಾರದ ಕೊನೆಯ ದಿನವಾದ ಶುಕ್ರವಾರ ಮಾನ್ಸಾ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಇಬ್ಬರ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಚರಂಜಿತ್ ಸಿಂಗ್ ಚನ್ನಿ ವಿರುದ್ಧ ಕೇಸ್:
ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಸಿಎಂ ಚರಂಜಿತ್ ಎಸ್ ಚನ್ನಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿದ್ದು ಮೂಸ್ ವಾಲಾ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಮಾನ್ಸಾ ಕ್ಷೇತ್ರದಲ್ಲಿ ಸಂಜೆ ಪ್ರಚಾರ ಮುಗಿಸಿದ ಆರೋಪದ ಮೇಲೆ ಮನೆ ಮನೆಗೆ ಪ್ರಚಾರ ನಡೆಸಿದ್ದರು.
ಸುಖ್ಬೀರ್ ಸಿಂಗ್ ಬಾದಲ್ ವಿರುದ್ಧವೂ ದೂರು:
ಪಂಜಾಬ್ ವಿಧಾನಸಭೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಫೇಸ್‌ಬುಕ್‌ನಲ್ಲಿ ಸುಖ್ಬೀರ್ ಸಿಂಗ್ ಬಾದಲ್ ಮತಯಾಚನೆ ಮಾಡುತ್ತಿದ್ದಾರೆ ಎಂದು ಎಎಪಿ ದೂಷಿಸಿದೆ.
ಪಂಜಾಬಿನಲ್ಲಿ ಒಂದೇ ಹಂತದಲ್ಲಿ ಮತದಾನ:
ಪಂಜಾಬಿನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದು ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 20ರ ಭಾನುವಾರ ರಾಜ್ಯದ ಎಲ್ಲ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.












Click it and Unblock the Notifications