ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಮುಂದಿನ ವಾರ ಬಿಜೆಪಿ ಸೇರಲಿರುವ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

|
Google Oneindia Kannada News

ಚಂಡೀಗಢ, ಸೆ.16: ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ಮುಂದಿನ ವಾರ ನವದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆ ಆಗಲಿದ್ದಾರೆ.

ತಾವು ಬಿಜೆಪಿ ಸೇರುವುದರ ಜೊತೆಗೆ ಅಮರಿಂದರ್ ಸಿಂಗ್ ತಾವು ಹೊಸದಾಗಿ ರಚಿಸಿದ್ದ ಪಂಜಾಬ್ ಲೋಕ ಕಾಂಗ್ರೆಸ್ (PLC) ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ.

ಪಂಜಾಬ್‌ನಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನ: 10 ಶಾಸಕರ ಬಳಿಗೆ ಬಿಜೆಪಿಪಂಜಾಬ್‌ನಲ್ಲಿ ಬಿಜೆಪಿ ಆಪರೇಷನ್ ಕಮಲಕ್ಕೆ ಯತ್ನ: 10 ಶಾಸಕರ ಬಳಿಗೆ ಬಿಜೆಪಿ

ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದ ಪಂಜಾಬ್ ಮಾಜಿ ಸಿಎಂ, ಕ್ಯಾಪ್ಟನ್ ಅಮರಿಂದರ್ ಸಿಂಗ್ (80) ಕಳೆದ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು.

Former Punjab CM Amarinder Singh set to join BJP next week

ಮಾಜಿ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಕಳೆದ ವರ್ಷ ನವೆಂಬರ್ ಆರಂಭದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ರಾಜೀನಾಮೆ ನೀಡಿ ಒಂದೂವರೆ ತಿಂಗಳ ನಂತರ ಕಾಂಗ್ರೆಸ್ ನಾಯಕತ್ವವು ಚರಂಜಿತ್ ಸಿಂಗ್ ಚನ್ನಿ ಅವರನ್ನು ಮುಖ್ಯಮಂತ್ರಿ ಆಗಿ ನೇಮಿಸಿತು. ಆಗ ಪಂಜಾಬ್ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಆಗಿದ್ದರು.

ಕಾಂಗ್ರೆಸ್ ತೊರೆದ ನಂತರ, ಫೆಬ್ರವರಿ 20 ರ ಪಂಜಾಬ್ ವಿಧಾನಸಭೆ ಚುನಾವಣೆಯ ಪೂರ್ವದಲ್ಲಿ ಅಮರಿಂದರ್ PLC ಪಕ್ಷ ಸ್ಥಾಪಿಸಿದ್ದರು. ಬಿಜೆಪಿ ಮತ್ತು ಎಸ್‌ಎಡಿ (ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು. ಅವರ ಸೀಟು ಹಂಚಿಕೆಯ ಪ್ರಕಾರ, ಬಿಜೆಪಿ 65 ಸ್ಥಾನಗಳಲ್ಲಿ, ಪಿಎಲ್‌ಸಿ 37 (ಹಲವಾರು ಅಭ್ಯರ್ಥಿಗಳು ಬಿಜೆಪಿ ಚಿಹ್ನೆಯಲ್ಲಿ ಸ್ಪರ್ಧಿಸಲು ಆದ್ಯತೆ) ಮತ್ತು ಎಸ್‌ಎಡಿ (ಸಂಯುಕ್ತ) 15 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು.

ಎಲ್ಲಾ PLC ಅಭ್ಯರ್ಥಿಗಳು ಚುನಾವಣೆಯಲ್ಲಿ ಭಾರಿ ಕೆಟ್ಟ ಸೋಲು ಕಂಡರು. ಅಮರಿಂದರ್ ತಮ್ಮ ಭದ್ರಕೋಟೆಯಾದ ಪಟಿಯಾಲದಿಂದಲೇ ಸೋತರು. ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಮಾಜಿ ರಾಜ್ಯಸಭಾ ಸದಸ್ಯ ಸುಖದೇವ್ ಸಿಂಗ್ ಧಿಂಡ್ಸಾ ನೇತೃತ್ವದ ಎಸ್‌ಎಡಿ (ಸಂಯುಕ್ತ್) ಒಂದೂ ಸ್ಥಾನ ಗೆಲ್ಲಲಿಲ್ಲ. ಆಮ್ ಆದ್ಮಿ ಪಕ್ಷವು ಚುನಾವಣೆಯಲ್ಲಿ ಜಯಭೇರಿ ಬಾರಿಸಿತ್ತು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿತ್ತು.

Former Punjab CM Amarinder Singh set to join BJP next week

ಜೂನ್ 27 ರಂದು ಅಮರಿಂದರ್ ಅವರ ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿದ್ದರು. "ಇದು ಕ್ಯಾಪ್ಟನ್ ಸಾಹಿಬ್ ಅವರ ಯೋಗಕ್ಷೇಮದ ಬಗ್ಗೆ ವಿಚಾರಿಸಲು ಮಾಡಿರುವ ಕರೆಯಷ್ಟೇ" ಎಂದು ಹೇಳಿದ್ದರು.

ಅಮರಿಂದರ್ ಸಿಂಗ್ ಲಂಡನ್‌ಗೆ ತೆರಳುವ ಮುನ್ನವೇ ಬಿಜೆಪಿಯೊಂದಿಗೆ ಪಿಎಲ್‌ಸಿ ವಿಲೀನ ಮಾಡುವ ಬಗ್ಗೆ ನಿರ್ಧರಿಸಲಾಗಿತ್ತು. ಅವರು ದೇಶಕ್ಕೆ ಮರಳಿದ ನಂತರ ಅದನ್ನು ಔಪಚಾರಿಕವಾಗಿ ಘೋಷಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ಹರ್ಜಿತ್ ಗ್ರೆವಾಲ್ ತಿಳಿಸಿದ್ದರು.

English summary
Former Punjab chief minister and PLC chief Amarinder Singh set to join the BJP next week in New Delhi. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X