ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಶಾಸಕ ಅರವಿಂದ್ ಖನ್ನಾ ಬಿಜೆಪಿ ಸೇರ್ಪಡೆ

ನವದೆಹಲಿ, ಜನವರಿ 11: ಪಂಜಾಬ್‌ ಕಾಂಗ್ರೆಸ್‌ನ ಮಾಜಿ ಶಾಸಕ ಅರವಿಂದ್ ಖನ್ನಾ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹಾಗೂ ಹರ್ದೀಪ್ ಸಿಂಗ್ ಪುರಿ ಅವರ ಸಮ್ಮುಖ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಉದ್ಯಮಿ ಹಾಗೂ ಎರಡು ಅವಧಿಗೆ ಶಾಸಕರಾಗಿದ್ದ ಖನ್ನಾ, ಕೆಲವು ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದ ಬಳಿಕ ರಾಜಕೀಯವಾಗಿ ಸಕ್ರಿಯರಾಗಿರಲಿಲ್ಲ.

ಅರವಿಂದ್ ಖನ್ನಾ ಜತೆ, ಗುರುಚರಣ್ ಸಿಂಗ್ ತೊಹ್ರಾ ಅವರ ಮೊಮ್ಮಗ ಕನ್ವರ್‌ ವೀರ್ ಸಿಂಗ್ ತೋಹ್ರಾ, ಅಕಾಲಿದಳದಲ್ಲಿದ್ದ ಗುರುದೀಪ್ ಸಿಂಗ್ ಗೋಶಾ ಮತ್ತು ಧರಂವೀರ್‌ ಸರೀನ್ ಬಿಜೆಪಿಗೆ ಸೇರ್ಪಡೆಗೊಂಡರು.

ಗೋವಾ, ಪಂಜಾಬ್, ಮಣಿಪುರ್, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 14ರಂದು ಸೋಮವಾರ ನಡೆಯಲಿದೆ. ಒಟ್ಟು ಏಳು ಹಂತಗಳಲ್ಲಿ ಪಂಚರಾಜ್ಯ ಚುನಾವಣೆ ನಡೆಯಲಿದೆ.

Former Punjab Congress MLA Arvind Khanna Joins BJP

ಜನವರಿ 15ರವರೆಗೆ ಯಾವುದೇ ರೋಡ್ ಶೋ, ಸೈಕಲ್ ಜಾಥಾ ಸೇರಿದಂತೆ ಯಾವುದೇ ಮೆರವಣಿಗೆಯನ್ನು ಮಾಡುವಂತಿಲ್ಲ, ಹಾಗೆಯೇ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ಯಾವುದೇ ಮೆರವಣಿಗೆ, ಸಭೆಗಳನ್ನು ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಜನವರಿ 21ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿರುತ್ತದೆ.

ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.

ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು.

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಗ್ಗೆ ಮಾಹಿತಿ ಪ್ರಕಟಿಸಬೇಕು. ಆಯಾ ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಬೇಕು. KNOW YOUR CANDIDATE ಆ್ಯಪ್‌ನಲ್ಲಿ ಮಾಹಿತಿ ನೀಡಬೇಕು.

ಪಕ್ಷದ ವೆಬ್​ಸೈಟ್​ನ ಮುಖಪುಟದಲ್ಲಿ ಮಾಹಿತಿ ನೀಡಬೇಕು. ಗೋವಾ, ಮಣಿಪುರದಲ್ಲಿ ಚುನಾವಣಾ ವೆಚ್ಚ 28 ಲಕ್ಷ ರೂ. ಆಗಿರಲಿದೆ. ಉತ್ತರಾಖಂಡ್, ಉತ್ತರ ಪ್ರದೇಶ, ಪಂಜಾಬ್​ನಲ್ಲಿ 40 ಲಕ್ಷ ಆಗಿರಲಿದೆ ಎಂದು ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚವನ್ನು ಆಯೋಗ ಮಿತಿಗೊಳಿಸಿದೆ.

ಚುನಾವಣೆಯಲ್ಲಿ ಒಟ್ಟು 18.34 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 24.9 ಲಕ್ಷ ಜನರು ಮೊದಲ ಬಾರಿ ಮತ ಚಲಾಯಿಸ್ತಿದ್ದಾರೆ. ಕೊರೊನಾ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಸುತ್ತೇವೆ. ಮತಗಟ್ಟೆಗಳನ್ನು ಗ್ರೌಂಡ್ ಫ್ಲೋರ್‌ನಲ್ಲಿ ಸ್ಥಾಪಿಸಲಾಗುತ್ತದೆ. ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ.

Recommended Video

      Happy Birthday, Rahul Dravid ಅವರಿಗೆ ಪಂದ್ಯದ ಜೊತೆಗೆ ಹುಟ್ಟುಹಬ್ಬದ ಸಂಭ್ರಮ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+