ಹರಿಯಾಣ: ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್- 3 ಜನ ಸಾವು, 11 ಮಂದಿಗೆ ಗಾಯ

ಜಾಜ್ಜರ್, ಮೇ 19: ರಸ್ತೆ ಬದಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ. ಕುಂಡ್ಲಿ-ಮನೇಸರ್-ಪಲ್ವಾಲ್ (ಕೆಎಂಪಿ) ಎಕ್ಸ್‌ಪ್ರೆಸ್‌ವೇಯಲ್ಲಿ ಹರಿಯಾಣದ ಜಾಜ್ಜರ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದು 11 ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರಲ್ಲಿ, 10 ಗಾಯಾಳುಗಳನ್ನು ಚಿಕಿತ್ಸೆಗಾಗಿ ರೋಹ್ಟಕ್‌ನ ಪೋಸ್ಟ್ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ಗೆ (ಪಿಜಿಐಎಂಎಸ್) ಕಳುಹಿಸಲಾಗಿದ್ದು, ಒಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಬಹದ್ದೂರ್‌ಗಢ್‌ನ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

ಎಲ್ಲಾ ಮೂವರು ಬಲಿಪಶುಗಳು ಮತ್ತು 11 ಮಂದಿ ಗಾಯಗೊಂಡವರು ಕೆಎಂಪಿ ಎಕ್ಸ್‌ಪ್ರೆಸ್‌ವೇಯಲ್ಲಿ ದುರಸ್ತಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ. ಕೆಲಸ ಮುಗಿಸಿ ಬೇಸತ್ತ ಕಾರ್ಮಿಕರು ರಸ್ತೆ ಬದಿ ಮಲಗಿದ್ದರು. ಹಿಂಬದಿಯಿಂದ ಅತೀ ವೇಗದಲ್ಲಿ ಬಂದ ಟ್ರಕ್‌ವೊಂದು ನಿದ್ರಿಸುತ್ತಿದ್ದ ಕಾರ್ಮಿಕರ ಮೇಲೆ ಹರಿದಿದೆ. ಲಾರಿ ಬಂದ ರಭಸಕ್ಕೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

Haryana: 3 dead, 11 hurt as truck runs over sleeping workers

ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತ ಮೂವರ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಹದ್ದೂರ್‌ಗಢ ಜನರಲ್ ಆಸ್ಪತ್ರೆಗೆ ಕಳುಹಿಸಲಾಗಿದೆ.

Haryana: 3 dead, 11 hurt as truck runs over sleeping workers

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+