• search
  • Live TV
ಚಂಡೀಗಢ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಎರಡು ದಿನ ಶಾಲೆಗೆ ಹೋದ 72 ವಿದ್ಯಾರ್ಥಿಗಳಿಗೆ ಕೊರೊನಾವೈರಸ್!

|

ಚಂಡೀಘರ್, ನವೆಂಬರ್.18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಪ್ರಭಾಣ ತಗ್ಗಿದ ಹಿನ್ನೆಲೆ ಶಾಲಾ-ಕಾಲೇಜುಗಳ ಪುನಾರಂಭಕ್ಕೆ ಕೇಂದ್ರ ಸರ್ಕಾರವು ಅಸ್ತು ಎಂದಿದೆ. ಆದರೆ ಹರಿಯಾಣದಲ್ಲಿ ಶಾಲೆ ತೆರೆದ ಕೆಲವೇ ದಿನಗಳಲ್ಲಿ 12 ಸರ್ಕಾರಿ ಶಾಲೆಗಳ 72 ವಿದ್ಯಾರ್ಥಿಗಳಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಹರಿಯಾಣದ ರೇವಾರಿ ಪ್ರದೇಶದಲ್ಲಿರುವ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಶಾಲೆಗೆ ತೆರಳಿದ ಎರಡ್ಮೂರು ದಿನಗಳಲ್ಲೇ ವಿದ್ಯಾರ್ಥಿಗಳಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಸಂದರ್ಭದಲ್ಲಿ 72 ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಖಾತ್ರಿಯಾಗಿದೆ.

ಶಾಕಿಂಗ್ ನ್ಯೂಸ್: 5 ದಿನ ಶಾಲೆಗೆ ಹೋದ 80 ಶಿಕ್ಷಕರಿಗೆ ಕೊರೊನಾವೈರಸ್!

ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾದ ಸರ್ಕಾರಿ ಶಾಲೆಗಳನ್ನು ಪುನಃ ಬಂದ್ ಮಾಡುವಂತೆ ಜಿಲ್ಲಾಡಳಿತವು ಆದೇಶಿಸಿದೆ. ಕಡಿಮೆ ಸೋಂಕಿತ ಪ್ರಕರಣಗಳು ಪತ್ತೆಯಾದ ಶಾಲೆಗಳನ್ನು ಮೂರರಿಂದ ನಾಲ್ಕು ದಿನ ಹಾಗೂ ಅತಿಹೆಚ್ಚು ಪ್ರಕರಣಗಳು ಪತ್ತೆಯಾದ ಶಾಲೆಗಳನ್ನು 14 ದಿನಗಳವರೆಗೂ ಬಂದ್ ಮಾಡುವುದಕ್ಕೆ ತೀರ್ಮಾನಿಸಲಾಗಿದೆ.

ಹರಿಯಾಣದ ಸರ್ಕಾರಿ ಶಾಲೆಗಳಲ್ಲಿ ಕೊವಿಡ್-19:

ಹರಿಯಾಣದ ಜಿಂದ್ ಪ್ರದೇಶದ ಸರ್ಕಾರಿ ಶಾಲೆಯಲ್ಲಿ 11 ವಿದ್ಯಾರ್ಥಿಗಳು ಮತ್ತು 8 ಶಿಕ್ಷಕರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇನ್ನೊಂದು ಕಡೆ ರೇವಾರಿಯ ಖೋಲ್ ಪ್ರದೇಶದಲ್ಲಿರುವ ಕುಂದ್ ಸರ್ಕಾರಿ ಶಾಲೆಯಲ್ಲಿ 33 ವಿದ್ಯಾರ್ಥಿಗಳ ಪೈಕಿ 19 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕು ತಗುಲಿದೆ. ಈ ಹಿನ್ನೆಲೆ ಶಾಲೆಯನ್ನು ಮೂರು ದಿನಗಳ ಕಾಲ ಬಂದ್ ಮಾಡಿಸಿದ್ದು, ಸ್ಯಾನಿಟೈಸ್ ಮಾಡಲಾಗುತ್ತಿದೆ.

ದೀಪಾವಳಿ ಹಬ್ಬದ ಹಿನ್ನೆಲೆ ಸಾರ್ವಜನಿಕವಾಗಿ ಜನರು ಪರಸ್ಪರ ಭೇಟಿಯಾಗಿದ್ದು, ಸೋಂಕು ತಗುಲಿರುವ ಅನುಮಾನದ ಮೇಲೆ 12 ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿತ್ತು ಎಂದು ರೇವಾರಿಯ ನೊಡೆಲ್ ಆಫೀಸರ್ ತಿಳಿಸಿದ್ದಾರೆ.

English summary
Haryana: 72 Students Of 12 Government Schools In Rewari Tested Positive For Coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X