Get Updates
Get notified of breaking news, exclusive insights, and must-see stories!

ಅಶ್ರುವಾಯು ಪ್ರಯೋಗ: ರೈತರ ಜತೆ ಮನೋಹರ್‌ ಲಾಲ್ ಖಟ್ಟರ್ ಮಾತುಕತೆ ರದ್ದು

ಚಂಡೀಗಢ, ಜನವರಿ 10: ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹಾಗೂ ರೈತರ ನಡುವಿನ ಮಾತುಕತೆ ರದ್ದಾಗಿದೆ.

ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಭೇಟಿ ಹಿನ್ನೆಲೆಯಲ್ಲಿ ಹರಿಯಾಣದ ಕರ್ನಲ್ ಟೋಲ್ ಪ್ಲಾಜಾ ಬಳಿ ರೈತರ ಮೇಲೆ ಪೊಲೀಸರು ಅಶ್ರುವಾಯು, ಲಾಠಿ ಪ್ರಯೋಗಿಸಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಕೆಮಲಾ ಹಳ್ಳಿಯಲ್ಲಿ ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದಿರುವ ಕೃಷಿ ಕಾನೂನುಗಳ ಪ್ರಯೋಜನಗಳ ಬಗ್ಗೆ ರೈತರನ್ನುದ್ದೇಶಿಸಿ ಮುಖ್ಯಮಂತ್ರಿ ಮಾತನಾಡಬೇಕಿತ್ತು. ಆದರೆ, ಮುಖ್ಯಮಂತ್ರಿ ಭೇಟಿ ರದ್ದಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ.

Haryana Chief Minister Cancels Farmers Meet After Protesters Tear-Gassed

ಕೆಮಲಾ ಹಳ್ಳಿಗೆ ಬರಲು ಪ್ರಯತ್ನಿಸುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು, ಜಲ ಫಿರಂಗಿ ಪ್ರಯೋಗಿಸಿರುವ ದೃಶ್ಯಾವಳಿಗಳು ಮೊಬೈಲ್ ಗಳಲ್ಲಿ ಸೆರೆಯಾಗಿದೆ.

ನೂರಾರು ಸಂಖ್ಯೆಯಲ್ಲಿದ್ದ ರೈತರು, ಕೃಷಿ ಕಾನೂನುಗಳನ್ನು ರದ್ದುಪಡಿಸಿ ಎಂಬ ಘೋಷಣೆ ಕೂಗುತ್ತಾ, ಮೆರವಣಿಗೆ ಆರಂಭಿಸಿದಾಗ ಪೊಲೀಸರು ಆಶ್ರುವಾಯು ಸಿಡಿಸಿ ಗುಂಪನ್ನು ಚದುರಿಸಿದ್ದಾರೆ. ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಲಾಠಿ ಪ್ರಯೋಗಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+