• search
  • Live TV
ಚಂಡೀಗಢ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹರ್ಯಾಣ: 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

|
Google Oneindia Kannada News

ಚಂಡೀಗಢ, ಏಪ್ರಿಲ್ 15: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹರ್ಯಾಣ ಸರ್ಕಾರವು 10ನೇ ತರಗತಿ ಪರೀಕ್ಷೆಯನ್ನು ರದ್ದುಪಡಿಸಿದ್ದು, 12ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ.

10ನೇ ತರಗತಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ 10ನೇ ತರಗತಿಯ ಫಲಿತಾಂಶವನ್ನು ಘೋಷಿಸಲಾಗುವುದು ಹರ್ಯಾಣ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಕೊರೊನಾ ಡಬಲ್: ಭಾರತದಲ್ಲಿ ಒಂದೇ ದಿನ 2 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕುಕೊರೊನಾ ಡಬಲ್: ಭಾರತದಲ್ಲಿ ಒಂದೇ ದಿನ 2 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು

ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು, 12 ನೇ ತರಗತಿ ಪರೀಕ್ಷೆಯನ್ನು ಮುಂದೂಡಿದೆ.

ಸಿಬಿಎಸ್‌ಇ ನಿರ್ಧಾರದ ನಂತರ ಈಗ ಹರಿಯಾಣ ಸರ್ಕಾರ ಸಹ ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲು ನಿರ್ಧರಿಸಿದೆ ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹರ್ಯಾಣ ಶಿಕ್ಷಣ ಸಚಿವ ಕನ್ವರ್ ಪಾಲ್ ಹೇಳಿದ್ದಾರೆ.

ದೇಶದಲ್ಲಿ ಒಂದೇ ದಿನ 2,00,739 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1038 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 93,528 ಸೋಂಕಿತರು ಗುಣಮುಖರಾಗಿದ್ದಾರೆ.

ಗುರುವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 1,40,74,564ಕ್ಕೆ ಏರಿಕೆಯಾಗಿದೆ. ಇದುವರೆಗೂ 1,73,123 ಜನರು ಕೊವಿಡ್-19 ಸೋಂಕಿಗೆ ಬಲಿಯಾಗಿದ್ದರೆ, 1,24,29,564 ಸೋಂಕಿತರು ಗುಣಮುಖರಾಗಿದ್ದಾರೆ. 14,71,877 ಕೊರೊನಾವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Haryana Board Class 10 exams 2021 have been cancelled, while class 12 exams 2021 will be postponed by the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X