ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್ ಸಿಎಂ ಸೋದರಳಿಯ ಮನೆ ಮೇಲೆ ED ದಾಳಿ

|
Google Oneindia Kannada News

ಚಂಡೀಗಢ, ಜನವರಿ 18: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಭ್ರಷ್ಟರ ವಿರುದ್ಧ ಆದಾಯ ತೆರಿಗೆ ಇಲಾಖೆ, ಜಾರಿ ನಿರ್ದೇಶನಾಲಯದ ದಾಳಿ ನಿರೀಕ್ಷಿತ ಎನ್ನಬಹುದು. ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಹಾಗೂ ಇನ್ನಿತರರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಇಂದು ದಾಳಿ ನಡೆಸಿರುವ ವರದಿ ಬಂದಿದೆ.

ಚರಣ್ ಜಿತ್ ಸಿಂಗ್ ಚನ್ನಿ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರ ಮೊಹಾಲಿಯಲ್ಲಿರುವ ಮನೆ ಹಾಗೂ ಇತರೆ ಆರೋಪಿಗಳ ಮನೆ, ಕಚೇರಿ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸುಮಾರು 10 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಅಕ್ರಮ ಮರಳು ಗಣಿಗಾರಿಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಹಣ ವರ್ಗಾವಣೆ ಅಕ್ರಮ ಕಂಡು ಬಂದಿದ್ದರಿಂದ ಜಾರಿ ನಿರ್ದೇಶನಾಲಯ ಕೇಸ್ ಕೈಗೆತ್ತಿಕೊಂಡಿದೆ. ಪಂಜಾಬ್ ರಾಜ್ಯದಲ್ಲಿ ಫೆಬ್ರವರಿ 20ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬರಲಿದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಚುನಾವಣೆ ಸಂದರ್ಭದಲ್ಲಿ ತನ್ನ ವಿರೋಧಿಗಳ ಧ್ವನಿಯನ್ನು ಹತ್ತಿಕ್ಕಲು ಇಡಿ ಮತ್ತು ಸಿಬಿಐನಂತಹ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪದೇ ಪದೇ ಆರೋಪಿಸುತ್ತಿವೆ.

Illegal Sand Mining Case: Ed Raids Premises of Charanjit Singh Channi’s Nephew

ಕಳೆದ ತಿಂಗಳು, ರಾಜ್ಯದ ಎಲ್ಲಾ ಕಾಂಗ್ರೆಸ್ ಶಾಸಕರು ಮರಳು ಅಕ್ರಮ ದಂಧೆಯಲ್ಲಿ ತೊಡಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಆರೋಪಿಸಿದ್ದರು.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ರಾಜ್ಯದ ಸಿಎಂ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ಪಕ್ಷವನ್ನು ತೊರೆದ ಸಿಂಗ್, ಅಕ್ರಮ ವ್ಯವಹಾರದಲ್ಲಿ ತೊಡಗಿರುವ ಶಾಸಕರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದರು.

ಆದರೆ, ಶಾಸಕರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಿದ ಅವರು, "ಯಾರು ಭಾಗಿಯಾಗಿಲ್ಲ ಎಂದು ನನ್ನನ್ನು ಕೇಳಿ. ನಾನು ಹೆಸರುಗಳನ್ನು ಹೇಳಲು ಪ್ರಾರಂಭಿಸಿದರೆ, ನಾನು ಮೇಲಿನಿಂದ ಪ್ರಾರಂಭಿಸಬೇಕಾಗುತ್ತದೆ,'' ಎಂದಿದ್ದರು.

Recommended Video

IPL 2022 Exclusive: ಎಲ್ಲಾ ಒತ್ತಡದಿಂದ ಮುಕ್ತರಾದ Virat Kohli ಈಗ RCB ಗೆ ಮತ್ತೆ ಕ್ಯಾಪ್ಟನ್!! | Oneindia

ಏತನ್ಮಧ್ಯೆ, ಪ್ರಮುಖ ಸುದ್ದಿಸಂಸ್ಥೆ ಜೊತೆ ಮಾತನಾಡಿದ, ತನಿಖಾ ಸಂಸ್ಥೆಯ ಆಧಿಕಾರಿಯೊಬ್ಬರು, ''ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರು ಪಂಜಾಬ್ ರಿಯಲ್ಟರ್ಸ್ ಎಂಬ ಕಂಪನಿಯನ್ನು ರಚಿಸಿದ್ದಾರೆ ಮತ್ತು ನವಾಶಹರ್‌ನಲ್ಲಿರುವ ಮಲಿಕ್‌ಪುರ ಕ್ವಾರಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ, ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ ಎಂದಿದ್ದಾರೆ.

English summary
The Enforcement Directorate on Tuesday conducted raids at multiple locations in Punjab as part of a money laundering probe against illegal sand mining companies, merely a month before the Assembly polls in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X