ಲುಧಿಯಾನ ಸ್ಫೋಟ: ಮೃತಪಟ್ಟ ವ್ಯಕ್ತಿ ಗುರುತು ಪತ್ತೆ ಹಚ್ಚಿದ ಎಸ್‌ಐಟಿ
ಚಂಡೀಗಢ, ಡಿಸೆಂಬರ್ 25: ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟಿದ್ದ ವ್ಯಕ್ತಿ ವಜಾಗೊಂಡಿದ್ದ ಪೊಲೀಸ್ ಪೇದೆ ಗಗನ್ ದೀಪ್ ಸಿಂಗ್ ಎಂದು ತಿಳಿದುಬಂದಿದೆ.
ಸಿಂಗ್ ಅವರ ಕುಟುಂಬ ಸದಸ್ಯರು ಆತನ ಮೃತದೇಹವನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ವ್ಯಕ್ತಿಯ ಸಿಮ್ ಕಾರ್ಡ್ ನಿಂದ ಆತನ ಗುರುತು ಪತ್ತೆ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಗುರುವಾರದಂದು ಕೋರ್ಟ್ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿದ್ದು ಸಿಂಗ್ ಮೃತಪಟ್ಟಿದ್ದರು ಹಾಗೂ ಇನ್ನೂ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಪಂಜಾಬ್ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿತ್ತು. ಲುಧಿಯಾನದ ಪೊಲೀಸ್ ಆಯುಕ್ತ ಗುರ್ಪ್ರೀತ್ ಸಿಂಗ್ ಭುಲ್ಲರ್, ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಸುಳಿವು ದೊರೆತಿದೆ ಎಂದು ಹೇಳಿದ್ದರು.

ಖನ್ನ ಪ್ರದೇಶದ ನಿವಾಸಿಯಾಗಿರುವ ಗಗನ್ ದೀಪ್ ಸಿಂಗ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. 2019 ರಲ್ಲಿ ಡ್ರಗ್ಸ್ ಸಂಬಂಧಿತ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರಿಂದ ಆತನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೋರ್ಟ್ ಸಂಕೀರ್ಣದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಫೋಟದಲ್ಲಿ ಮೃತಪಟ್ಟ ಈ ಶಂಕಿತ ವ್ಯಕ್ತಿ, ಸ್ಫೋಟ ಸಾಧನವನ್ನು ಜೋಡಣೆ ಅಥವಾ ಇರಿಸಲು ಯತ್ನಿಸುತ್ತಿದ್ದ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪಂಜಾಬ್‌ನ ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್ನ ಒಳಗೆ ದಿಢೀರಾಗಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಚುನಾವಣೆ ನಡೆಯಲಿರುವ ಪಂಜಾಬ್‌ನ ಲುಧಿಯಾನ ಕೋರ್ಟ್ ಕಾಂಪ್ಲೆಕ್ಸ್ನಲ್ಲಿ ಈ ಸ್ಫೋಟ ಸಂಭವಿಸಿದೆ.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ, ಲುಧಿಯಾನದಲ್ಲಿ ಸ್ಫೋಟ ಸಂಭವಿಸಿದೆ. ನಾನು ತುರ್ತಾಗಿ ಸಭೆಯನ್ನು ಮುಗಿಸಿ ಲೂಧಿಯಾನಕ್ಕೆ ಹೋಗುತ್ತೇನೆ. ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪು ಮಾಡಿದವರನ್ನು ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ಮಧ್ಯಾಹ್ನ 12.22ರ ಸುಮಾರಿಗೆ ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಕೀಲರ ಮುಷ್ಕರ ನಡೆದಿದ್ದು, ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್ನಲ್ಲಿ ಕೆಲವೇ ಜನರು ಇದ್ದರು.
ಹೀಗಾಗಿ, ಇನ್ನಷ್ಟು ಜನರು ಈ ಸ್ಫೋಟಕ್ಕೆ ಬಲಿಯಾಗುವುದು ತಪ್ಪಿದಂತಾಗಿದೆ. ಬಾಂಬ್ ಸ್ಫೋಟದಲ್ಲಿ ಬಾತ್ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿದೆ.
ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ ಇಂತಹ ಕೃತ್ಯಗಳ ಹಿಂದೆ ಈ ದೇಶವಿರೋಧಿಗಳು ಇರಬಹುದು. ತಪ್ಪಿತಸ್ಥರನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಂಜಾಬ್ ಚುನಾವಣೆ ಹತ್ತಿರದಲ್ಲಿದೆ ಮತ್ತು ಇಂತಹ ಘಟನೆಗಳ ಬಗ್ಗೆ ಸರ್ಕಾರವು ಎಚ್ಚರವಾಗಿದೆ ಎಂದು ಸಿಎಂ ಚರಣ್ಜಿತ್ ಸಿಂಗ್ ಹೇಳಿದ್ದಾರೆ.
ದುರಂತ ಘಟನೆಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಮತ್ತು ನಾನು ಲೂಧಿಯಾನಕ್ಕೆ ತೆರಳುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications