ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲುಧಿಯಾನ ಸ್ಫೋಟ: ಮೃತಪಟ್ಟ ವ್ಯಕ್ತಿ ಗುರುತು ಪತ್ತೆ ಹಚ್ಚಿದ ಎಸ್‌ಐಟಿ

|
Google Oneindia Kannada News

ಚಂಡೀಗಢ, ಡಿಸೆಂಬರ್ 25: ಲುಧಿಯಾನ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಮೃತಪಟ್ಟಿದ್ದ ವ್ಯಕ್ತಿ ವಜಾಗೊಂಡಿದ್ದ ಪೊಲೀಸ್ ಪೇದೆ ಗಗನ್ ದೀಪ್ ಸಿಂಗ್ ಎಂದು ತಿಳಿದುಬಂದಿದೆ.
ಸಿಂಗ್ ಅವರ ಕುಟುಂಬ ಸದಸ್ಯರು ಆತನ ಮೃತದೇಹವನ್ನು ಗುರುತಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತ ವ್ಯಕ್ತಿಯ ಸಿಮ್ ಕಾರ್ಡ್ ನಿಂದ ಆತನ ಗುರುತು ಪತ್ತೆ ಸಾಧ್ಯವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಗುರುವಾರದಂದು ಕೋರ್ಟ್ ಸಂಕೀರ್ಣದಲ್ಲಿ ಸ್ಫೋಟ ಸಂಭವಿಸಿದ್ದು ಸಿಂಗ್ ಮೃತಪಟ್ಟಿದ್ದರು ಹಾಗೂ ಇನ್ನೂ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಬೆನ್ನಲ್ಲೇ ಪಂಜಾಬ್ ಸರ್ಕಾರ ರಾಜ್ಯದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿತ್ತು. ಲುಧಿಯಾನದ ಪೊಲೀಸ್ ಆಯುಕ್ತ ಗುರ್ಪ್ರೀತ್ ಸಿಂಗ್ ಭುಲ್ಲರ್, ತನಿಖೆಗೆ ಸಂಬಂಧಿಸಿದಂತೆ ಮಹತ್ವದ ಸುಳಿವು ದೊರೆತಿದೆ ಎಂದು ಹೇಳಿದ್ದರು.

Man Killed In Ludhiana Court Blast Was Bombe

ಖನ್ನ ಪ್ರದೇಶದ ನಿವಾಸಿಯಾಗಿರುವ ಗಗನ್ ದೀಪ್ ಸಿಂಗ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. 2019 ರಲ್ಲಿ ಡ್ರಗ್ಸ್ ಸಂಬಂಧಿತ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರಿಂದ ಆತನನ್ನು ಸೇವೆಯಿಂದ ವಜಾಗೊಳಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೋರ್ಟ್ ಸಂಕೀರ್ಣದ ಎರಡನೇ ಮಹಡಿಯ ಶೌಚಾಲಯದಲ್ಲಿ ಸ್ಫೋಟದಲ್ಲಿ ಮೃತಪಟ್ಟ ಈ ಶಂಕಿತ ವ್ಯಕ್ತಿ, ಸ್ಫೋಟ ಸಾಧನವನ್ನು ಜೋಡಣೆ ಅಥವಾ ಇರಿಸಲು ಯತ್ನಿಸುತ್ತಿದ್ದ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಪಂಜಾಬ್​ನ ಲುಧಿಯಾನ ಕೋರ್ಟ್​ ಕಾಂಪ್ಲೆಕ್ಸ್​ನ ಒಳಗೆ ದಿಢೀರಾಗಿ ಸ್ಫೋಟ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮಧ್ಯಾಹ್ನ ಚುನಾವಣೆ ನಡೆಯಲಿರುವ ಪಂಜಾಬ್‌ನ ಲುಧಿಯಾನ ಕೋರ್ಟ್​ ಕಾಂಪ್ಲೆಕ್ಸ್​ನಲ್ಲಿ ಈ ಸ್ಫೋಟ ಸಂಭವಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ, ಲುಧಿಯಾನದಲ್ಲಿ ಸ್ಫೋಟ ಸಂಭವಿಸಿದೆ. ನಾನು ತುರ್ತಾಗಿ ಸಭೆಯನ್ನು ಮುಗಿಸಿ ಲೂಧಿಯಾನಕ್ಕೆ ಹೋಗುತ್ತೇನೆ. ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪು ಮಾಡಿದವರನ್ನು ಬಿಡುವ ಮಾತೇ ಇಲ್ಲ ಎಂದು ಹೇಳಿದ್ದಾರೆ.

ಮಧ್ಯಾಹ್ನ 12.22ರ ಸುಮಾರಿಗೆ ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ವಾಶ್ ರೂಂನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಕೀಲರ ಮುಷ್ಕರ ನಡೆದಿದ್ದು, ಸ್ಫೋಟದ ವೇಳೆ ನ್ಯಾಯಾಲಯದ ಕಾಂಪ್ಲೆಕ್ಸ್​ನಲ್ಲಿ ಕೆಲವೇ ಜನರು ಇದ್ದರು.

ಹೀಗಾಗಿ, ಇನ್ನಷ್ಟು ಜನರು ಈ ಸ್ಫೋಟಕ್ಕೆ ಬಲಿಯಾಗುವುದು ತಪ್ಪಿದಂತಾಗಿದೆ. ಬಾಂಬ್ ಸ್ಫೋಟದಲ್ಲಿ ಬಾತ್​ರೂಮಿನ ಗೋಡೆಗಳು ನೆಲಸಮಗೊಂಡಿದ್ದು, ಕಿಟಕಿಯ ಗಾಜು ಕೂಡ ಒಡೆದು ಹೋಗಿದೆ.

ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ ಇಂತಹ ಕೃತ್ಯಗಳ ಹಿಂದೆ ಈ ದೇಶವಿರೋಧಿಗಳು ಇರಬಹುದು. ತಪ್ಪಿತಸ್ಥರನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಪಂಜಾಬ್ ಚುನಾವಣೆ ಹತ್ತಿರದಲ್ಲಿದೆ ಮತ್ತು ಇಂತಹ ಘಟನೆಗಳ ಬಗ್ಗೆ ಸರ್ಕಾರವು ಎಚ್ಚರವಾಗಿದೆ ಎಂದು ಸಿಎಂ ಚರಣ್​ಜಿತ್ ಸಿಂಗ್ ಹೇಳಿದ್ದಾರೆ.

ದುರಂತ ಘಟನೆಯ ನಂತರದ ಪರಿಸ್ಥಿತಿಯನ್ನು ಅವಲೋಕಿಸಲು ಮುಖ್ಯಮಂತ್ರಿ ಮತ್ತು ನಾನು ಲೂಧಿಯಾನಕ್ಕೆ ತೆರಳುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವಾ ಹೇಳಿದ್ದಾರೆ.

English summary
The body of the man who was killed in the blast at a court in Punjab's Ludhiana has been identified and is believed to be that of the bomber, and more startlingly, a former police officer.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X