Breaking: ಚಂಡೀಗಡದಲ್ಲಿ ಮಾಸ್ಕ್ ಕಡ್ಡಾಯ, ಉಲ್ಲಂಘಿಸಿದರೆ ದಂಡ
ಚಂಡೀಗಢ, ಏಪ್ರಿಲ್ 25; ಚಂಡೀಗಢ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ ದಂಡ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಹೊಸ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯಗಳು ಮಾಸ್ಕ್ ಕಡ್ಡಾಯಗೊಳಿಸುತ್ತಿವೆ. ಸೋಮವಾರ ಚಂಡೀಗಢ ಆಡಳಿತ ಸಹ ಈ ಕುರಿತು ಆದೇಶ ಹೊರಡಿಸಿದೆ. ನಿಯಮ ಉಲ್ಲಂಘನೆ ಮಾಡಿದರೆ 500 ರೂ. ದಂಡ ಪಾವತಿ ಮಾಡಬೇಕು ಎಂದು ಹೇಳಿದೆ.

ಸಾರ್ವಜನಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು, ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ನಿಯಮ ಉಲ್ಲಂಘನೆ ಆಗದಂತೆ ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಮಕ್ಕಳ ಕೋವಿಡ್ ಲಸಿಕೆ ಸ್ಥಿತಿಗತಿ ಬಗ್ಗೆ ಸಭೆ ನಡೆಸಲಾಗಿತ್ತು. ಲಸಿಕೆ ಪಡೆಯದ ಮಕ್ಕಳಿಗೆ ಆನ್‌ಲೈನ್ ಮೂಲಕ ಮಾತ್ರ ತರಗತಿಗಳನ್ನು ನಡೆಸಬೇಕು. ಶಾಲೆಗಳಿಗೆ ಅವರಿಗೆ ಪ್ರವೇಶ ನೀಡಬಾರದು ಎಂದು ತೀರ್ಮಾನಿಸಲಾಗಿತ್ತು.
ನಗರದಲ್ಲಿ ಲಸಿಕೆ ಪಡೆಯದ 12 ರಿಂದ 18ರ ವಯೋಮಾನದ ಮಕ್ಕಳಿಗೆ ಲಸಿಕೆ ನೀಡಲು ವಿಶೇಷ ಅಭಿಯಾನ ಆರಂಭಿಸಲಾಗಿದೆ. ಆರೋಗ್ಯ ಮತ್ತು ಶಿಕ್ಷಣ ಇಲಾಖೆ ಮಕ್ಕಳು ಲಸಿಕೆ ಪಡೆಯುವಂತೆ ವಿಶೇಷ ಅಭಿಯಾನವನ್ನು ಸಹ ಆರಂಭಿಸಿವೆ.
ವಿವಿಧ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.












Click it and Unblock the Notifications