ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹರ್ಯಾಣ ಸಿಎಂ ಆಗಿ ಮನೋಹರ್ ಖಟ್ಟರ್ ಪಮಾಣ ವಚನ

|
Google Oneindia Kannada News

ಚಂಡೀಗಢ್, ಅಕ್ಟೋಬರ್ 27 : ಹರ್ಯಾಣದಲ್ಲಿ ಬಿಜೆಪಿ-ಜೆಪಿಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಮನೋಹರ್ ಲಾಲ್ ಖಟ್ಟರ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಹರ್ಯಾಣದಲ್ಲಿ ಅತಂತ್ರ ಫಲಿತಾಂಶ ಬಂದಿತ್ತು.

ಚಂಡೀಗಢ್‌ನಲ್ಲಿರುವ ರಾಜಭವನಲ್ಲಿ ಭಾನುವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ರಾಜ್ಯಪಾಲ ಸತ್ಯದೇವ್ ನಾರಾಯಣ ಆರ್ಯ ಮನೋಹರ್ ಲಾಲ್ ಖಟ್ಟರ್‌ಗೆ ಪ್ರಮಾಣ ವಚನ ಬೋಧಿಸಿದರು.

ಮಹಾರಾಷ್ಟ್ರ, ಹರ್ಯಾಣ ಫಲಿತಾಂಶ 2019: ಗೆದ್ದವರು, ಸೋತವರು ಮಹಾರಾಷ್ಟ್ರ, ಹರ್ಯಾಣ ಫಲಿತಾಂಶ 2019: ಗೆದ್ದವರು, ಸೋತವರು

Manohar Lal Khattar Takes Oath As Haryana CM

ಹರ್ಯಾಣದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಬೆಂಬಲ ನೀಡಿರುವ ಜೆಪಿಪಿ ಪಕ್ಷಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ಸಿಕ್ಕಿದೆ. ದುಷ್ಯಂತ್ ಚೌಟಾಲಾ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಹರ್ಯಾಣದಲ್ಲಿ ಬಿಜೆಪಿ, ಜೆಜೆಪಿ ಮೈತ್ರಿ ಸರ್ಕಾರ; ಖಟ್ಟರ್ ಸಿಎಂಹರ್ಯಾಣದಲ್ಲಿ ಬಿಜೆಪಿ, ಜೆಜೆಪಿ ಮೈತ್ರಿ ಸರ್ಕಾರ; ಖಟ್ಟರ್ ಸಿಎಂ

90 ಸದಸ್ಯ ಬಲದ ಹರ್ಯಾಣ ವಿಧಾನಸಭೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 31, ಜೆಜೆಪಿ 10, ಐಎನ್‌ಎಲ್‌ಡಿ 1, ಹೆಚ್‌ಎಲ್‌ಪಿ 1 ಸ್ಥಾನದಲ್ಲಿ ಜಯಗಳಿಸಿವೆ. 7 ಪಕ್ಷೇತರರು ಗೆಲುವು ಸಾಧಿಸಿದ್ದಾರೆ. ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 46.

ಹರ್ಯಾಣ ಚುನಾವಣೆ ಹೊತ್ತಲ್ಲಿ ಕಣ್ಣಿಗೆ ಬಿದ್ದ ಈ 12 ರ ಪತ್ರಕರ್ತ! ಹರ್ಯಾಣ ಚುನಾವಣೆ ಹೊತ್ತಲ್ಲಿ ಕಣ್ಣಿಗೆ ಬಿದ್ದ ಈ 12 ರ ಪತ್ರಕರ್ತ!

ಯಾವ ಪಕ್ಷಕ್ಕೂ ಸರ್ಕಾರ ರಚನೆ ಮಾಡಲು ಬಹುಮತ ಬಾರದ ಕಾರಣ ಬಿಜೆಪಿ ಮತ್ತು ಜೆಜೆಪಿ ಮೈತ್ರಿ ಮಾಡಿಕೊಂಡು ಸರ್ಕಾರವನ್ನು ರಚಿಸಿವೆ. ಮನೋಹರ್ ಲಾಲ್ ಖಟ್ಟರ್ 2ನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

English summary
Manohar Lal Khattar took oath as the Chief Minister of Haryana on October 27, 2019. For the second time Manohar Lal Khattar CM for the state. Dushyant Chautala of the JJP get the deputy chief minister after his party extended support to BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X