ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಂಡೀಗಢ ವಿವಿ ಹಾಸ್ಟೆಲ್ ಎಂಎಂಎಸ್‌ ವೈರಲ್, ನಾಲ್ವರು ಆತ್ಮಹತ್ಯೆ

|
Google Oneindia Kannada News

ಚಂಡೀಗಢ, ಸೆಪ್ಟೆಂಬರ್ 18; ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಎಂಎಂಎಸ್‌ ಒಂದು ವೈರಲ್ ಆಗಿದೆ. ಹಾಸ್ಟೆಲ್‌ನಲ್ಲಿದ್ದ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿನಿಯರು ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಹಲವು ವಿದ್ಯರ್ಥಿನಿಯರ ಎಂಎಂಎಸ್ ವೈರಲ್ ಆಗಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ ಆಕೆಯ ಬಾಯ್‌ಫ್ರೆಂಡ್‌ಗೆ ಕಳಿಸಿದ್ದಳು.

 ಮಾನವ ತಿರಂಗದ ಮೂಲಕ ಗಿನ್ನಿಸ್‌ ದಾಖಲೆ ಮಾಡಿದ ಚಂಡೀಗಢ ಮಾನವ ತಿರಂಗದ ಮೂಲಕ ಗಿನ್ನಿಸ್‌ ದಾಖಲೆ ಮಾಡಿದ ಚಂಡೀಗಢ

Chandigarh university

ವಿದ್ಯಾರ್ಥಿನಿಯ ಬಾಯ್ ಫ್ರೆಂಡ್ ಮೂಲಕ ಎಂಎಂಎಸ್ ಹಲವು ಕಡೆ ಹರಿದಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್ ವಿದ್ಯಾರ್ಥಿನಿಯರು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಚಂಡೀಗಢ-ಮೊಹಾಲಿ ಗಡಿಯಲ್ಲಿ ರೈತರ ಪ್ರತಿಭಟನೆ 'ಅನಗತ್ಯ' ಎಂದ ಸಿಎಂ ಚಂಡೀಗಢ-ಮೊಹಾಲಿ ಗಡಿಯಲ್ಲಿ ರೈತರ ಪ್ರತಿಭಟನೆ 'ಅನಗತ್ಯ' ಎಂದ ಸಿಎಂ

ಮೊಹಾಲಿ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವಿಡಿಯೋ, ಫೋಟೋಗಳನ್ನು ಶೇರ್ ಮಾಡಿದ್ದಾಳೆ ಎನ್ನಲಾದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆಯಲಾಗಿದೆ.

 ಫಾಜಿಲ್‌ ಹಂತಕರಿಗೆ ಆಶ್ರಯ ನೀಡಿದ ಆರೋಪಿಗೆ ಜಾಮೀನು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ ಫಾಜಿಲ್‌ ಹಂತಕರಿಗೆ ಆಶ್ರಯ ನೀಡಿದ ಆರೋಪಿಗೆ ಜಾಮೀನು, ಮುಸ್ಲಿಂ ಸಂಘಟನೆಗಳಿಂದ ಪ್ರತಿಭಟನೆ

ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ವರದಿಗಳನ್ನು ಪೊಲೀಸರು ಮತ್ತು ವಿಶ್ವವಿದ್ಯಾಲಯ ತಳ್ಳಿ ಹಾಕಿದೆ. ಇದು ಕೇವಲ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಎಂದು ಹೇಳಿದೆ.

ಈ ಪ್ರಕರಣದ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ಸಹ ಮಾಹಿತಿ ನೀಡಲಾಗಿದೆ. ಮೊಹಾಲಿ ಪೊಲೀಸರು ಸಹ ಎಫ್ಐಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಾಸ್ಟೆಲ್‌ನ ಒಬ್ಬಳು ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಸ್ಟೆಲ್‌ನಲ್ಲಿದ್ದ ಸುಮಾರು 60 ವಿದ್ಯಾರ್ಥಿಗಳು ಸ್ನಾನ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿ ಶಿಮ್ಲಾದಲ್ಲಿರುವ ತನ್ನ ಬಾಯ್‌ ಫ್ರೆಂಡ್‌ಗೆ ಮೊದಲು ವಿಡಿಯೋ ಕಳಿಸಿದ್ದಳು.

ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. "ಇದು ಸೂಕ್ಷ್ಮವಾದ ವಿಚಾರವಾಗಿದೆ. ನಮ್ಮ ಸಹೋದರಿಯರು ಮತ್ತು ಮಕ್ಕಳ ಗೌರವದ ಪ್ರಶ್ನೆಯಾಗಿದೆ. ಮಾಧ್ಯಮದವರು ಸೇರಿ ಎಲ್ಲರೂ ಎಚ್ಚರವಾಗಿರಬೇಕು" ಎಂದು ಕರೆ ನೀಡಿದ್ದಾರೆ.

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೂರಾರು ವಿದ್ಯಾರ್ಥಿನಿಯರು ಶನಿವಾರ ರಾತ್ರಿ ಪ್ರತಿಭಟನೆ ಆರಂಭಿಸಿದರು. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿಗಳಿಗೆ ತಡೆ ಹಾಕಲು ವಿವಿ ಆಡಳಿತ ಮಂಡಳಿ ಪ್ರಯತ್ನ ನಡೆಸಿದೆ.

ವಿಡಿಯೋ ಕಳಿಸಿದ ವಿದ್ಯಾರ್ಥಿನಿ ವಿರುದ್ಧ ಐಪಿಸಿ ಸೆಕ್ಷನ್ 354 ಸಿ, ಐಟಿ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ; ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777.

English summary
Protest at Chandigarh university after MMS of various girls living in hostel of university went viral. Four girls committed suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X