ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ದಲಿತ ವ್ಯಕ್ತಿ ಸಿಎಂ ಆಗಿದ್ದು ನವಜ್ಯೋತ್‌ಗೆ ತಡೆಯಲು ಆಗಿಲ್ಲ': ಆಪ್‌

|
Google Oneindia Kannada News

ಚಂಡೀಗಢ, ಸೆಪ್ಟೆಂಬರ್‌, 28: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ಸಲ್ಲಿಸಿದ್ದಾರೆ. ಈ ಅನಿರೀಕ್ಷಿತ ಬೆಳವಣಿಗೆಯು ಪಂಜಾಬ್‌ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಈಗಾಗಲೇ ಹಲವಾರು ಮಂದಿ ಈ ಅನಿರೀಕ್ಷಿತ ಬೆಳವಣಿಗೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ನಡುವೆ ಆಮ್‌ ಆದ್ಮಿ ಪಕ್ಷವು, "ನವಜ್ಯೋತ್ ಸಿಂಗ್ ಸಿಧುಗೆ ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನವನ್ನು ದಲಿತ ನಾಯಕರಿಗೆ ನೀಡಿದ್ದು ಸಹಿಸಲು ಆಗಲಿಲ್ಲ," ಎಂದು ಹೇಳಿದೆ.

ಇಂದು ಪಂಜಾಬ್‌ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ತನ್ನ ರಾಜೀನಾಮೆ ಪತ್ರದಲ್ಲಿ "ಪಂಜಾಬ್ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಿಯಾಗಲು ಸಿದ್ಧನಿಲ್ಲ, ಅಧ್ಯಕ್ಷ ಸ್ಥಾನ ತೊರೆದರೂ ಪಕ್ಷದಲ್ಲಿದ್ದು ದುಡಿಯುವೆ," ಎಂದಿದ್ದಾರೆ.

ಪಂಜಾಬ್‌ ಮಾಜಿ ಸಿಎಂ ಅಮರೀಂದರ್‌ ಇಂದು ಶಾ, ನಡ್ಡಾರನ್ನು ಭೇಟಿ ಸಾಧ್ಯತೆ: ಬಿಜೆಪಿ ಸೇರ್ಪಡೆ?ಪಂಜಾಬ್‌ ಮಾಜಿ ಸಿಎಂ ಅಮರೀಂದರ್‌ ಇಂದು ಶಾ, ನಡ್ಡಾರನ್ನು ಭೇಟಿ ಸಾಧ್ಯತೆ: ಬಿಜೆಪಿ ಸೇರ್ಪಡೆ?

ಪಂಜಾಬ್‌ನಲ್ಲಿ ಮುಂದಿನ ವರ್ಷ ವಿಧಾನಸಭೆ ನಡೆಯಲಿದೆ. ಈ ನಡುವೆ ಪಂಜಾಬ್‌ ಕಾಂಗ್ರೆಸ್‌ ರಾಜಕೀಯದಲ್ಲಿ ಪ್ರಮುಖ ಬದಲವಾಣೆಗಳು ಆಗಿದೆ. ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿರುವ ಆಮ್‌ ಆದ್ಮಿ ಪಕ್ಷದ ವಕ್ತಾರ, "ನವಜ್ಯೋತ್ ಸಿಂಗ್ ಸಿಧು ದಲಿತ ವಿರೋಧಿ," ಎಂದು ಹೇಳಿದ್ದಾರೆ.

Navjot Sidhu Couldnt Stand A Dalit Becoming Punjab Chief Minister Said Aam Aadmi Party

"ನವಜ್ಯೋತ್ ಸಿಂಗ್ ಸಿಧು ದಲಿತ ವಿರೋಧಿ ಎಂದು ಈ ಮೂಲಕ ತಿಳಿದು ಬಂದಿದೆ. ಪಂಜಾಬ್‌ ಮುಖ್ಯಮಂತ್ರಿಯಾಗಿ ಬಡ ದಲಿತ ನಾಯಕರನ್ನು ಮಾಡಲಾಗಿದೆ. ಇದು ನವಜ್ಯೋತ್ ಸಿಂಗ್ ಸಿಧುಗೆ ಸಹಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ದುಖಃದ ವಿಚಾರ," ಎಂದು ಆಮ್‌ ಆದ್ಮಿ ಪಕ್ಷದ ವಕ್ತಾರ ಸೌಹಬ್‌ ಭಾರಧ್ವಾಜ್‌ ಎಂದಿದ್ದಾರೆ. ಪಂಜಾಬ್‌ನಲ್ಲಿ ಆಮ್‌ ಆದ್ಮಿ ಪಕ್ಷವು ವಿರೋಧ ಪಕ್ಷವಾಗಿದೆ.

ನವಜ್ಯೋತ್ ಸಿಂಗ್ ಸಿಧು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, "ಪಂಜಾಬ್ ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ರಾಜಿಯಾಗಲು ಸಿದ್ಧನಿಲ್ಲ. ವೈಯಕ್ತಿಕ ನಿಂದನೆ, ತೇಜೋವಧೆಯನ್ನು ಸಹಿಸಲು ಸಾಧ್ಯವಿಲ್ಲ," ಎಂದು ಹೇಳಿದ್ದಾರೆ. ಆದರೆ ಚರಣ್ ಜೀತ್‌ರನ್ನು ಮುಖ್ಯಮಂತ್ರಿ ಮಾಡಿದ್ದನ್ನು ನವಜ್ಯೋತ್ ಸಿಂಗ್ ಸಿಧು ಸ್ವಾಗತ ಮಾಡಿದ್ದರು.

ಸಿಧುಗೆ ಟ್ವೀಟ್‌ನಲ್ಲಿ ತಿರುಗೇಟು ಕೊಟ್ಟ ಅಮರಿಂದರ್ ಸಿಂಗ್!ಸಿಧುಗೆ ಟ್ವೀಟ್‌ನಲ್ಲಿ ತಿರುಗೇಟು ಕೊಟ್ಟ ಅಮರಿಂದರ್ ಸಿಂಗ್!

ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಸಿಧು ಪಿತೂರಿ ನಡೆಸಿದ್ದರು ಎಂದು ಹೇಳಲಾಗುತ್ತಿತ್ತು. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಅಮರೀಂದರ್ ಸಿಂಗ್ ಅವರು ಸಿಧು ವಿರುದ್ಧ ತೀವ್ರ ವಾಕ್‌ ಪ್ರಹಾರ ನಡೆಸಿದ್ದರು. ಇನ್ನು ಈಗ ನವಜ್ಯೋತ್ ಸಿಂಗ್ ಸಿಧು ಪಂಜಾಬ್‌ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿಚಾರದಲ್ಲಿಯೂ ಅಮರೀಂದರ್ ಸಿಂಗ್ ಟ್ವೀಟ್‌ ಮೂಲಕ ತಿರುಗೇಟು ನೀಡಿದ್ದಾರೆ. "ನಾನು ನಿಮಗೆ ಹೇಳಿದ್ದೆ. ಪಂಬಾಜ್‌ನಂತಹ ಗಡಿ ರಾಜ್ಯಕ್ಕೆ ಅವರು ತಕ್ಕ ವ್ಯಕ್ತಿಯಲ್ಲ," ಎಂದು ನವಜೋತ್ ಸಿಂಗ್ ಸಿಧುಗೆ ತಿರುಗೇಟು ನೀಡಿದ್ದಾರೆ.

ಈ ನಡುವೆ ಅಮರೀಂದರ್ ಸಿಂಗ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಪಂಜಾಬ್‌ ಕಾಂಗ್ರೆಸ್‌ನ ರಾಜಕೀಯ ಬಿಕ್ಕಟ್ಟಿನ ಬೆನ್ನಲ್ಲೇ ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಮರೀಂದರ್‌ ಸಿಂಗ್‌ ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾರನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾರೆ ಎಂದು ಮಾಹಿತಿ ಲಭಿಸಿದೆ. ಈ ಹಿನ್ನೆಲೆ ಪಂಜಾಬ್‌ ಕಾಂಗ್ರೆಸ್‌ನ ಮುಂದಿನ ನಾಯಕತ್ವವನ್ನು ಯಾರು ವಹಿಸಲಿದ್ದಾರೆ ಎಂಬುವುದು ಕೂಡಾ ನಾವು ಕಾದು ನೋಡಬೇಕಿದೆ. ಮುಖ್ಯಮಂತ್ರಿರ ಅನಿರೀಕ್ಷಿತ ಆಯ್ಕೆಯಂತೆಯೇ ಈಗ ಪಂಜಾಬ್‌ ಕಾಂಗ್ರೆಸ್‌ನ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.

(ಒನ್‌ಇಂಡಿಯಾ ಸುದ್ದಿ)

English summary
Navjot Singh Sidhu Couldn't Stand A Dalit Becoming Punjab Chief Minister Said Aam Aadmi Party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X