ನವಜೋತ್ ಸಿಂಗ್ ಸಿಧು ರಾಜೀನಾಮೆ ವಾಪಸ್; ಹೈಡ್ರಾಮಕ್ಕೆ ತೆರೆ!
ಚಂಡೀಗಢ್, ಅಕ್ಟೋಬರ್ 15; ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿನ ಗೊಂದಲಗಳಿಗೆ ತೆರೆ ಬಿದ್ದಂತೆ ಕಾಣುತ್ತಿದೆ. ನವಜೋತ್ ಸಿಂಗ್ ಸಿಧು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ವಾಪಸ್ ಪಡೆಯಲಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ನವಜೋತ್ ಸಿಂಗ್ ಸಿಧು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿಯಾದರು. ರಾಜ್ಯ ಕಾಂಗ್ರೆಸ್‌ನಲ್ಲಿನ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಿದರು. ನವಜೋತ್ ಸಿಂಗ್ ಸಿಧು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಮುಂದುವರೆಯಲಿದ್ದು, ಪಕ್ಷದಲ್ಲಿ ಗೊಂದಲಗಳು ಬಗೆಹರಿಯಲಿವೆ.
He (Sidhu) shared his concerns with Rahul Gandhi. We have told him that his concerns will be taken care of here. He assured Rahul Gandhi that he has withdrawn his resignation and he will resume his duties as the PCC president: AICC in charge for Punjab, Harish Rawat pic.twitter.com/aHY168jclZ
— ANI (@ANI) October 15, 2021
ನವದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿ ಬಳಿಕ ಮಾತನಾಡಿದ ನವಜೋತ್ ಸಿಂಗ್ ಸಿಧು, "ನಾನು ನನ್ನ ಕಾಳಜಿಯನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಂಡಿದ್ದೇನೆ. ಎಲ್ಲವೂ ಬಗೆಹರಿಯಲಿವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮಾತನಾಡಿ, "ನವಜೋತ್ ಸಿಂಗ್ ಸಿಧು ತಮ್ಮ ಕಾಳಜಿಗಳನ್ನು ರಾಹುಲ್ ಗಾಂಧಿ ಜೊತೆ ಹಂಚಿಕೊಂಡಿದ್ದಾರೆ. ರಾಜೀನಾಮೆಯನ್ನು ವಾಪಸ್ ಪಡೆದು ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರೆಯಲಿದ್ದೇನೆ ಎಂದು ಅವರು ರಾಹುಲ್ ಗಾಂಧಿಗೆ ಭರವಸೆ ನೀಡಿದ್ದಾರೆ" ಎಂದು ಹೇಳಿದರು.
ನವಜೋತ್ ಸಿಂಗ್ ಸಿಧು ಈ ವರ್ಷದ ಜುಲೈನಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರಾಗಿ ಅಧಿಕಾರವಹಿಸಿಕೊಂಡಿದ್ದರು. ಬಳಿಕ ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜೊತೆ ಅಸಮಾಧಾನ ಉಂಟಾಗಿತ್ತು.
ಪಂಜಾಬ್ ಕಾಂಗ್ರೆಸ್‌ನಲ್ಲಿನ ಬೆಳವಣಿಗೆ ಹೈಕಮಾಂಡ್ ನಾಯಕರಿಗೆ ಸಂಕಷ್ಟ ತಂದಿತ್ತು. ವರಿಷ್ಠರು ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಪಡೆದಿದ್ದರು. ಪಂಜಾಬ್‌ನ 16ನೇ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಚನ್ನಿ ಅಧಿಕಾರ ಸ್ವೀಕಾರ ಮಾಡಿದ್ದರು.
ಸೆಪ್ಟೆಂಬರ್ 28ರಂದು ನವಜೋತ್ ಸಿಂಗ್ ಸಿಧು ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಪತ್ರವನ್ನು ಬರೆದು ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದರು.
ರಾಜೀನಾಮೆ ಪತ್ರದಲ್ಲಿ ಅವರು ಹಲವು ವಿಚಾರದಲ್ಲಿ ರಾಜಿಯಾಗಿದ್ದು, ಇದೇ ಕಾರಣಕ್ಕೆ ವ್ಯಕ್ತಿತ್ವದಲ್ಲಿ ಕುಸಿತ ಉಂಟಾಗುತ್ತಿದೆ. ಪಂಜಾಬ್ ರಾಜ್ಯದ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣದಲ್ಲಿ ಯಾವುದೇ ಕಾರಣಕ್ಕೂ ರಾಜಿ ಯಾಗುವುದಿಲ್ಲ ಎಂದು ಬರೆದಿದ್ದರು.
ಗುರುವಾರ ನವಜೋತ್ ಸಿಂಗ್ ಸಿಧು ಮಾಧ್ಯಮಗಳ ಜೊತೆ ಮಾತನಾಡಿ, "ಪಕ್ಷದ ಅಧ್ಯಕ್ಷರು, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಅವರು ಕೈಗೊಳ್ಳುವ ತೀರ್ಮಾನ ಪಂಜಾಬ್ ಒಳಿತಿಗಾಗಿಯೇ ಆಗಿರುತ್ತದೆ" ಎಂದು ಹೇಳಿದ್ದರು.
ನವಜೋತ್ ಸಿಂಗ್ ಸಿಧು ಗುರುವಾರವೇ ದೆಹಲಿಗೆ ತೆರಳಿದ್ದು, ಎಐಸಿಸಿ ಪ್ರಧಾನ ಕಾರ್ಯರ್ಶಿಗಳಾದ ಕೆ. ಸಿ. ವೇಣುಗೋಪಾಲ್, ಹರೀಶ್ ರಾವತ್ ಭೇಟಿಯಾಗಿ ಮಾತುಕತೆ ನಡೆಸಿದ್ದರು. ಆಗಲೇ ರಾಜ್ಯ ಕಾಂಗ್ರೆಸ್‌ನ ಬಿಕ್ಕಟ್ಟು ಶಮನಗೊಳ್ಳುವ ಸೂಚನೆ ಸಿಕ್ಕಿತ್ತು.
ಸೆಪ್ಟೆಂಬರ್ 28ರಂದು ಸಿಧು ರಾಜೀನಾಮೆ ನೀಡಿದರೂ ಕಾಂಗ್ರೆಸ್ ಹೈಕಮಾಂಡ್ ನಾಯಕರು ಅದನ್ನು ಒಪ್ಪಿರಲಿಲ್ಲ. ಸಿಧು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿರಲೂ ಇಲ್ಲ. ಶುಕ್ರವಾರ ಅವರು ರಾಹುಲ್ ಗಾಂಧಿ ಭೇಟಿ ಮಾಡಿ ಮಾತುಕತೆಯನ್ನು ನಡೆಸಿದ್ದಾರೆ.
ಪ್ರಸ್ತುತ ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರವಿದೆ. 2022ರಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪಕ್ಷದಲ್ಲಿನ ಗೊಂದಲ ಬಗೆಹರಿಸದಿದ್ದರೆ ಚುನಾವಣೆಯಲ್ಲಿ ಕಷ್ಟವಾಗಲಿದೆ ಎಂಬುದು ಹೈಕಮಾಂಡ್ ನಾಯಕರಿಗೂ ತಿಳಿದಿತ್ತು. ಅಂತಿಮವಾಗಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ವರಿಷ್ಠರು ಮುಂದಾಗಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications