ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ಜುಲೈ 23ಕ್ಕೆ ಸಿಧು ಅಧಿಕಾರ ಸ್ವೀಕಾರ

|
Google Oneindia Kannada News

ಚಂಡೀಗಢ್, ಜುಲೈ 21; ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಸಿಧು ನೇಮಕದ ವಿಚಾರದಲ್ಲಿಯೇ ರಾಜ್ಯ ಕಾಂಗ್ರೆಸ್‌ನಲ್ಲಿ ಅಸಮಾಧಾನವಿದೆ.

ಭಾನುವಾರ ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ನೇಮಕ ಮಾಡಲಾಗಿತ್ತು. ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿರೋಧದ ನಡುವೆಯೇ ಈ ನೇಮಕ ನಡೆದಿತ್ತು.

ಸಿಧು ಮೊದಲು ಅಮರಿಂದರ್ ಬಳಿ ಕ್ಷಮೆ ಕೇಳಬೇಕು: ಸಿಎಂ ಸಲಹೆಗಾರಸಿಧು ಮೊದಲು ಅಮರಿಂದರ್ ಬಳಿ ಕ್ಷಮೆ ಕೇಳಬೇಕು: ಸಿಎಂ ಸಲಹೆಗಾರ

ಶುಕ್ರವಾರ ನವಜೋತ್ ಸಿಂಗ್ ಸಿಧು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಅಮರಿಂದರ್ ಸಿಂಗ್‌ಗೆ ಸಹ ಆಹ್ವಾನ ನೀಡಲಾಗುತ್ತದೆ.

 'ಪಯಣ ಈಗ ಆರಂಭ': ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾದ ಬಳಿಕ ಗಾಂಧಿ ಕುಟುಂಬಕ್ಕೆ ಸಿಧು ಧನ್ಯವಾದ 'ಪಯಣ ಈಗ ಆರಂಭ': ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾದ ಬಳಿಕ ಗಾಂಧಿ ಕುಟುಂಬಕ್ಕೆ ಸಿಧು ಧನ್ಯವಾದ

Navjot Singh Sidhu

ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಹಲವು ಭಿನ್ನಾಭಿಪ್ರಾಯಗಳಿವೆ. ಈ ಕುರಿತು ಅವರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜೊತೆಗೂ ಮಾತುಕತೆಯನ್ನು ನಡೆಸಿದ್ದರು. ಆದರೂ ನವಜೋತ್ ಸಿಂಗ್ ಸಿಧು ಅಧ್ಯಕ್ಷರಾಗಿ ನೇಮಕಗೊಂಡರು.

ನವ್‌ಜೋತ್‌ಸಿಂಗ್ ಸಿಧು ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ! ನವ್‌ಜೋತ್‌ಸಿಂಗ್ ಸಿಧು ಹುಡುಕಿಕೊಟ್ಟವರಿಗೆ 50,000 ರೂಪಾಯಿ ಬಹುಮಾನ!

ಪಕ್ಷದ ಹಿರಿಯ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಅಧ್ಯಕ್ಷರಾಗಿ ನೇಮಕವಾಗಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದ್ದವು. ಆದರೆ ನವಜೋತ್ ಸಿಂಗ್ ಸಿಧು ನೇಮಕ ಪಕ್ಷದಲ್ಲಿಯೇ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಅಧ್ಯಕ್ಷರಾಗಿ ನೇಮಕಗೊಂಡ ನವಜೋತ್ ಸಿಂಗ್ ಸಿಧು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. 62 ಶಾಸಕರ ಜೊತೆ ಅವರು ಸ್ವರ್ಣ ಮಂದಿರಕ್ಕೆ ಭೇಟಿ ನೀಡಿದ್ದರು. ತಮ್ಮ ನಿವಾಸದಲ್ಲಿ ಸರ್ಕಾರದ ಹಲವು ಸಚಿವರ ಜೊತೆ ಔತಣ ಕೂಟವನ್ನು ಸಹ ನಡೆಸಿದ್ದರು.

ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ನವಜೋತ್ ಸಿಂಗ್ ಸಿಧು ನೇಮಕ ಬಹಳ ಕುತೂಹಲವನ್ನು ಮೂಡಿಸಿದೆ. ಪಕ್ಷದಲ್ಲಿನ ಅಸಮಾಧಾನವೇ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಕಾರಣವಾಗಲಿದೆಯೇ? ಎಂಬ ಚರ್ಚೆಯೂ ಸಾಗಿದೆ.

English summary
Navjot Singh Sidhu to take charge as Punjab Congress chief on Friday, July 23. He will invite chief minister Amarinder Singh for the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X