ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಬೇಡಿಕೆ ಈಡೇರುವ ವರೆಗೂ ಮನೆಗೆ ಹಿಂದಿರುಗುವ ಮಾತೇ ಇಲ್ಲ: ರಾಕೇಶ್ ಟಿಕಾಯತ್

|
Google Oneindia Kannada News

ಚಂಡೀಗಢ,ಫೆಬ್ರವರಿ 08: ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಮನೆಗೆ ಹಿಂದಿರುಗುವ ಮಾತೇ ಇಲ್ಲ ಎಂದು ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಜನಾಂದೋಲನವಾಗಿದ್ದು, ಅದು ವಿಫಲವಾಗಲ್ಲ ಎಂಬ ಅಚಲ ವಿಶ್ವಾಸ ವ್ಯಕ್ತಪಡಿಸಿರುವ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟೀಕಾಯತ್, ತಮ್ಮ ಬೇಡಿಕೆ ಈಡೇರುವವರೆಗೂ ಮನೆಗೆ ವಾಪಸ್ ಹೋಗುವ ಮಾತೇ ಇಲ್ಲ ಎಂದಿದ್ದಾರೆ.

ಹರಿಯಾಣ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಕಿಸಾನ್ ಮಹಾಪಂಚಾಯತ್ಹರಿಯಾಣ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ಕಿಸಾನ್ ಮಹಾಪಂಚಾಯತ್

ಹೋರಾಟ ಆರಂಭವಾದಾಗ ಇದು ಪಂಜಾಬ್ ಮತ್ತು ಹರಿಯಾಣ ವಿರುದ್ಧದ ಹೋರಾಟ ಎಂದು ಕರೆಯುವ ಮೂಲಕ ಹೋರಾಟವನ್ನು ಒಡೆಯುವ ಪ್ರಯತ್ನ ಮಾಡಲಾಗಿತ್ತು ಎಂದು ಹೇಳಿದ ಟಿಕಾಯತ್, ರೈತರ ಯೂನಿಯನ್ ಗಳು ಒಗ್ಗಟ್ಟನ್ನು ಪ್ರದರ್ಶಿಸಬೇಕಾಗಿದೆ ಎಂದು ಮನವಿ ಮಾಡಿದರು.

No Ghar Wapsi Till Farmers Demands Are Met: Rakesh Tikait

ರೈತರ ಹೋರಾಟವನ್ನು ಬೆಂಬಲಿಸುತ್ತಿರುವ ಕಾಪ್ ಪಂಚಾಯತ್ ಮತ್ತು ಅವರ ಮುಖಂಡರ ಪಾತ್ರವನ್ನು ಟಿಕಾಯತ್ ಹೊಗಳಿದ್ದಾರೆ. ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಜನಾಂದೋಲನವಾಗಿದ್ದು, ಇದು ವಿಫಲವಾಗುವುದಿಲ್ಲ, ರೈತರ ಬೇಡಿಕೆ ಈಡೇರುವವರೆಗೂ ಮನೆಗೆ ವಾಪಸ್ ಹೋಗಲ್ಲ. ಕೃಷಿ ಕಾನೂನುಗಳ ವಿರುದ್ಧದ ಹೋರಾಟ ಮತ್ತಷ್ಟು ಗಟ್ಟಿಯಾಗಲಿದೆ ಎಂದು ತಿಳಿಸಿದರು.

ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು, ಕನಿಷ್ಠ ಬೆಂಬಲ ಬೆಲೆಗೆ ಖಾತ್ರಿ ನೀಡಬೇಕು ಮತ್ತು ಇತ್ತೀಚಿಗೆ ಬಂಧನಕ್ಕೊಳಗಾದ ರೈತರನ್ನು ಬಿಡುಗಡೆ ಮಾಡಬೇಕೆಂದು ಹೇಳಿದರು.

English summary
Farmer leader Rakesh Tikait on Sunday said that the protest that they have launched is a people's movement and wpn't fail. He was addressing the attendees of a 'kisan mahapanchayat' in Haryana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X