ಸರ್ಕಾರಿ ನೌಕಕರೇ ಸಂಬಳ ಬೇಕಿದ್ರೆ, ಲಸಿಕೆ ಪ್ರಮಾಣಪತ್ರ ಸಲ್ಲಿಸಿ: ಇದಪ್ಪಾ ಸರ್ಕಾರದ ಆದೇಶ!

ಚಂಡೀಗಢ, ಡಿಸೆಂಬರ್ 22: "ಸರ್ಕಾರಿ ನೌಕರರೇ ನಿಮಗೆ ಸಂಬಳ ಬೇಕಾದರೆ, ಕೊವಿಡ್-19 ಲಸಿಕೆ ಪ್ರಮಾಣಪತ್ರ ಕಡ್ಡಾಯ". ಪಂಜಾಬ್‌ನಲ್ಲಿ ರಾಜ್ಯ ಸರ್ಕಾರ ಬುಧವಾರ ಇಂಥದೊಂದು ವಿಚಿತ್ರ ಆದೇಶವನ್ನು ಹೊರಡಿಸಿದೆ.

ಪಂಜಾಬ್‌ನಲ್ಲಿ ಸರ್ಕಾರಿ ನೌಕರರು ಕೊವಿಡ್-19 ಲಸಿಕೆಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಹಾಗೆ ಲಸಿಕೆ ಪಡೆದ ನಂತರದಲ್ಲಿ ನೀಡುವ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ ಅಂಥವರ ವೇತನವನ್ನು ತಡೆ ಹಿಡಿಯಲಾಗುವುದು ಎಂದು ಸರ್ಕಾರ ಆದೇಶಿಸಿದೆ.

ರಾಜ್ಯದ ಸರ್ಕಾರಿ ನೌಕರರು ತಮ್ಮ ತಿಂಗಳ ವೇತನವನ್ನು ಪಡೆಯಬೇಕಾದರೆ, ಒಂದು ಅಥವಾ ಎರಡು ಡೋಸ್ ಎಷ್ಟೇ ಆಗಿರಲಿ. ತಾವು ಪಡೆದಿರುವ ಲಸಿಕೆಯ ಪ್ರಮಾಣಪತ್ರವನ್ನು ಪಂಜಾಬ್ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅಪ್ ಲೋಡ್ ಮಾಡಬೇಕಾಗುತ್ತದೆ. ಆದಾಗ್ಯೂ, ಕೊವಿಡ್-19 ಲಸಿಕೆ ಪಡೆದುಕೊಳ್ಳದ ನೌಕರರ ವಿರುದ್ಧ ಯಾವ ರೀತಿ ಕ್ರಮ ತೆಗೆದುಕೊಳ್ಳಲಾಗುವುದು ಎಂಬುದರ ಬಗ್ಗೆ ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿಲ್ಲ.

ಪಂಜಾಬಿನಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ

ಪಂಜಾಬಿನಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ

ದೇಶದಲ್ಲಿ ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿನ ಹರಡುವಿಕೆ ಭೀತಿ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಕೊವಿಡ್-19 ಲಸಿಕೆ ಪಡೆದುಕೊಳ್ಳುವುದು ತೀರಾ ತುರ್ತು ಕ್ರಮವಾಗಿರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಪಂಜಾಬ್ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಆ ಮೂಲಕ ರಾಜ್ಯದಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರರು ಕಡ್ಡಾಯವಾಗಿ ಲಸಿಕೆಯನ್ನು ಪಡೆದುಕೊಳ್ಳುವಂತೆ ಮಾಡಲು ಉದ್ದೇಶಿಸಲಾಗಿದೆ.

ಕೊವಿಡ್-19 ಲಸಿಕೆ ಪ್ರಮಾಣಪತ್ರ ಅಪ್‌ಲೋಡ್

ಕೊವಿಡ್-19 ಲಸಿಕೆ ಪ್ರಮಾಣಪತ್ರ ಅಪ್‌ಲೋಡ್

ಕೊರೊನಾವೈರಸ್ ಲಸಿಕೆಯನ್ನು ಪಡೆದುಕೊಂಡಿರುವ ಬಗ್ಗೆ ಪ್ರಮಾಣಪತ್ರಗಳನ್ನು ಪಂಜಾಬ್ ಸರ್ಕಾರದ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆಯ ( iHRMS) ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು. ತದನಂತರದಲ್ಲಿ ಈ ಸಾಫ್ಟ್‌ವೇರ್ ಆಯಾ ನೌಕರರ ವೇತನ ಪಾವತಿ ಮತ್ತು ನಿವೃತ್ತಿ ಪ್ರಯೋಜನ ಪಡೆಯುವಿಕೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುತ್ತದೆ.

ನೇರವಾಗಿ ನೌಕರರ ಖಾತೆಗೆ ಹಣ ಜಮೆ

ನೇರವಾಗಿ ನೌಕರರ ಖಾತೆಗೆ ಹಣ ಜಮೆ

ಪಂಜಾಬಿನಲ್ಲಿ ಸರ್ಕಾರಿ ನೌಕರರ ವೇತನ ವಿತರಣೆಯಲ್ಲಿ ಯಾವುದೇ ರೀತಿ ವಂಚನೆ ನಡೆಯದಂತೆ ಶಿಸ್ತುಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸರ್ಕಾರಿ ಉದ್ಯೋಗಿಯು ಗೊತ್ತುಪಡಿಸಿದ ಬ್ಯಾಂಕ್ ಖಾತೆಗೆ ಮಾತ್ರ ನೇರವಾಗಿ ವೇತನವನ್ನು ಜಮಾ ಮಾಡಲಾಗುತ್ತದೆ. ಆ ಮೂಲಕ ವಂಚನೆ ಆಗುವುದನ್ನು ತಡೆಯಲು ಸರ್ಕಾರ ಮುಂದಾಗಿದೆ.

ಭಾರತದಲ್ಲಿ ಓಮಿಕ್ರಾನ್ ಸೋಂಕಿತ ಪ್ರಕರಣಗಳೆಷ್ಟು?

ಭಾರತದಲ್ಲಿ ಓಮಿಕ್ರಾನ್ ಸೋಂಕಿತ ಪ್ರಕರಣಗಳೆಷ್ಟು?

ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿದೆ. ಡಿಸೆಂಬರ್ 21ರ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ 213 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ಜಿನೋಮ್ ಸೀಕ್ವೆನ್ಸಿಂಗ್ ವೇಳೆ ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ 54, ನವದೆಹಲಿಯಲ್ಲಿ 57 ಓಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಒಟ್ಟು 6,317 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+