ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಜಾಬ್ ಚುನಾವಣೆ: ಬಿಜೆಪಿ ಮೈತ್ರಿಯೊಂದಿಗೆ ಸ್ಪರ್ಧೆ ಎಂದ ಅಮರಿಂದರ್ ಸಿಂಗ್

|
Google Oneindia Kannada News

ಚಂಡೀಗಢ, ಡಿಸೆಂಬರ್ 06: ಮುಂಬರಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಯನ್ನು ತೊರೆದು ಹೊಸ ಪಕ್ಷ ಕಟ್ಟಿದಾಗಲೇ ಅಮರಿಂದರ್ ಸಿಂಗ್ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದೀಗ ಅದಕ್ಕೆ ಮತ್ತಷ್ಟು ಪುಷ್ಠಿ ಎನ್ನುವಂತೆ ಅಮರಿಂದರ್ ಸಿಂಗ್ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ.

ಹೊಸ ರಾಜಕೀಯ ಪಕ್ಷದ ಹೆಸರು ಘೋಷಿಸಿದ ಅಮರಿಂದರ್ ಸಿಂಗ್ಹೊಸ ರಾಜಕೀಯ ಪಕ್ಷದ ಹೆಸರು ಘೋಷಿಸಿದ ಅಮರಿಂದರ್ ಸಿಂಗ್

ಮುಂದಿನ ವರ್ಷ ಪಂಜಾಬ್​​ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರಿಂದರ್​​ ಸಿಂಗ್​​ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಇದೇ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

Our Aim Is To Win Punjab Assembly Polls: Amarinder Singh Says Seat Adjustment With BJP

ಪಂಜಾಬ್ ಕಾಂಗ್ರೆಸ್​​ನಲ್ಲಿ ಉಂಟಾಗಿದ್ದ ಬಿಕ್ಕಟ್ಟಿನಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದಿಂದ ಹೊರಬಂದಿರುವ ಕ್ಯಾಪ್ಟನ್​ ಅಮರೀಂದರ್​​ ಸಿಂಗ್​ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತನ್ನ ಪಕ್ಷ 'ಪಂಜಾಬ್​​ ಲೋಕ ಕಾಂಗ್ರೆಸ್'​​​ ಕಣಕ್ಕಿಳಿಯಲಿದ್ದು, ಇದಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದಿದ್ದಾರೆ. ಆದಷ್ಟು ಬೇಗ ಮೈತ್ರಿ ಘೋಷಣೆಯಾಗಲಿದ್ದು, ಸೀಟು ಹಂಚಿಕೆ ಸಹ ನಡೆಯಲಿದೆ ಎಂದರು.

ಪಂಜಾಬ್​ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ ಹಾಗೂ ಶಿರೋಮಣಿ ಅಕಾಲಿ ದಳದ ಮಾಜಿ ಮುಖಂಡ ಸುಖ್ ದೇವ್ ಸಿಂಗ್ ದಿಂಡ್ಸಾ ಅವರೊಂದಿಗೂ ಮಾತಕತೆ ನಡೆದಿದೆ. ಇದೀಗ ಪಂಜಾಬ್​​​ ಲೋಕ ಕಾಂಗ್ರೆಸ್​​, ಬಿಜೆಪಿ ಹಾಗೂ ಶಿರೋಮಣಿ ಅಕಾಲಿ ದಳ ಮೈತ್ರಿ ಮಾಡಿಕೊಂಡು ಚುನಾಚಣೆ ಎದುರಿಸುವ ಸಾಧ್ಯತೆ ಇದೆ.

2022ರ ಪಂಜಾಬ್​​ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದ್ದು, ತದನಂತರ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು. ಇದಕ್ಕೆ ಸಂಬಂಧಿಸಿದಂತೆ ಮುಂದಿನ ಕೆಲ ದಿನಗಳಲ್ಲಿ ಗೃಹ ಸಚಿವ ಅಮಿತ್​ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತುಕತೆ ನಡೆಸುವ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಈಗಾಗಲೇ ಅಮರೀಂದರ್​ ಸಿಂಗ್​​​ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್​​​ ಶಾ ಜೊತೆ ಮಾತನಾಡಿದ್ದಾರೆ. ಇದೀಗ ಅಂತಿಮ ಹಂತದ ನಿರ್ಣಯಕ್ಕಾಗಿ ಮತ್ತೊಂದು ಸುತ್ತಿನ ಮಾತುಕತೆ ಕೂಡ ನಡೆಯಲಿದೆ.

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೊಸ ಪಕ್ಷದ ಸ್ಥಾಪಿಸಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ನಾಯಕತ್ವದ ವಿರುದ್ಧ ಆಕ್ರೋಶಗೊಂಡಿರುವ ಅಮರಿಂದರ್ ಸಿಂಗ್ ಕೇಂದ್ರ ಗೃಹ ಸಚಿವರ ಅಮಿತ್ ಶಾರನ್ನು ದೆಹಲಿಯಲ್ಲಿ ಮೂರು ಬಾರಿ ಭೇಟಿ ಮಾಡಿದ್ದರು.
ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಹೊಸ ಪಕ್ಷದ ಹೆಸರು 'ಪಂಜಾಬ್ ಲೋಕ್ ಕಾಂಗ್ರೆಸ್' ಎಂದು ನಾಮಕರಣ ಮಾಡಿದ್ದರು.

ಕೆಲವು ದಿನಗಳ ಹಿಂದಷ್ಟೇ ಕೇಂದ್ರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತರ ಹೋರಾಟವನ್ನು ರೈತ ಹಿತಾಸಕ್ತಿಯಿಂದ ಬಗೆಹರಿಸಿದರೆ ಬಿಜೆಪಿಯೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವುದಾಗಿ ಅಮರಿಂದರ್ ಸಿಂಗ್ ಅವರು ಹೇಳಿದ್ದರು.

ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಸಾಧ್ಯತೆ ಇದೆ.

ಅಮರಿಂದರ್ ಸಿಂಗ್ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅವರು ಬಿಜೆಪಿಗೆ ಸೇರುವ ಊಹಾಪೋಹಗಳಿಗೆ ಪುಷ್ಟಿ ನೀಡಿದಂತಾಗಿತ್ತು.

ಆದರೆ ಪಂಜಾಬ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ಪಕ್ಷವನ್ನು ರಚಿಸುವುದಾಗಿ ತರುವಾಯ ಘೋಷಿಸಿದ್ದರು. ಟ್ವಿಟ್ಟರ್‌ನಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಿದ ಸಿಂಗ್, ಪಕ್ಷದ ನೋಂದಣಿಗೆ ಅನುಮೋದನೆಯು ಭಾರತದ ಚುನಾವಣಾ ಆಯೋಗದಲ್ಲಿ ಬಾಕಿ ಉಳಿದಿದೆ.

ಪಂಜಾಬ್ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಮರಿಂದರ್ ಸಿಂಗ್ ಅವರು ತಮ್ಮದೇ ಆದ ರಾಜಕೀಯ ಪಕ್ಷ ಸ್ಥಾಪಿಸಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಸಾಧ್ಯತೆ ಇದೆ.

ಅಮರಿಂದರ್ ಸಿಂಗ್ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಅವರು ಬಿಜೆಪಿಗೆ ಸೇರುವ ಊಹಾಪೋಹಗಳಿಗೆ ಪುಷ್ಟಿ ನೀಡಿದಂತಾಗಿತ್ತು. ಆದರೆ ಪಂಜಾಬ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಹೊಸ ಪಕ್ಷವನ್ನು ರಚಿಸುವುದಾಗಿ ತರುವಾಯ ಘೋಷಿಸಿದ್ದರು.

ಟ್ವಿಟ್ಟರ್‌ನಲ್ಲಿ ಪಕ್ಷದ ಹೆಸರನ್ನು ಪ್ರಕಟಿಸಿದ ಸಿಂಗ್, ಪಕ್ಷದ ನೋಂದಣಿಗೆ ಅನುಮೋದನೆಯು ಭಾರತದ ಚುನಾವಣಾ ಆಯೋಗದಲ್ಲಿ ಬಾಕಿ ಉಳಿದಿದೆ. ನಂತರ ಚುನಾವಣಾ ಚಿಹ್ನೆಯನ್ನು ಪಡೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

English summary
Former Punjab chief minister Amarinder Singh, who recently floated the Punjab Lok Congress party, on Monday said that his aim is to win the upcoming assembly elections in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X