Get Updates
Get notified of breaking news, exclusive insights, and must-see stories!

ಸಿಧು ಸಂಪುಟ ಸೇರ್ಪಡೆಗೆ ಪಾಕ್‌ನಿಂದ ಮನವಿ ಬಂದಿತ್ತು: ಅಮರಿಂದರ್ ಸಿಂಗ್

ಚಂಡೀಗಢ, ಜನವರಿ 25: ಸಂಪುಟಕ್ಕೆ ನವಜೋತ್‌ ಸಿಂಗ್ ಸಿಧುವನ್ನು ಸೇರಿಸಿಕೊಳ್ಳುವಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್ ಮನವಿ ಮಾಡಿಕೊಂಡಿದ್ದರು ಎಂದು ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಿಎಂ ಅಮರಿಂದರ್ ಸಿಂಗ್ ತಮ್ಮ ಅಧಿಕಾರಾವಧಿಯಲ್ಲಿ ನಡೆದಿದ್ದ ಮಹತ್ವದ ಘಟನೆಯೊಂದನ್ನು ಬಹಿರಂಗಪಡಿಸಿದ್ದಾರೆ.

"ನಾನು ಮುಖ್ಯಮಂತ್ರಿಯಾಗಿದ್ದಾಗ ನವಜೋತ್ ಸಿಂಗ್ ಸಿಧು ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂಬ ಸಂದೇಶ ಪಾಕಿಸ್ತಾನದಿಂದ ನನಗೆ ಬಂದಿತ್ತು ಏಕೆಂದರೆ ನವಜೋತ್ ಸಿಂಗ್ ಸಿಧು ಅವರ ಪ್ರಧಾನಿಯ ಹಳೆಯ ಸ್ನೇಹಿತ ಎಂಬ ಕಾರಣಕ್ಕೆ ಇಂತಹದ್ದೊಂದು ಮನವಿ ಬಂದಿತ್ತು" ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.

Pakistan PM asked me to induct Sidhu into my Cabinet: Amarinder Singh

ಕಾಂಗ್ರೆಸ್ ತೊರೆದು ಹೊಸ ಪಕ್ಷ ಸ್ಥಾಪಿಸಿರುವ ಅಮರಿಂದರ್ ಸಿಂಗ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಪಂಜಾಬ್ ನಲ್ಲಿ ಚುನಾವಣೆ ಎದುರಿಸುತ್ತಿದ್ದಾರೆ. "ಸಿಧು ಅವರನ್ನು ನೀವು ಸಂಪುಟದಲ್ಲಿಟ್ಟುಕೊಂಡರೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿಮಗೆ ಕೃತಜ್ಞರಾಗಿರುವರು" ಎಂಬ ಸಂದೇಶ ಪಾಕಿಸ್ತಾನದಿಂದ ಬಂದಿತ್ತು ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ನಾನು ಸಿಧು ಅವರನ್ನು ಸಂಪುಟದಿಂದ ತೆಗೆದ ಬಳಿಕ ಪಾಕಿಸ್ತಾನದಿಂದ ಇಂಥದ್ದೊಂದು ಸಂದೇಶ ಬಂದಿತ್ತು. ಒಂದು ವೇಳೆ ಅವರು ಕೆಲಸ ಮಾಡದೇ ಇದ್ದಲ್ಲಿ ನೀವು ಅವರನ್ನು ಸಂಪುಟದಿಂದ ತೆಗೆಯಬಹುದು ಎಂದು ಪಾಕಿಸ್ತಾನ ಹೇಳಿತ್ತು ಎಂಬುದನ್ನು ಸಿಂಗ್ ಹೇಳಿದ್ದಾರೆ. ಅವರು ಬಿಜೆಪಿ ಕಚೇರಿಯಲ್ಲಿ ಸ್ಥಾನ ಹಂಚಿಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಪಂಜಾಬ್ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಅಮರಿಂದರ್ ಸಿಂಗ್ ತಮ್ಮ ಅಧಿಕಾರವಧಿಯಲ್ಲಿ ನಡೆದಿದ್ದ ಈ ಘಟನೆ ಬಗ್ಗೆ ಮಾತನಾಡಿದ್ದಾರೆ.

ಅಮರಿಂದರ್ ಸಿಂಗ್ ಅವರು ಪಾಕಿಸ್ತಾನದ ಪ್ರಧಾನಿಯ ಹೆಸರನ್ನು ನೇರವಾಗಿ ಹೇಳದಿದ್ದರೂ ಕೂಡ, ಅವರ ಉಲ್ಲೇಖವು ಹಾಗೆಯೇ ಇತ್ತು. ಈ ಹಿಂದೆ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭದಲ್ಲಿ ಸಿಧು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿದ್ದ ಸಿಧುಗೆ ಇಮ್ರಾನ್ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಅಮರಿಂದರ್ ಸಿಂಗ್ ಕೇಳಿಕೊಂಡಿದ್ದರು.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರವೂ ಸಿಂಗ್ ಅವರು ಶ ಸಿಧು ಅವರನ್ನು ಪಕ್ಷದ ಮುಖ್ಯಮಂತ್ರಿ ಮುಖವನ್ನಾಗಿಸುವ ಯಾವುದೇ ಕ್ರಮವನ್ನು ವಿರೋಧಿಸುವುದಾಗಿ ಹೇಳಿದ್ದರು, ಅವರು ಪಾಕಿಸ್ತಾನ ಸ್ಥಾಪನೆಯೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಇದು "ವಿಪತ್ತು" ಎಂದು ಹೇಳಿದರು.

ನಾನು ನವಜೋತ್ ಸಿಂಗ್ ಸಿಧು ಅವರನ್ನು ಸಂಪುಟದಿಂದ ಕೈಬಿಟ್ಟ ನಂತರ ಪಾಕಿಸ್ತಾನದಿಂದ ಇಂತಹದ್ದೊಂದು ಸಂದೇಶ ನಮಗೆ ಬಂದಿತ್ತು. ಸಿಧು ಅವರನ್ನು ನೀವು ಸಂಪುಟದಲ್ಲಿ ಇಟ್ಟುಕೊಂಡರೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ನಿಮಗೆ ಕೃತಜ್ಞರಾಗಿ ಇರಲಿದ್ದಾರೆ. ಸಂಪುಟಕ್ಕೆ ಸೇರಿಸಿಕೊಂಡ ಬಳಿಕವೂ ಸಿಧು ಕೆಲಸ ಮಾಡದಿದ್ದರೆ, ಅವರನ್ನು ತೆಗೆದುಹಾಕಬಹುದು ಎಂದು ಪಾಕ್​​ ಹೇಳಿಕೊಂಡಿತ್ತು ಎಂದು ಅಮರಿಂದರ್ ಬಹಿರಂಗಪಡಿಸಿದ್ದಾರೆ.

ಸದ್ಯ ಕಾಂಗ್ರೆಸ್ ತೊರೆದ ನಂತರ ಹೊಸ ಪಕ್ಷವನ್ನು ಆರಂಭಿಸಿರುವ ಅಮರಿಂದರ್ ಸಿಂಗ್, ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದಾರೆ.

ಸಿಧು ಬೆಳವಣಿಗೆಯನ್ನು ಕಂಡಿದ್ದೇನೆ. ನಾನು ಆತನ ಪಾಕಿಸ್ತಾನ ಪರ ಧೋರಣೆಯ ವಿರೋಧಿ. ಗಡಿಯಲ್ಲಿ ಭಾರತೀಯ ಸೈನಿಕರನ್ನು ಕೊಲ್ಲಲಾಗುತ್ತಿದೆ, ಮತ್ತು ನೀವು ಹೋಗಿ ಜನರಲ್ ಬಜ್ವಾ ಮತ್ತು ಇಮ್ರಾನ್ ಖಾನ್ ಅವರನ್ನು ತಬ್ಬಿಕೊಳ್ಳಿ..ಸಿಧು ಅವರನ್ನು ಕಾಂಗ್ರೆಸ್‌ನ ಮುಖವನ್ನಾಗಿ ಮಾಡಿದರೆ, ನಾನು ಅದನ್ನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದರು.

ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 20ರಂದು ನಡೆಯಲಿದೆ. ಜನವರಿ 25ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿರುತ್ತದೆ.

ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+