ಆಮ್ ಆದ್ಮಿ ಪಕ್ಷವು ಕಾಂಗ್ರೆಸ್‌ನ ತದ್ರೂಪಿ ಎಂದ ಮೋದಿ

ಪಠಾಣ್‌ಕೋಟ್, ಫೆಬ್ರವರಿ 16: ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 16ರಂದು ಪಂಜಾಬ್‌ನಲ್ಲಿ ಚುನಾವಣಾ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಮ್ ಆದ್ಮಿ ಪಕ್ಷವು ಕಾಂಗ್ರೆಸ್‌ನ ತದ್ರೂಪಿ ಎಂದು ಹೇಳಿದ್ದು, ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷವು ಅಪರಾಧದ ಪಾಲುದಾರರು ಎಂದು ವಾಗ್ದಾಳಿ ನಡೆಸಿದ್ದಾರೆ.

ಎಎಪಿಯನ್ನು ಕಾಂಗ್ರೆಸ್‌ನ ಫೋಟೊ ಕಾಪಿ ಎಂದು ಕರೆದ ಅವರು, ಅಯೋಧ್ಯೆ ದೇವಸ್ಥಾನ ಅಥವಾ ಸೇನೆಯು ಏನನ್ನಾದರೂ ಮಾಡಿದಾಗ ಈ ಎರಡು ಪಕ್ಷಗಳು ಸಹಿಸುವುದಿಲ್ಲ.

PM Modi Calls AAP Xerox Copy Of Congress; Adds Both Parties Pretending To Be Rivals

ಚುನಾವಣಾ ಪ್ರಚಾರದಲ್ಲಿ ಸೇರಿದ್ದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಈ ಪಕ್ಷಗಳನ್ನು ಜನರೇ ನೀವು ನಂಬಬೇಡಿ ಒಂದು ಪಕ್ಷ ಪಂಜಾಬ್‌ ಅನ್ನು ಲೂಟಿ ಮಾಡಿದರೆ ಇನ್ನೊಂದು ಪಕ್ಷವು ದೆಹಲಿಯಲ್ಲಿ ಭ್ರಷ್ಟಾಚಾರ ಮಾಡುತ್ತಿದೆ ಎಂದು ಹೇಳಿದರು.

ದೆಹಲಿಯಲ್ಲೂ ಸರ್ಕಾರವನ್ನು ರಚಿಸಲು ಕಾಂಗ್ರೆಸ್‌ನ ಬೆಂಬಲವನ್ನು ಪಡೆದುಕೊಂಡಿದೆ, ಈ ಬಾರಿ ಖಂಡಿತವಾಗಿಯೂ ಪಂಜಾಬ್‌ನಲ್ಲಿ ಪರಿವರ್ತನೆಯನ್ನು ತರುತ್ತೇನೆ ಎಂದು ಪಣತೊಡಿ ಎಂದು ಮನವಿ ಮಾಡಿದರು.

2016ರಲ್ಲಿ ಪಠಾಣ್‍ಕೋಟ್ ದಾಳಿಯಲ್ಲಿ ಹುತಾತ್ಮರಾದ ಯೋಧರ ತ್ಯಾಗವನ್ನು ಕಾಂಗ್ರೆಸ್ ಅವಮಾನಿಸಿದೆ. ಕಾಂಗ್ರೆಸ್ ನಾಯಕರು ಸರ್ಕಾರವನ್ನು, ಪಂಜಾಬ್‍ನ ಜನತೆಯನ್ನು ಹಾಗೂ ನಮ್ಮ ಸೈನ್ಯದ ಶೌರ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಸೈನಿಕರ ತ್ಯಾಗವನ್ನು ಅವಮಾನಿಸಿದ್ದಾರೆ. 2019ರಲ್ಲಿ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿಯೂ ಕಾಂಗ್ರೆಸ್ ಅದನ್ನೇ ಮಾಡಿದೆ. ಪುಲ್ವಾಮಾ ವಾರ್ಷಿಕೋತ್ಸವದಂದು ಸಹ ಅವರು ತಮ್ಮ ಬುದ್ಧಿಯನ್ನು ಮುಂದುವರಿಸಿದ್ದಾರೆ ಎಂದು ಟೀಕಿಸಿದರು.

2019 ಫೆಬ್ರವರಿ 14ರಂದು, ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‍ಪಿಎಫ್‍ನ ಬೆಂಗಾವಲು ಪಡೆ ಮೇಲೆ ದಾಳಿ ಮಾಡಿ 40 ಪಡೆಯ ಸಿಬ್ಬಂದಿ ಹುತಾತ್ಮರಾಗಿದ್ದರು. ಪುಲ್ವಾಮಾ ದಾಳಿಗೆ ಪ್ರತಿಯಾಗಿ ಭಾರತೀಯ ಪಡೆಗಳು ನಡೆಸಿದ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‍ನ ಪುರಾವೆಯನ್ನು ನೀಡಲು ಕೇಳಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

ಕರ್ತಾರ್‌ಪುರ್ ಸಾಹಿಬ್ ಕಾರಿಡಾರ್ - ಪಾಕಿಸ್ತಾನದ ದರ್ಬಾರ್ ಸಾಹಿಬ್ ಕರ್ತಾರ್‌ಪುರಕ್ಕೆ (ಸಿಖ್ ಧರ್ಮದ ಸ್ಥಾಪಕ ಗುರುನಾನಕ್ ಅವರ ಅಂತಿಮ ವಿಶ್ರಾಂತಿ ಸ್ಥಳ) ರಸ್ತೆಯ ಬಗ್ಗೆಯೂ ಪ್ರಧಾನಿ ಪ್ರಸ್ತಾಪಿಸಿ, "ಅವರು (ಕಾಂಗ್ರೆಸ್) ಪಾಕಿಸ್ತಾನದ ಕರ್ತಾರ್‌ಪುರ ಗುರುದ್ವಾರವನ್ನು ಕೈಬಿಟ್ಟರು. ಅದನ್ನು ಭಾರತದಲ್ಲಿ ಉಳಿಸಿಕೊಳ್ಳಲು ಅವರು ಪ್ರಯತ್ನಗಳನ್ನು ಮಾಡಲಿಲ್ಲವೇಕೆ? 1965 ರಲ್ಲಿ ಅವರು ಪ್ರಯತ್ನಿಸಿದೇ ಈಗ ಮಾತನಾಡುತ್ತಾರೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+