ಪ್ರಧಾನಿ ಮೋದಿಯವರ ಭದ್ರತಾ ಲೋಪ: ಚನ್ನಿ ಸರ್ಕಾರವನ್ನು ಟೀಕಿಸಿದ ಅಮರಿಂದರ್ ಸಿಂಗ್
ಚಂಡಿಗಢ ಜನವರಿ 6: ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಪಡೆ ಫಿರೋಜ್‌ಪುರಕ್ಕೆ ತೆರಳುತ್ತಿದ್ದಾಗ ಪಂಜಾಬ್‌ನಲ್ಲಿ ನಡೆದ ಪ್ರಮುಖ ಭದ್ರತಾ ಲೋಪಕ್ಕಾಗಿ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಇದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ವೈಫಲ್ಯ ಎಂದು ಅಮರಿಂದರ್ ಹೇಳಿದ್ದಾರೆ.
Recommended Video
ಟ್ವಿಟರ್‌ನಲ್ಲಿ, ಮಾಜಿ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್, "ವಿಶೇಷವಾಗಿ ಪಂಜಾಬ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ. ಪಾಕಿಸ್ತಾನದ ಗಡಿಯಿಂದ ಕೇವಲ 10 ಕಿ.ಮೀ. ದೂರದಲ್ಲಿ ನೀವು ದೇಶದ ಪ್ರಧಾನಿಗೆ ಸುಗಮ ಮಾರ್ಗವನ್ನು ಒದಗಿಸಲು ಸಾಧ್ಯವಾಗಿಲ್ಲ ಅಂದರೆ ನಿಮಗೆ ನಿಮ್ಮ ಸ್ಥಾನದಲ್ಲಿ ಉಳಿಯಲು ಯಾವುದೇ ಹಕ್ಕಿಲ್ಲ. ಹೀಗಾಗಿ ನೀವು ನಿಮ್ಮ ಸ್ಥಾನವನ್ನು ತ್ಯಜಿಸಬೇಕು" ಎಂದಿದ್ದಾರೆ. ಪ್ರಧಾನಿ ಬೆಂಗಾವಲು ಪಡೆ ಪಂಜಾಬ್‌ನ ಮೇಲ್ಸೇತುವೆಯಲ್ಲಿ ನಿನ್ನೆ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿತ್ತು. ಇದು ಪ್ರಮುಖ ಭದ್ರತಾ ಉಲ್ಲಂಘನೆಯಾಗಿದೆ ಎಂದು ಅವರು ದೂರಿದ್ದಾರೆ.
Complete failure of law and order in Punjab, CM and HM Punjab, in particular. When you cannot provide smooth passage to the Prime Minister of the country and that too just 10km from the Pakistan border, you have no right to stay in office and should quit!
— Capt.Amarinder Singh (@capt_amarinder) January 5, 2022
ಲೋಪದೋಷದಿಂದಾಗಿ ಪ್ರಧಾನಿ ಮೋದಿ ಬಟಿಂಡಾ ವಿಮಾನ ನಿಲ್ದಾಣಕ್ಕೆ ಮರಳಿದರು. ಪ್ರಧಾನಿ ಮೋದಿ ಅವರು ಫಿರೋಜ್‌ಪುರದಲ್ಲಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಾಗಿತ್ತು ಆದರೆ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು. ಇದು ಪಂಜಾಬ್ ವಿಧಾನಸಭಾ ಚುನಾವಣೆಯ ಕೆಲವೇ ದಿನಗಳಲ್ಲಿ ಕೇಂದ್ರ ಮತ್ತು ಕಾಂಗ್ರೆಸ್ ಆಡಳಿತದ ರಾಜ್ಯಗಳ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ.

ಭದ್ರತಾ ಲೋಪ ಎಂದು ಬಿಜೆಪಿ ದೂರಿದೆ
ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಆಗಮಿಸಬೇಕಿತ್ತು ಆದರೆ ವಾತಾವರಣ ಸರಿ ಇಲ್ಲದ ಕಾರಣ ಅನಿವಾರ್ಯವಾಗಿ ಕಾರಿನಲ್ಲಿ ಬರಬೇಕಾಯಿತು. ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದನ್ನು ಭದ್ರತಾ ಲೋಪ ಎಂದು ಬಿಜೆಪಿ ದೂರಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಪ್ರಧಾನ ಮಂತ್ರಿಯ ರಕ್ಷಣೆಗಾಗಿ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ, "ಪ್ರಧಾನಿಯನ್ನು ರಕ್ಷಿಸಲು ನಾನು ನನ್ನ ಪ್ರಾಣವನ್ನು ತ್ಯಜಿಸುತ್ತೇನೆ. ಆದರೆ ನಿಜವಾಗಿಯೂ ಹೇಳುವುದಾದರೆ ಯಾವುದೇ ಭದ್ರತಾ ಲೋಪವಾಗಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುರಕ್ಷಿತವಾಗಿದ್ದರು, ಅವರಿಗೆ ಯಾವುದೇ ಅಪಾಯವಾಗಿಲ್ಲ," ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಈ ರ್‍ಯಾಲಿಯನ್ನು ಭದ್ರತೆ ವೈಫಲ್ಯ ಆರೋಪ ಮಾಡಿ ರದ್ದು ಮಾಡಿ ಪ್ರಧಾನಿ ವಾಪಾಸ್ ಹೋಗಿರುವುದಕ್ಕೆ ಚನ್ನಿ ಸೇರಿದಂತೆ ಕಾಂಗ್ರೆಸ್ ಮುಖಂಡರು ವ್ಯಂಗ್ಯವಾಡಿದ್ದಾರೆ." "70,000 ಕುರ್ಚಿಗಳನ್ನು ಜೋಡಿಸಲಾಗಿದೆ ಆದರೆ 700 ವ್ಯಕ್ತಿಗಳು ಮಾತ್ರ ಬಂದಿದ್ದರು. ಅದಕ್ಕೆ ಏನು ಮಾಡುವುದು," ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ. ಇನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ, "ಕಾಂಗ್ರೆಸ್ ಹತ್ಯೆಯ ಸಂಚು ವಿಫಲವಾಗಿದೆ," ಎಂದಿದ್ದಾರೆ. ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ, "ಕಾಂಗ್ರೆಸ್ ಹುಚ್ಚುತನದ ಹಾದಿಯಲ್ಲಿದೆ," ಎಂದು ಹೇಳಿದ್ದಾರೆ. ಹಾಗೆಯೇ, ಪ್ರಧಾನಿ ಮೋದಿಗೆ ಹಾನಿ ಉಂಟು ಮಾಡುವ ನಿಟ್ಟಿನಲ್ಲಿ ಉದ್ದೇಶಪೂರ್ವಕ ಸಂಚು ಎಂದು ಆರೋಪ ಮಾಡಿದ್ದಾರೆ. ಇದು ಕಾಂಗ್ರೆಸ್ ನಿರ್ಮಾಣ ಮಾಡಿದ ಘಟನೆ ಎಂದು ಕೂಡಾ ದೂರಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಗೂ ಮುನ್ನ ಈ ವಿಚಾರ ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದು ಪಂಜಾಬ್ ಸರ್ಕಾರದ ಭದ್ರತಾ ಲೋಪ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications