Breaking: ಭದ್ರತಾ ಲೋಪ:15 ನಿಮಿಷ ಫ್ಲೈಓವರ್‌ನಲ್ಲಿ ಸಿಲುಕಿದ ಪ್ರಧಾನಿ ಮೋದಿ

ನವದೆಹಲಿ, ಜನವರಿ 05: ಪಂಜಾಬ್‌ನ ಫ್ಲೈವರ್‌ನಲ್ಲಿ ಸುಮಾರು 15-20 ನಿಮಿಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಸಿಲುಕಿರುವ ಘಟನೆ ವರದಿಯಾಗಿದೆ.

ಭದ್ರತಾ ಲೋಪ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ನ ಫಿರೋಜ್‌ಪುರದಲ್ಲಿ ಸಮಾವೇಶ ರದ್ದು ಮಾಡಿದ್ದಾರೆ ಎಂದು ಗೃಹ ಸಚಿವಾಲಯ ಮಾಹಿತಿ ನೀಡಿದೆ.

ಹುಸೇನಿವಾಲಾದಲ್ಲಿನ ರಾಷ್ಟ್ರೀಯ ಹುತಾತ್ಮರ ಸ್ಮಾರಕದಿಂದ ಸುಮಾರು 30-ಕಿಮೀ ದೂರದಲ್ಲಿ, ಪ್ರಧಾನ ಮಂತ್ರಿಯ ಬೆಂಗಾವಲು ಪಡೆ ಫ್ಲೈಓವರ್ ಅನ್ನು ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿರುವುದು ಕಂಡುಬಂದಿದೆ. ಪ್ರಧಾನಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

PM Stuck On Punjab Flyover For 15-20 Minutes, Huge Security Lapse: Centre

ಪ್ರತಿಭಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ಲೈಓವರ್‌ನಲ್ಲಿ ಸಿಲುಕಿದ್ದರು, ಬಳಿಕ ಬತಿಂಡಾದಲ್ಲಿ ನಡೆಯಬೇಕಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಏರ್‌ಪೋರ್ಟ್‌ಗೆ ತೆರಳಿದರು. ಪಂಜಾಬ್‌ನಲ್ಲಿ ಕಾಂಗ್ರೆಸ್ ಸರ್ಕಾರ ಇರುವುದೇ ಈ ವೈಫಲ್ಯಕ್ಕೆ ಕಾರಣ ಎಂದು ಗೃಹ ಸಚಿವಾಲಯ ತಿಳಿಸಿದೆ.

ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳದಲ್ಲಿ ಹೆಲಿಕಾಪ್ಟರ್‌ನಲ್ಲಿ ಮೋದಿ ಆಗಮಿಸಬೇಕಿತ್ತು ಆದರೆ ವಾತಾವರಣ ಸರಿ ಇಲ್ಲದ ಕಾರಣ ಅನಿವಾರ್ಯವಾಗಿ ಕಾರಿನಲ್ಲಿ ಬರಬೇಕಾಯಿತು. ಮೆಮೋರಿಯಲ್‌ನಿಂದ 30 ಕಿ.ಮೀ ದೂರದಲ್ಲಿ ಫ್ಲೈಓವರ್‌ ಮೇಲೆ ಕಾನ್‌ವಾಯ್ ಬರುತ್ತಿದ್ದಂತೆ ಪ್ರತಿಭಟನಾಕಾರರು ಸುತ್ತುವರೆದರು.

ಮೋದಿ ಬರುವ ಕುರಿತು ಪಂಜಾಬ್ ಸರ್ಕಾರಕ್ಕೆ ಮೊದಲೇ ತಿಳಿಸಲಾಗಿತ್ತು. ಆದರೂ ಈ ರೀತಿ ಘಟನೆ ನಡೆದಿದೆ, ಈ ಕುರಿತು ಗೃಹ ಸಚಿವಾಲಯ ಪಂಜಾಬ್ ಸರ್ಕಾರದ ಬಳಿ ವರದಿ ಕೇಳಿದೆ.ಹವಾಮಾನ ಸ್ಥಿತಿ ಸುಧಾರಿಸದ ಕಾರಣ, ಅವರು ರಸ್ತೆ ಮೂಲಕವೇ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ನಿರ್ಧರಿಸಿದರು, ಅದಕ್ಕೆ ಸುಮಾರು 2 ಗಂಟೆಗೂ ಅಧಿಕ ಸಮಯ ಹಿಡಿಯುತ್ತಿತ್ತು.ಪಂಜಾಬ್ ಪೊಲೀಸ್ ಡಿಜಿಪಿ ಅವರಿಂದ ಅಗತ್ಯ ಭದ್ರತಾ ಏರ್ಪಾಡುಗಳನ್ನು ಖಾತ್ರಿಪಡಿಸಿಕೊಂಡ ನಂತರ ಅವರು ರಸ್ತೆ ಮೂಲಕ ಪ್ರಯಾಣ ಆರಂಭಿಸಿದರು.

ಆದರೆ ಹುಸ್ಸೈನಿವಾಲಾದ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಸುಮಾರು 30 ಕಿಲೋಮೀಟರ್ ದೂರ ಇದೆ ಎನ್ನುವಾಗ ಪ್ರಧಾನಮಂತ್ರಿಗಳ ಬೆಂಗಾವಲು ವಾಹನ ಮೇಲುಸೇತುವೆ ತಲುಪಿದಾಗ, ಕೆಲವು ಪ್ರತಿಭಟನಾಕಾರರು ರಸ್ತೆಯನ್ನು ಅಡ್ಡಗಟ್ಟಿದ್ದು ( ಬ್ಲಾಕ್ ಮಾಡಿದ್ದು) ಕಂಡು ಬಂದಿತು.

ಪ್ರಧಾನಮಂತ್ರಿ ಸುಮಾರು 15-20 ನಿಮಿಷಗಳ ಕಾಲ ಮೇಲುಸೇತುವೆಯ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯವರ ಭದ್ರತೆಯಲ್ಲಿ ದೊಡ್ಡ ಲೋಪವಾಗಿದೆ.

ಪ್ರಧಾನಮಂತ್ರಿಯವರ ವೇಳಾಪಟ್ಟಿ ಮತ್ತು ಪ್ರಯಾಣ ಯೋಜನೆಯನ್ನು ಮುಂಚಿತವಾಗಿಯೇ ಪಂಜಾಬ್ ಸರ್ಕಾರಕ್ಕೆ ತಿಳಿಸಲಾಗಿತ್ತು. ನಿಗದಿಯಂತೆ, ಅವರು ಪ್ರಯಾಣಕ್ಕೆ,ಭದ್ರತೆಗೆ ಅಗತ್ಯ ಏರ್ಪಾಡುಗಳನ್ನು ಮಾಡಬೇಕಿತ್ತು ಮತ್ತು ಸಂಕಷ್ಟ ಯೋಜನೆಯನ್ನೂ ಸಹ ಸಿದ್ಧಪಡಿಸಿಕೊಳ್ಳಬೇಕಿತ್ತು. ಸಂಕಷ್ಟ ಯೋಜನೆಯ ದೃಷ್ಟಿಯಿಂದ ಪಂಜಾಬ್ ಸರ್ಕಾರ ರಸ್ತೆ ಮೂಲಕ ಸುರಕ್ಷಿತ ಸಂಚಾರಕ್ಕೆ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು, ಆದರೆ ಆ ರೀತಿ ನಿಯೋಜನೆ ಮಾಡದಿದ್ದುದು ಸ್ಪಷ್ಟವಾಗಿ ಕಂಡುಬಂದಿತು.

ಈ ಭದ್ರತಾ ಲೋಪದ ನಂತರ ಬಟಿಂಡಾ ವಿಮಾನ ನಿಲ್ದಾಣಕ್ಕೆ ಮರಳಿ ಹೋಗಲು ನಿರ್ಧರಿಸಲಾಯಿತು.

ಈ ಗಂಭೀರ ಭದ್ರತಾ ಲೋಪವನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್ ಎ) ಪಂಜಾಬ್ ಸರ್ಕಾರದಿಂದ ವಿಸ್ತೃತ ವರದಿ ಕೇಳಿದೆ. ಅಲ್ಲದೆ, ಈ ಲೋಪಕ್ಕೆ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಮತ್ತು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+