Breaking: ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ
ಚಂಡೀಗಢ, ಜನವರಿ 08: ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಶನಿವಾರ ಘೋಷಿಸಿದೆ.
ಗೋವಾ, ಪಂಜಾಬ್, ಮಣಿಪುರ್, ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶ ಸೇರಿದಂತೆ ಪಂಚರಾಜ್ಯಗಳಿಗೆ ಚುನಾವಣಾ ದಿನಾಂಕವನ್ನು ಘೋಷಿಸಲಾಗಿದೆ. ಪಂಜಾಬ್ ವಿಧಾನಸಭಾ ಚುನಾವಣೆಯು ಫೆಬ್ರವರಿ 14ರಂದು ಸೋಮವಾರ ನಡೆಯಲಿದೆ. ಒಟ್ಟು ಏಳು ಹಂತಗಳಲ್ಲಿ ಪಂಚರಾಜ್ಯ ಚುನಾವಣೆ ನಡೆಯಲಿದೆ.
ಜನವರಿ 15ರವರೆಗೆ ಯಾವುದೇ ರೋಡ್ ಶೋ, ಸೈಕಲ್ ಜಾಥಾ ಸೇರಿದಂತೆ ಯಾವುದೇ ಮೆರವಣಿಗೆಯನ್ನು ಮಾಡುವಂತಿಲ್ಲ, ಹಾಗೆಯೇ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ಯಾವುದೇ ಮೆರವಣಿಗೆ, ಸಭೆಗಳನ್ನು ನಡೆಸುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಜನವರಿ 21ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನಾಂಕವಾಗಿರುತ್ತದೆ, ಜನವರಿ 29ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ, ನಾಮಪತ್ರ ಹಿಂಪಡೆಯಲು ಜನವರಿ 31 ಕೊನೆಯ ದಿನಾಂಕವಾಗಿರುತ್ತದೆ.
ಸುವಿಧಾ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ ನಾಮಪತ್ರ ಸಲ್ಲಿಕೆ ಮಾಡಬಹುದು. 5 ರಾಜ್ಯಗಳ ಚುನಾವಣಾ ನೀತಿಸಂಹಿತೆ ಇಂದಿನಿಂದಲೇ ಜಾರಿ ಆಗಲಿದೆ. ಚುನಾವಣಾ ಸಿಬ್ಬಂದಿ 2 ಡೋಸ್ ಲಸಿಕೆ ಪಡೆದಿರಬೇಕು ಎಂದು ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಸುದ್ದಿಗೋಷ್ಠಿಯಲ್ಲಿ ತಿಳಿಸಲಾಗಿದೆ.
ಚುನಾವಣೆಗೆ 900 ವೀಕ್ಷಕರ ನೇಮಕ ಮಾಡಲಾಗುವುದು. ಅಭ್ಯರ್ಥಿಗಳು ತಮ್ಮ ಅಪರಾಧ ಹಿನ್ನೆಲೆಯನ್ನು ತಿಳಿಸಬೇಕು. ಕ್ರಿಮಿನಲ್ ಹಿನ್ನೆಲೆಯ ಅಭ್ಯರ್ಥಿ ಬಗ್ಗೆ ಪಕ್ಷ ಕಾರಣ ನೀಡಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಾಮಪತ್ರವನ್ನು ಸಲ್ಲಿಸಬಹುದು.
ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಗ್ಗೆ ಮಾಹಿತಿ ಪ್ರಕಟಿಸಬೇಕು. ಆಯಾ ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಬೇಕು. KNOW YOUR CANDIDATE ಆ್ಯಪ್‌ನಲ್ಲಿ ಮಾಹಿತಿ ನೀಡಬೇಕು.
ಪಕ್ಷದ ವೆಬ್ಸೈಟ್ನ ಮುಖಪುಟದಲ್ಲಿ ಮಾಹಿತಿ ನೀಡಬೇಕು. ಗೋವಾ, ಮಣಿಪುರದಲ್ಲಿ ಚುನಾವಣಾ ವೆಚ್ಚ 28 ಲಕ್ಷ ರೂ. ಆಗಿರಲಿದೆ. ಉತ್ತರಾಖಂಡ್, ಉತ್ತರ ಪ್ರದೇಶ, ಪಂಜಾಬ್‌ನಲ್ಲಿ 40 ಲಕ್ಷ ಆಗಿರಲಿದೆ ಎಂದು ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚವನ್ನು ಆಯೋಗ ಮಿತಿಗೊಳಿಸಿದೆ.
ಚುನಾವಣೆಯಲ್ಲಿ ಒಟ್ಟು 18.34 ಕೋಟಿ ಮತದಾರರು ಮತದಾನ ಮಾಡಲಿದ್ದಾರೆ. 24.9 ಲಕ್ಷ ಜನರು ಮೊದಲ ಬಾರಿ ಮತ ಚಲಾಯಿಸ್ತಿದ್ದಾರೆ. ಕೊರೊನಾ ಮಾರ್ಗಸೂಚಿ ಪಾಲಿಸಿ ಚುನಾವಣೆ ನಡೆಸುತ್ತೇವೆ.
ಮತಗಟ್ಟೆಗಳನ್ನು ಗ್ರೌಂಡ್ ಫ್ಲೋರ್‌ನಲ್ಲಿ ಸ್ಥಾಪಿಸಲಾಗುತ್ತದೆ. ಥರ್ಮಲ್ ಸ್ಕ್ಯಾನಿಂಗ್, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುತ್ತದೆ. 5 ರಾಜ್ಯಗಳಲ್ಲಿ 2,15,368 ಮತಗಟ್ಟೆ ಸ್ಥಾಪಿಸಲಾಗುವುದು. ಪ್ರತಿ ಮತಗಟ್ಟೆಯಲ್ಲಿ 1,250 ಜನ ಮತ ಚಲಾಯಿಸಬಹುದು. 80 ವರ್ಷ ಮೇಲ್ಪಟ್ಟವರು, ವಿಕಲ ಚೇತನರು, ಕೊರೊನಾ ಸೋಂಕಿತರಿಗೆ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಮಾಹಿತಿ ನೀಡಿದ್ದಾರೆ.
ಸಾರ್ವಜನಿಕ ಸಭೆಗಳಿಗೆ ಜನವರಿ 15ರವರೆಗೆ ನಿರ್ಬಂಧ ಇರಲಿದೆ. ಗೆಲುವಿನ ಬಳಿಕ ಸಾರ್ವಜನಿಕ ಸಂಭ್ರಮಾಚರಣೆಗೆ ಅವಕಾಶವಿಲ್ಲ. ಮನೆ ಮನೆ ಪ್ರಚಾರಕ್ಕೆ ಐವರು ಮಾತ್ರ ತೆರಳಲು ಅವಕಾಶ ಇರಲಿದೆ. ರಾತ್ರಿ 8 ಗಂಟೆ ಬಳಿಕ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹಾಕಲಾಗಿದೆ. ದ್ವೇಷದ ಭಾಷಣ ಮಾಡುವಂತಿಲ್ಲ ಎಂದು ಸೂಚಿಸಲಾಗಿದೆ.
ಮತದಾನ ಅವಧಿ 1 ಗಂಟೆ ವಿಸ್ತರಿಸಲಾಗುವುದು. ರಾಜಕೀಯ ಪಕ್ಷಗಳು ವರ್ಚುವಲ್ ರಾಲಿ ಮಾಡಲು ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿದೆ. ಪಾದಯಾತ್ರೆ, ರೋಡ್‌ಶೋ, ರಾಲಿಗಳಿಗೆ, ಸಾರ್ವಜನಿಕ ಸಭೆಗಳಿಗೆ ಅವಕಾಶವಿಲ್ಲ.
ಮಣಿಪುರ, ಪಂಜಾಬ್, ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಪ್ರಕಟ ಮಾಡಲಾಗಿದೆ. 5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ.
ಎಲ್ಲಾ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಮಾರ್ಚ್ 10ರಂದು ಪ್ರಕಟವಾಗಲಿದೆ. ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದರೆ, ಪಂಜಾಬ್‌ನಲ್ಲಿ 117, ಉತ್ತರಾಖಂಡ್‌ನಲ್ಲಿ 70, ಮಣಿಪುರದಲ್ಲಿ 60 ಮತ್ತು ಪುಟಾಣಿ ರಾಜ್ಯ ಗೋವಾದಲ್ಲಿ 40 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಈ ಐದು ರಾಜ್ಯಗಳ ಚುನಾವಣೆಯಲ್ಲಿ ಒಟ್ಟು 18.34 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸುವ ಅಧಿಕಾರ ಹೊಂದಿದ್ದಾರೆ. ಇವರಲ್ಲಿ 8.55 ಕೋಟಿ ಮಹಿಳಾ ಮತದಾರರು ಇದ್ದಾರೆ. 24.9 ಲಕ್ಷ ಹೊಸ ಮತದಾರರೂ ನೋಂದಾವಣಿ ಮಾಡಿಕೊಂಡಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತರು ಅಂಕಿ-ಅಂಶ ನೀಡಿದರು.
ಐದು ರಾಜ್ಯಗಳಲ್ಲಿ ವ್ಯಾಪಕ ಸಿದ್ಧತೆಗಳೊಂದಿಗೆ ಗರಿಷ್ಠ ಮತದಾರರ ಭಾಗವಹಿಸುವಿಕೆಯನ್ನು ಗುರಿಯಾಗಿಸಿಕೊಂಡು ಕೋವಿಡ್ ಸುರಕ್ಷಿತ ಚುನಾವಣೆಗಳನ್ನು ನಡೆಸುವ ಉದ್ದೇಶವನ್ನು ನಾವು ಹೊಂದಿದ್ದೇವೆ ಎಂದು ಆಯುಕ್ತರು ತಿಳಿಸಿದರು.
ಅಭ್ಯರ್ಥಿಗಳಿಗೆ ಆನ್‌ಲೈನ್ ಮೂಲಕ ನಾಮಪತ್ರ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಮತ್ತು 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಹಾಗೂ ಕೊರೊನಾ ಸೋಂಕಿತ ಮತದಾರರು ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬಹುದು ಎಂದು ಆಯುಕ್ತರು ಹೇಳಿದರು.
ಮೊದಲ ಹಂತ - ಉತ್ತರ ಪ್ರದೇಶ
ಮತದಾನ - ಫೆಬ್ರವರಿ 10
2ನೇ ಹಂತ - ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ್, ಗೋವಾ
ಮತದಾನ - ಫೆಬ್ರವರಿ 14
3ನೇ ಹಂತ - ಉತ್ತರ ಪ್ರದೇಶ
ಮತದಾನ - ಫೆಬ್ರವರಿ 20
4ನೇ ಹಂತ - ಉತ್ತರ ಪ್ರದೇಶ
ಮತದಾನ - ಫೆಬ್ರವರಿ 23
5ನೇ ಹಂತ - ಉತ್ತರ ಪ್ರದೇಶ, ಮಣಿಪುರ ಮೊದಲ ಹಂತ
ಮತದಾನ - ಫೆಬ್ರವರಿ 27
6ನೇ ಹಂತ - ಉತ್ತರ ಪ್ರದೇಶ, ಮಣಿಪುರ 2ನೇ ಹಂತ
ಮತದಾನ - ಮಾರ್ಚ್ 3
7ನೇ ಹಂತ - ಉತ್ತರ ಪ್ರದೇಶ
ಮತದಾನ - ಮಾರ್ಚ್ 7
ಫಲಿತಾಂಶ - ಮಾರ್ಚ್ 10
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications