Breaking; ಲೂಧಿಯಾನ ಕೋರ್ಟ್‌ನಲ್ಲಿ ಸ್ಫೋಟ, 2 ಸಾವು
ಚಂಡೀಗಢ್, ಡಿಸೆಂಬರ್ 23; ಪಂಜಾಬ್ ರಾಜ್ಯದ ಲೂಧಿಯಾನದ ನ್ಯಾಯಾಲಯದಲ್ಲಿ ಸ್ಫೋಟ ಸಂಭವಿಸಿದೆ. ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.
ಗುರುವಾರ ಮಧ್ಯಾಹ್ನ 12.22ರ ಸುಮಾರಿಗೆ ಲೂಧಿಯಾನ ನ್ಯಾಯಾಲಯದ ಆವರಣದಲ್ಲಿ ಸ್ಫೋಟ ಸಂಭವಿಸಿದೆ. ನ್ಯಾಯಾಲಯದ 2ನೇ ಮಹಡಿಯಲ್ಲಿರುವ ಬಾತ್ ರೂಂನಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಬಾತ್ ರೂಂ ಅಕ್ಕಪಕ್ಕದ ಕೊಠಡಿಗಳ ಗೋಡೆಗೆ ಹಾನಿಯಾಗಿದೆ. ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಪೊಲೀಸರು ಸ್ಥಳವನ್ನು ಸುತ್ತುವರೆದಿದ್ದು, ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.

ಲೂಧಿಯಾನದ ನ್ಯಾಯಾಲಯ ನಗರದ ಹೃದಯಭಾಗದಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಸಮೀಪವೇ ಇದೆ. ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದು, 4 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಟ್ವೀಟ್ ಮಾಡಿದ್ದು, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಸ್ಫೋಟದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಕ್ಕೆ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳಿಂದ ಬೆದರಿಕೆ ಇದೆ. 25 ಸಿಆರ್‌ಪಿಎಫ್ ಮತ್ತು ದ್ರೋಣ್ ಧ್ವಂಸ ಮಾಡುವ ಪಡೆಯನ್ನು ಗಡಿಯಲ್ಲಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, "ನಾನು ಲೂಧಿಯಾನಕ್ಕೆ ಭೇಟಿ ನೀಡುತ್ತೇನೆ. ಚುನಾವಣೆ ಹತ್ತಿರವಾಗುತ್ತಿರುವಾಗ ಕೆಲವು ಸಮಾಜ ಘಾತಕ ಶಕ್ತಿಗಳು ಇಂತಹ ದುಷ್ಕೃತ್ಯ ನಡೆಸುತ್ತಿವೆ. ಸರ್ಕಾರ ಅಲರ್ಟ್ ಆಗಿದೆ" ಎಂದರು.
ಲೂಧಿಯಾನ ಎಸ್ಪಿ ಘಟನೆ ಬಗ್ಗೆ ಮಾಹಿತಿ ನೀಡಿದ್ದು, "ನ್ಯಾಯಾಲಯದ 2ನೇ ಮಹಡಿಯಲ್ಲಿರುವ ದಾಖಲೆಗಳ ರೂಂ ಸಮೀಪ ಸ್ಫೋಟ ಸಂಭವಿಸಿದೆ. ಬಾಂಬ್ ನಿಷ್ಕ್ರಿಯ ದಳ, ವಿಧಿ ವಿಜ್ಞಾನ ತಂಡದವರು ಚಂಡೀಗಢ್‌ನಿಂದ ಆಗಮಿಸುತ್ತಿದ್ದಾರೆ" ಎಂದು ಹೇಳಿದರು.
Disturbing news of a blast at Ludhiana court complex. Saddened to know about the demise of 2 individuals, Praying for the recovery of those injured. @PunjabPoliceInd must get to the bottom of this.
— Capt.Amarinder Singh (@capt_amarinder) December 23, 2021
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications