Breaking: ರಾಜೀನಾಮೆ ನೀಡಲು ಸಜ್ಜಾದ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ

ಪಂಜಾಬ್‌ನಲ್ಲಿ ಮತ ಎಣಿಕೆ ನಡೆಯುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ. ಆರಂಭಿಕ ಪ್ರವೃತ್ತಿಗಳು ಚಮಕೌರ್ ಸಾಹಿಬ್ ಮತ್ತು ಭದೌರ್‌ನಿಂದ ಸ್ಪರ್ಧಿಸಿದ ಎರಡೂ ಕ್ಷೇತ್ರಗಳಿಂದ ಚರಣಜಿತ್ ಸಿಂಗ್ ಚನ್ನಿ ಹಿನ್ನಡೆ ಅನುಭವಿಸಿದ್ದಾರೆ.

ಎರಡು ತಿಂಗಳಲ್ಲಿ ಒಟ್ಟು 690 ವಿಧಾನಸಭಾ ಕ್ಷೇತ್ರಗಳು ಮತದಾನವಾಗಿದ್ದು, ಯುಪಿಯಲ್ಲಿ ಗರಿಷ್ಠ (403 ಸ್ಥಾನಗಳು) ನಂತರ ಪಂಜಾಬ್ (117), ಉತ್ತರಾಖಂಡ್ (70), ಮಣಿಪುರ (60), ಮತ್ತು ಗೋವಾ (40)ದ ಮುಂದಿನ ಸರ್ಕಾರ ಯಾವುದು ಎಂದು ಮಾರ್ಚ್ 10 ರಂದು ನಿರ್ಧಾರವಾಗಲಿದೆ. ಸದ್ಯದ ಟ್ರೆಂಡ್ ನಂತೆ ಪಂಜಾಬ್ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಿನ್ನಡೆ ಅನುಭವಿಸಿದ್ದು, ಆಮ್ ಆದ್ಮಿ ಪಕ್ಷ ಮ್ಯಾಜಿಕ್ ನಂಬರ್ 59 ದಾಟಿ ಮುನ್ನುಗ್ಗುತ್ತಿದ್ದು, ಮೊಟ್ಟ ಮೊದಲ ಬಾರಿಗೆ ಅಧಿಕಾರ ಸ್ಥಾಪಿಸುವ ಉತ್ಸಾಹದಲ್ಲಿದೆ. ಈ ನಡುವೆ ಸಿಎಂ ಚರಣ್ ಜೀತ್ ಸಿಂಗ್ ಚನ್ನಿ ರಾಜೀನಾಮೆ ನೀಡಲು ಸಜ್ಜಾಗಿರುವ ಸುದ್ದಿ ಬಂದಿದೆ. ಸಂಪೂರ್ಣ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಚನ್ನಿ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಚನ್ನಿ ಅವರು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಸದ್ಯ ಚಂಡೀಗಢದ ತಮ್ಮ ನಿವಾಸದಲ್ಲಿ ಚನ್ನಿ ಇದ್ದು, ಫಲಿತಾಂಶದತ್ತ ಗಮನ ಹರಿಸಿದ್ದಾರೆ.

Punjab CM Charanjit Singh Channi likely to resign today

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59.

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 10ರಂದು ಪಂಚ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?

ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+