Punjab NewsX-Polstrat Exit Poll 2022: ಯಾರಿಗೆ ಗದ್ದುಗೆ?

ಚಂಡೀಗಢ, ಮಾರ್ಚ್ 07: ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಚುನಾವಣೆಯ ಫಲಿತಾಂಶವು ಮಾರ್ಚ್ 10ರಂದು ಪ್ರಕಟವಾಗಲಿದೆ. ಇದಕ್ಕೂ ಮುನ್ನ ಹಲವಾರು ಮಾಧ್ಯಮಗಳು, ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆಯನ್ನು ಪ್ರಕಟ ಮಾಡಿದೆ. NewsX-Polstrat ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಆಮ್‌ ಆದ್ಮಿ ಪಕ್ಷ (ಎಎಪಿ) ಪಕ್ಷ ಇತರೆ ಪಕ್ಷಗಳಿಗೂ ಅಧಿಕ ಸ್ಥಾನ ಪಡೆದು ಸರ್ಕಾರ ರಚನೆ ಮಾಡುವ ಸಾಧ್ಯತೆ ಇದೆ.

ಎಎಪಿ ಪಕ್ಷವು 56-61 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದು ಕಾಂಗ್ರೆಸ್‌ 24-29 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. 22-26 ಸ್ಥಾನಗಳಲ್ಲಿ ಶಿರೋಮಣಿ ಅಕಾಲಿದಳವು ಜಯ ಗಳಿಸಲಿದೆ. ಇನ್ನುಳಿದಂತೆ ಬಿಜೆಪಿಯು ಬರೀ 01-06 ಕ್ಷೇತ್ರದಲ್ಲಿ ವಿಜಯ ಸಾಧಿಸಲಿದೆ. ಇತರೆ ಪಕ್ಷಗಳು 3 ಕ್ಷೇತ್ರದಲ್ಲಿ ಗೆಲುವು ಪಡೆಯುವ ಸಾಧ್ಯತೆ ಇದೆ ಎಂದು NewsX-Polstrat ಚುನಾವಣೋತ್ತರ ಸಮೀಕ್ಷೆಯು ಹೇಳಿದೆ.

NewsX-Polstrat ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಆಮ್‌ ಆದ್ಮಿ ಪಕ್ಷವು (ಎಎಪಿ) ಪಂಜಾಬ್‌ನಲ್ಲಿ ಸರ್ಕಾರವನ್ನು ರಚನೆ ಮಾಡುವ ಸಾಧ್ಯತೆ ಇದೆ. ಇನ್ನು ಎಎಪಿ ಶೇಕಡ 41.2ರಷ್ಟು, ಕಾಂಗ್ರೆಸ್‌ ಶೇಕಡ 23.2ರಷ್ಟು ಮತವನ್ನು ಪಡೆಯಲಿದೆ. ಎಸ್‌ಎಡಿ ಶೇಕಡ 22.5ರಷ್ಟು ಮತವನ್ನು ಪಡೆಯಲಿದೆ. ಇನ್ನುಳಿದಂತೆ ಬಿಜೆಪಿಯು ಶೇಕಡ 7.2ರಷ್ಟು ಮತದಾನ ಪಡೆಯಲಿದೆ. ಇತರೆ ಪಕ್ಷಗಳು ಶೇಕಡ 5.9ರಷ್ಟು ಮತದಾನ ಗಳಿಸಲಿದೆ.

Punjab Election NewsX-Polstrat Exit Poll Results 2022 in Kannada

ಪಂಜಾಬ್‌ನಲ್ಲಿ ಒಂದೇ ಹಂತದಲ್ಲಿ ಚುನಾವಣೆ

ಪಂಜಾಬ್‌ನಲ್ಲಿ ಒಟ್ಟು 117 ವಿಧಾನಸಭೆ ಕ್ಷೇತ್ರಗಳು ಇದೆ. ಫೆಬ್ರವರಿ 20ರಂದು ಎಲ್ಲಾ ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಸಲಾಗಿದೆ. ಮಾರ್ಚ್ 10ರಂದು ಇಲ್ಲಿ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಪ್ರಸ್ತುತ ಕಾಂಗ್ರೆಸ್‌ ಕೈಯಲ್ಲಿ ಪಂಜಾಬ್‌ ಅಧಿಕಾರ ಇದ್ದು ಸಮೀಕ್ಷೆಗಳು ಎಎಪಿ ಗದ್ದುಗೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಿದೆ.

ಮಾ.10ರಂದು ಪಂಚರಾಜ್ಯಗಳ ಚುನಾವಣಾ ಭವಿಷ್ಯ

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಮಾರ್ಚ್ 10ರಂದು ಪಂಚ ರಾಜ್ಯಗಳಲ್ಲಿ ಮತ ಎಣಿಕೆ ನಡೆಯಲಿದೆ.

ಕಳೆದ 2017ರಲ್ಲಿ ಪಂಜಾಬ್‌ ಮತದಾರರ ತೀರ್ಪು ಏನಿತ್ತು?

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59.

ಚುನಾವಣಾಪೂರ್ವ ಸಮೀಕ್ಷೆ ಹೇಳಿದ್ದೇನು?

ಪಂಜಾಬ್ ವಿಧಾನಸಭೆ ಚುನಾವಣೆ 2022ರಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುವ ಮುನ್ಸೂಚನೆಯನ್ನು NewsX-Polstrat ಚುನಾವಣಪೂರ್ವ ಸಮೀಕ್ಷೆ ಹೇಳಿದೆ. ಪೋಲ್ ಸ್ಟ್ರಾಟ್-ನ್ಯೂಸ್ ಎಕ್ಸ್ ನಡೆಸಿರುವ ಚುನಾವಣಾಪೂರ್ವ ಸಮೀಕ್ಷೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ವ್ಯಾಪ್ತಿ ವಿಸ್ತರಿಸಿಕೊಳ್ಳಲಿದೆ ಎಂದು ಹೇಳಿದೆ. ಪಂಜಾಬ್ ವಿಧಾನಸಭೆ 117 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಶೇ.35.20ರಷ್ಟು ಮತಗಳೊಂದಿಗೆ 40 ರಿಂದ 45 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದೆ. ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ ಪಂಜಾಬ್ ವರೆಗೆ ಹರಡಲಿದೆ. ಪಂಜಾಬ್‌ನಲ್ಲಿ ತನ್ನ ಸ್ಥಾನವನ್ನು ಗಟ್ಟಿಗೊಳಿಸಲು ಪ್ರಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷವು ಶೇ.38.83ರಷ್ಟು ಮತಗಳೊಂದಿಗೆ 47 ರಿಂದ 52 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಅನ್ನು ಕಡಿಮೆ ಅಂತರದಲ್ಲಿ ಸೋಲಿಸುತ್ತದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಯು ಭವಿಷ್ಯ ನುಡಿದಿದೆ. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+