Punjab Election Result 2022: ಮ್ಯಾಜಿಕ್ ನಂಬರ್ ದಾಟಿ ಎಎಪಿ ಮುನ್ನಡೆ
ಚಂಡೀಗಢ, ಮಾರ್ಚ್ 10: ಚುನಾವಣೋತ್ತರ ಸಮೀಕ್ಷೆಯ ಅಭಿಪ್ರಾಯದಂತೆ ಪಂಜಾಬ್‌ನಲ್ಲಿ ಎಎಪಿ ಗದ್ದುಗೆಯನ್ನು ಪಡೆಯುವತ್ತ ಹೆಜ್ಜೆ ಇರಿಸಿರುವಂತೆ ಕಂಡು ಬಂದಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59 ಆಗಿದ್ದು, ಈ ನಡುವೆ ಎಎಪಿ ಬೆಳಿಗ್ಗೆ 9:52ರ ಸಮಯಕ್ಕೆ 84 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.
#WATCH | Celebrations at AAP's CM candidate Bhagwant Mann's residence in Sangrur as the party crosses the majority mark in Punjab. Mann leading from his seat Dhuri. #PunjabElections2022 pic.twitter.com/nzoJ9QyoJ1
— ANI (@ANI) March 10, 2022
ಪಂಜಾಬ್ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಫಲಿತಾಂಶ ಪ್ರಕಟವಾಗುವ ಮುನ್ನವೇ ಎಎಪಿ ಅಧಿಕಾರ ಪಡೆಯುವ ಭರವಸೆಯನ್ನು ವ್ಯಕ್ತಪಡಿಸಿದೆ. ಅಷ್ಟು ಮಾತ್ರವಲ್ಲದೇ ಆಮ್ ಆದ್ಮಿ ಪಕ್ಷವು ಈಗಾಗಲೇ ಜಿಲೇಬಿ ಸಿದ್ಧಪಡಿಸಿದ್ದಾರೆ. ಪಂಜಾಬ್‌ನಲ್ಲಿ ಪಕ್ಷವು ಬಹುಮತದ ಗಡಿ ದಾಟುತ್ತಿದ್ದಂತೆ ಆಪ್‌ನ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್‌ರ ಸಂಗ್ರೂರ್‌ನಲ್ಲಿರುವ ನಿವಾಸದಲ್ಲಿ ಸಂಭ್ರಮಾಚರಣೆ ಮಾಡಲಾಗುತ್ತಿದೆ. ಮಾನ್ ತಮ್ಮ ಸ್ಥಾನ ಧುರಿಯಿಂದ ಮುನ್ನಡೆಯಲ್ಲಿದ್ದಾರೆ.
ಪಂಜಾಬ್‌ನಲ್ಲಿ ಎಎಪಿ ಮುನ್ನಡೆ ಸಾಧಿಸಿರುವ ನಡುವೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಚನ್ನಿ ಹಿನ್ನಡೆ ಸಾಧಿಸಿದ್ದಾರೆ. ಆರಂಭಿಕವಾಗಿ ಹಾಲಿ ಸಿಎಂ, ಕಾಂಗ್ರೆಸ್‌ನ ಪಂಜಾಬ್ ಸಿಎಂ ಅಭ್ಯರ್ಥಿ ಚರಣ್‌ಜೀತ್ ಸಿಂಗ್ ತಾನು ಸ್ಪರ್ಧಿಸಿರುವ ಭದೌರ್ ಕ್ಷೇತ್ರದಲ್ಲಿ ಹಾಗೂ ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದರು. ಈಗ ಹಿನ್ನೆಡೆ ಸಾಧಿಸಿದ್ದಾರೆ. ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಾ ಹಿನ್ನಡೆ ಸಾಧಿಸಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆ
ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59. (ಒನ್‌ಇಂಡಿಯಾ ಸುದ್ದಿ)
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
Vijay: ಇದು ತಲೆಮಾರಿನ ಬದಲಾವಣೆಗಾಗಿ ನಡೆಯುತ್ತಿರುವ ಚುನಾವಣೆ: ಕಾರ್ಯಕರ್ತರಿಗೆ ದಳಪತಿ ವಿಜಯ್ ವಿಶೇಷ ಕರೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ












Click it and Unblock the Notifications