Punjab Election Result 2022: ಎರಡು ಕ್ಷೇತ್ರದಲ್ಲೂ ಸಿಎಂ ಚನ್ನಿ ಮುನ್ನಡೆ

ಚಂಡೀಗಢ, ಮಾರ್ಚ್ 10: ಪಂಜಾಬ್‌ ಮುಖ್ಯಂಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ ಅವರು ತಾನು ಸ್ಪರ್ಧೆ ಮಾಡಿದ ಎರಡು ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಿದ್ದಾರೆ. ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಬೆಳಗ್ಗೆ 8.35ರ ಹೊತ್ತಿಗೆ ತಾವು ಸ್ಪರ್ಧಿಸಿದ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

58 ವರ್ಷದ ಚನ್ನಿ, ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದು, ಸೆಪ್ಟೆಂಬರ್‌ನಲ್ಲಿ ಅಮರಿಂದರ್ ಸಿಂಗ್ ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿ ಸ್ಥಾನವನ್ನು ತೊರೆದ ಬಳಿಕ ಪಂಜಾಬ್‌ನಲ್ಲಿ ಉನ್ನತ ಹುದ್ದೆಯನ್ನು ಪಂಜಾಬ್‌ನಲ್ಲಿ ಉನ್ನತ ಹುದ್ದೆಯನ್ನು ಪಡೆದುಕೊಂಡಿದ್ದಾರೆ.

ಭದೌರ್ ಕ್ಷೇತ್ರದಲ್ಲಿ ಹಾಗೂ ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಪಂಜಾಬ್‌ ಮುಖ್ಯಂಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ ಸ್ಪರ್ಧಿಸುತ್ತಿದ್ದು, ಎರಡೂ ಕ್ಷೇತ್ರದಲ್ಲೂ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ ಕೂಡಾ ಚರಣ್‌ಜೀತ್‌ ಸಿಂಗ್‌ ಚನ್ನಿ ಆಗಿದ್ದಾರೆ.

Punjab Election Result 2022: CM Charanjit Singh Channi is leading on both seats

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+