ಪಂಜಾಬ್‌ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‌ ಶಾಸಕಾಂಗ ಸಭೆ

ಚಂಡೀಗಢ, ಮಾರ್ಚ್ 10: ಪಂಜಾಬ್‌ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯು ಮಾರ್ಚ್ 10ರಂದು ಬೆಳಿಗ್ಗೆ ಎಂಟು ಗಂಟೆ ವೇಳೆಗೆ ಆರಂಭವಾಗಲಿದೆ. ಈ ಚುನಾವಣೆಯ ಫಲಿತಾಂಶ ಬಂದ ಬೆನ್ನಲ್ಲೇ ಪಂಜಾಬ್‌ ಕಾಂಗ್ರೆಸ್‌ನ ಮೊದಲ ಶಾಸಕಾಂಗ ಸಭೆ ನಡೆಯಲಿದೆ.

ಈ ಬಗ್ಗೆ ಬುಧವಾರ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಮಾಹಿತಿ ನೀಡಿದ್ದಾರೆ. ಪಂಜಾಬ್‌ ವಿಧಾನಸಭೆಯ 117 ಕ್ಷೇತ್ರಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಈ ನಡುವೆ ಪಂಜಾಬ್ ಕಾಂಗ್ರೆಸ್‌ನ ಮೊದಲ ಶಾಸಕಾಂಗ ಸಭೆಯು ನಡೆಸಲು ಪಂಜಾಬ್‌ ಕಾಂಗ್ರೆಸ್‌ ಸಮಿತಿ ನಿರ್ಧಾರ ಮಾಡಿದೆ.

"ಮಾರ್ಚ್ 10ರಂದು ಕಾಂಗ್ರೆಸ್‌ನ ಮೊದಲ ಶಾಸಕಾಂಗ ಸಭೆಯು ನಡೆಯಲಿದೆ. ಕಾಂಗ್ರೆಸ್‌ ಭವನದಲ್ಲಿ ಸಭೆಯು ಸಂಜೆ 5 ಗಂಟೆಗೆ ನಡೆಯಲಿದೆ. ಈ ಸಭೆಗೆ ಎಲ್ಲಾ ಹೊಸ ಚುನಾಯಿತ ಶಾಸಕರು ಹಾಜರಾಗಬೇಕು," ಎಂದು ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ತಿಳಿಸಿದ್ದಾರೆ.

 Punjab Election Result 2022: Punjab Congress calls first legislative party meeting After Result

ಇನ್ನು ಹಿರಿಯ ನಾಯಕರುಗಳಾದ ಅಜಯ್‌ ಮಕೇನ್‌ ಹಾಗೂ ಪವನ್‌ ಖೇರಾ ಜೊತೆಯಲ್ಲಿ ಕುಳಿತಿರುವ ಚಿತ್ರವನ್ನು ಕೂಡಾ ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಹಂಚಿಕೊಂಡಿದ್ದಾರೆ. ಇನ್ನು ಈ ಸಭೆಗೆ ಹಾಲಿ ಮುಖ್ಯಮಂತ್ರಿ ಚರಣ್‌ಜೀತ್‌ ಸಿಂಗ್‌ ಚನ್ನಿ ಹಾಜರಾಗುವುದಿಲ್ಲ ಎಂದು ವರದಿಯಾಗಿದೆ.

ಏತಕ್ಕಾಗಿ ಈ ದಿಡೀರ್‌ ಸಭೆ?

ಈ ದಿಡೀರ್‌ ಸಭೆಯು ಪಕ್ಷವು ಚುನಾವಣೆಯಲ್ಲಿ ಗೆಲ್ಲಲಿದೆ ಎಂದು ಕಾಂಗ್ರೆಸ್‌ ಭರವಸೆಯನ್ನು ಹೊಂದಿದೆ ಎಂಬ ಪ್ರತೀಕವಾಗಿದೆ ಎಂದು ಮೂಲಗಳು ತಿಳಿಸಿದೆ. ಇನ್ನು ಕಾಂಗ್ರೆಸ್‌ ಪಕ್ಷಕ್ಕೆ ಸರ್ಕಾರವನ್ನು ರಚನೆ ಮಾಡುವಷ್ಟು ಕ್ಷೇತ್ರದಲ್ಲಿ ಗೆಲುವು ಸಾಧಿಸದಿದ್ದರೆ ಕೂಡಲೇ ಸ್ವತಂತ್ರ ಅಭ್ಯರ್ಥಿಗಳನ್ನು ತನ್ನ ಪಕ್ಷಕ್ಕೆ ಎಳೆದುಕೊಳ್ಳುವ ಪ್ರಯತ್ನ ಮಾಡಲಿದೆ ಎಂದು ಕೂಡಾ ಮೂಲಗಳು ಹೇಳಿದೆ.

ಪಂಜಾಬ್‌ನ 117 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸಲಾಗಿದೆ. ಪಂಜಾಬ್‌ ವಿಧಾನಸಭೆ ಚುನಾವಣೆಯು ಫೆಬ್ರವರಿ 20ರಂದು ನಡೆದಿದೆ. ಪಂಜಾಬ್‌ ಹೊರತಾಗಿ ನಾಲ್ಕು ರಾಜ್ಯಗಳಲ್ಲೂ ವಿಧಾನಸಭೆ ಚುನಾವಣೆ ನಡೆದಿದೆ. ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ ಮತ್ತು ಮಣಿಪುರದಲ್ಲೂ ಚುನಾವಣೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3, 7 ರಂದು ಚುನಾವಣೆ ನಡೆದಿದ್ದು ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.

2017 ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ, 117 ವಿಧಾನಸಭೆ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದುಕೊಂಡಿದೆ. ಭಾರತೀಯರ ಜನತಾ ಪಾರ್ಟಿ (ಬಿಜೆಪಿ) ಕೇವಲ ಮೂರು ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಶಿರೋಮಣಿ ಅಕಾಲಿದಳವು ಕೇವಲ 15 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮತ್ತೊಂದೆಡೆ, ಎಎಪಿ 20 ಸ್ಥಾನಗಳೊಂದಿಗೆ ಎರಡನೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಲೋಕ ಇನ್ಸಾಫ್‌ ಪಕ್ಷವು ಎರಡು ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಪಂಜಾಬ್‌ನಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 59 ಆಗಿದೆ. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+